ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS
SHIMOGA| ಚಿತ್ರದುರ್ಗದ ಮುರುಘಾ ಮಠದ ಶಿವಮೂರ್ತಿ ಮುರುಘಾ ಸ್ವಾಮೀಜಿಗೆ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಯಶಸ್ವಿಯಾಗಿ ಶಸ್ತ್ರಚಿಕಿತ್ಸೆ (ANGIOGRAM) ನೆರವೇರಿಸಲಾಗಿದೆ. ಸದ್ಯ ಸ್ವಾಮೀಜಿ ಆರೋಗ್ಯವಾಗಿದ್ದಾರೆ.
ಮುರುಘಾ ಸ್ವಾಮೀಜಿಗೆ ಮೆಗ್ಗಾನ್ ಆಸ್ಪತ್ರೆಯಲ್ಲಿ ಆ್ಯಂಜಿಯೋಗ್ರಾಂ (ANGIOGRAM) ಶಸ್ತ್ರಚಿಕಿತ್ಸೆ ನಡೆಸಲಾಯಿತು. ಶಸ್ತ್ರಚಿಕಿತ್ಸೆ (OPERATION) ಯಶಸ್ವಿಯಾಗಿದೆ. ಡಾ.ಪರಮೇಶ್ವರ್ ಮತ್ತು ಡಾ. ಮಹೇಶ್ ಮೂರ್ತಿ ಅವರ ತಂಡ ಚಿಕಿತ್ಸೆ ನಡೆಸಿದರು ಎಂದು ಶಿವಮೊಗ್ಗ ವೈದ್ಯಕೀಯ ವಿಜ್ಞಾನಗಳ ಮಹಾವಿದ್ಯಾಲಯದ ನಿರ್ದೇಶಕ ಡಾ. ವಿರೂಪಾಕ್ಷಪ್ಪ ಮಾಧ್ಯಮಗಳಿಗೆ ತಿಳಿಸಿದರು.
ಶಸ್ತ್ರಚಿಕಿತ್ಸೆ ಬಳಿಕ ಸ್ವಾಮೀಜಿಯನ್ನು ಐಸಿಯುನಲ್ಲಿ ಇರಿಸಲಾಗಿದೆ. 24 ಗಂಟೆ ಅವರ ಆರೋಗ್ಯದ ಮೇಲೆ ನಿಗಾ ವಹಿಸಲಾಗುತ್ತದೆ. ಆ ಬಳಿಕ ಅವರನ್ನು ವಾರ್ಡ್’ಗೆ ವರ್ಗಾಯಿಸಬೇಕೋ ಬೇಡವೊ ಎಂಬುದರ ಕುರಿತು ವೈದ್ಯರು ತೀರ್ಮಾನಿಸಲಿದ್ದಾರೆ. ಸದ್ಯ ಅವರ ಆರೋಗ್ಯ ಸ್ಥಿರವಾಗಿದೆ ಎಂದು ತಿಳಿಸಿದರು.
ಜೈಲಾಧಿಕಾರಿ, ನ್ಯಾಯಾಲಯಕ್ಕೆ ಮಾಹಿತಿ
ಸ್ವಾಮೀಜಿಗೆ ಶಸ್ತ್ರಚಿಕಿತ್ಸೆ ನಡೆಸುವ ಮುನ್ನ ಜೈಲು ಅಧಿಕಾರಿಗಳಿಗೆ ಮಾಹಿತಿ ನೀಡಲಾಯಿತು. ಶಸ್ತ್ರಚಿಕಿತ್ಸೆ ಬಳಿಕವು ಅವರಿಗೆ ತಿಳಿಸಿದ್ದೇವೆ. ಇನ್ನು, ಸ್ವಾಮೀಜಿ ಅವರ ಶಸ್ತ್ರಚಿಕಿತ್ಸೆ ಮತ್ತು ಆರೋಗ್ಯದ ವಿಚಾರವನ್ನು ನ್ಯಾಯಾಲಯಕ್ಕೆ ವರದಿ ಸಲ್ಲಿಸಲಾಗುತ್ತದೆ ಎಂದು ಡಾ. ವಿರೂಪಾಕ್ಷಪ್ಪ ತಿಳಿಸಿದರು.
ಕ್ಲಿಕ್ ಮಾಡಿ ಇದನ್ನೂ ಓದಿ | ಕಾರು, ಬಸ್ಸು ಮುಖಾಮುಖಿ ಡಿಕ್ಕಿ, ಧರ್ಮದರ್ಶಿ ಪಾರು, ಸಹೋದರ ಸಾವು
ADVERTISEMENT
- ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
- ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422
SHIVAMOGGA LIVE WHATSAPP
ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.
LATEST NEWS
- ಆಲ್ಕೊಳ ಬಳಿ ಪೊಲೀಸರ ಕಾರ್ಯಾಚರಣೆ, ಬೈಕ್ ಸಹಿತ ಇಬ್ಬರು ಅರೆಸ್ಟ್, ಕಾರಣವೇನು?

- ಶರಾವತಿ ನಗರದಲ್ಲಿ ಕಾರು ಗಾಜು ಪೀಸ್ ಪೀಸ್ ಕೇಸ್, ಮೂವರು ಅರೆಸ್ಟ್, ಘಟನೆಗೆ ಕಾರಣ ಮನೆ

- ಶಿವಮೊಗ್ಗದಲ್ಲಿ ಏರ್ಟೆಲ್ ಮೊಬೈಲ್ ಟವರ್ನ ಉಪಕರಣ ಕಳವು, ಆಗಿದ್ದೇನು?

- ಶಿವಮೊಗ್ಗ ಕಾಂಗ್ರೆಸ್ ಕಾರ್ಯದರ್ಶಿ ಸೇರಿ ಇಬ್ಬರು 6 ವರ್ಷ ಪಕ್ಷದಿಂದ ಉಚ್ಛಾಟನೆ, ಕಾರಣವೇನು?

- ಬೇಡರ ಹೊಸಹಳ್ಳಿ ಬಳಿ ಚಲಿಸುತ್ತಿದ್ದ ಬಸ್ಸಿನ ಸೀಟಿನಿಂದಲೇ ಹೊರಗೆ ಬಿದ್ದ ಪ್ರಯಾಣಿಕ

About The Editor
ನಿತಿನ್ ಆರ್.ಕೈದೊಟ್ಲು






