ಶಿವಮೊಗ್ಗ ದಸರಾಗೆ ವೈಭವದ ಚಾಲನೆ, ನಾಡದೇವಿಗೆ ಪೂಜೆ ಸಲ್ಲಿಸಿದ ಪದ್ಮಶ್ರೀ ಪುರಸ್ಕೃತೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

 SHIVAMOGGA LIVE NEWS 

SHIMOGA | ಶಿವಮೊಗ್ಗ ದಸರಾಗೆ ಅದ್ಧೂರಿಯಾಗಿ ಚಾಲನೆ ನೀಡಲಾಯಿತು. ಪದ್ಮಶ್ರೀ (PADMASHREE) ಪುರಸ್ಕೃತೆ ತುಳಸಿ ಗೌಡ ಅವರು ನಾಡಹಬ್ಬಕ್ಕೆ ಚಾಲನೆ ನೀಡಿದರು.

Shimoga Nanjappa Hospital

ನಗರದ ಕೋಟೆ ಶ್ರೀ ಚಂಡಿಕಾ ದುರ್ಗಾ ಪರಮೇಶ್ವರಿ ದೇವ್ಥಾನದ ಆವರಣದಲ್ಲಿ ನಾಡ ದೇವಿ ಚಾಮುಂಡೇಶ್ವರಿಯನ್ನು ಪ್ರತಿಷ್ಠಾಪನೆ ಮಾಡಿ, ಪೂಜೆ ಸಲ್ಲಿಸಲಾಯಿತು. ಬಳಿಕ ಪದ್ಮಶ್ರೀ (PADMASHREE) ಪುರಸ್ಕೃತೆ ತುಳಸಿ ಗೌಡ ಅವರು ದೀಪ ಬೆಳಗಿ ನಾಡಹಬ್ಬಕ್ಕೆ ಚಾಲನೆ ನೀಡಿದರು.

ಚುಟುಕಾಗಿ ಉದ್ಘಾಟನಾ ಭಾಷಣ PADMASHREE

ಇದೆ ವೇಳೆ ಮಾತನಾಡಿದ ತುಳಸಿ ಗೌಡ ಅವರು, ತಾನು ಗಿಡಗಳನ್ನು ನೆಡುತ್ತೇನೆ. ತಮಗೆ ಭಾಷಣ ಮಾಡಲು ಬರುವುದಿಲ್ಲ. ದಸರಾ ಹಬ್ಬವನ್ನು ಚನ್ನಾಗಿ ಆಚರಣೆ ಮಾಡಲಾಗುತ್ತಿದೆ. ದೇವರ ಪೂಜೆಯನ್ನು ಕಂಡು ಖುಷಿ ಆಯಿತು ಎಂದರು.

ಅಸುರರ ವಿರುದ್ಧ ವಿಜಯ ಸಾಧಿಸಬೇಕು

ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಮಾತನಾಡಿ, ರಾಜ್ಯದಲ್ಲಿ ಮೈಸೂರು ಹೊರತು ಶಿವಮೊಗ್ಗದಲ್ಲಿಯೆ ಅದ್ಧೂರಿಯಾಗಿ ದಸರಾ ಆಚರಣೆ ಮಾಡಲಾಗುತ್ತದೆ. ಅಸುರ ಶಕ್ತಿಗಳ ವಿರುದ್ಧ ವಿಜಯ ಸಾಧಿಸಲು ವಿಜಯದಶಮಿಯನ್ನು ನಾಡದೇವಿ ಚಾಮುಂಡೇಶ್ವರಿಯ ಪೂಜೆ ಸಲ್ಲಿಸಲಾಗುತ್ತಿದೆ. ಇತ್ತೀಚೆಗೆ ರಾಷ್ಟ್ರದ್ರೋಹಿಗಳ ಚಟುವಟಿಕೆ ಹೆಚ್ಚಳವಾಗುತ್ತಿದೆ. ಇದಕ್ಕೆಲ್ಲ ನಾವು ಜಗ್ಗುವುದಿಲ್ಲ. ಇದನ್ನು ಹೆಮ್ಮಟ್ಟಿಸಬೇಕು ಎಂದು ತಿಳಿಸಿದರು.

ಇದೆ ವೇಳೆ ಶಿವಮೊಗ್ಗದ ಇತಿಹಾಸ, ಸಂಸ್ಕೃತಿಯನ್ನು ಪರಿಚಿಯಿಸುವ ನೃತ್ಯ ರೂಪಕವನ್ನು ಪ್ರದರ್ಶಿಸಲಾಯಿತು.

ಮೇಯರ್ ಸುನೀತಾ ಅಣ್ಣಪ್ಪ ಅಧ್ಯಕ್ಷತೆ ವಹಿಸಿದ್ದರು. ಪಾಲಿಕೆಯ ಸದಸ್ಯರು, ಅಧಿಕಾರಿಗಳು, ಸಿಬ್ಬಂದಿ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ಕ್ಲಿಕ್ ಮಾಡಿ ಇದನ್ನೂ ಓದಿ ಶಿವಮೊಗ್ಗ ದಸರಾ, ನಗರದಲ್ಲಿ ಅಂಬಾರಿ, ನಾಡ ದೇವತೆ ಮೆರವಣಿಗೆ

Shimoga Dasara

Shimoga Dasara

Shimoga Dasara

Shimoga Dasara

Shimoga Dasara

Shimoga Dasara

Shimoga Dasara

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : September 26, 2022

Leave a Comment