ಕಾಂಗ್ರೆಸ್ ಪಕ್ಷಕ್ಕೆ ಗುಡ್ ಬಾಯ್ ಹೇಳಿದ ಸಿದ್ದರಾಮಯ್ಯ ಆಪ್ತ, ಕಾರಣವೇನು?

 SHIVAMOGGA LIVE NEWS 

SHIMOGA | ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರ ಆಪ್ತ, ಸೊರಬ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದ ರಾಜು ತಲ್ಲೂರು ಅವರು ಕಾಂಗ್ರೆಸ್ ಪಕ್ಷಕ್ಕೆ ಗುಡ್ ಬಾಯ್ (resigns) ಹೇಳಿದ್ದಾರೆ. ಅವರು ಬಿಜೆಪಿ ಸೇರುವುದು ಬಹುತೇಕ ಖಚಿತವಾಗಿದೆ.

Shimoga Nanjappa Hospital

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರಾಜು ತಲ್ಲೂರು ಅವರು, ಕಾಂಗ್ರೆಸ್ ಪಕ್ಷದ ಜಿಲ್ಲಾಧ್ಯಕ್ಷರ ನಡೆಯಿಂದ ಬೇಸರವಾಗಿ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ (resigns) ನೀಡುತ್ತಿದ್ದೇನೆ ಎಂದು ಆರೋಪಿಸಿದರು. ಕಾಂಗ್ರೆಸ್ ಪಕ್ಷದ ಜಿಲ್ಲಾಧ್ಯಕ್ಷರು ಪಕ್ಷದ ಸಂಘಟನೆ ಮಾಡಲು ವಿಫಲರಾಗಿದ್ದಾರೆ. ಅವರು ಜನಪರವಾಗಿ ಕಾರ್ಯನಿರ್ವಹಿಸುತ್ತಿಲ್ಲ. ಇದೆ ಕಾರಣಕ್ಕೆ ಪಕ್ಷಕ್ಕೆ ರಾಜೀನಾಮೆ ನೀಡುತ್ತಿದ್ದೇನೆ ಎಂದು ತಿಳಿಸಿದರು.

ಪಕ್ಷ ಪೂಜೆಯಲ್ಲ ವ್ಯಕ್ತಿ ಪೂಜೆಯಾಗ್ತಿದೆ

ಜಿಲ್ಲಾಧ್ಯಕ್ಷರು ಪಕ್ಷ ಸಂಘಟನೆ ಬದಲು ವ್ಯಕ್ತಿ ಪೂಜೆ ಮಾಡುತ್ತಿದ್ದಾರೆ. ಜಿಲ್ಲೆಯ ಜನ ಮತ್ತು ಸೊರಬ ಕ್ಷೇತ್ರದಲ್ಲಿ ಜನರಿಂದ ತಿರಸ್ಕೃತಗೊಂಡವರನ್ನು ಪಕ್ಷಕ್ಕೆ ಕರೆತಂದಿದ್ದಾರೆ. ಜಿಲ್ಲಾಧ್ಯಕ್ಷರೆ ಇದಕ್ಕೆ ಕಾರಣ ಎಂದು ಮಧು ಬಂಗಾರಪ್ಪ ಅವರ ಹೆಸರು ಹೇಳದೆ ರಾಜು ತಲ್ಲೂರು ಆರೋಪಿಸಿದರು.

ಸಿದ್ದರಾಮಯ್ಯ ಆಪ್ತ, ಕೈ ಅಭ್ಯರ್ಥಿಯಾಗಿದ್ದರು

ರಾಜು ತಲ್ಲೂರು ಅವರು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರ ಆಪ್ತರು. ಅಲ್ಲದೆ 2018ರಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದರು. 21,721 ಮತಗಳನ್ನು ಪಡೆದು ಮೂರನೆ ಸ್ಥಾನ ಪಡೆದಿದ್ದರು. ಈಗ ಚುನಾವಣೆ ಹೊಸ್ತಿಲಲ್ಲಿ ರಾಜು ಎಂ.ತಲ್ಲೂರು ಅವರು ಪಕ್ಷ ತೊರೆಯುತ್ತಿದ್ದಾರೆ. ‘ಪಕ್ಷದಲ್ಲಿನ ಬೆಳವಣಿಗೆ ಕುರಿತು ಸಿದ್ದರಾಮಯ್ಯ ಅವರಿಗೆ ಮಾಹಿತಿ ನೀಡಿದ್ದೇನೆ’ ಎಂದು ರಾಜು ತಲ್ಲೂರು ಅವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

Kalleshwara-Enterprises.webp

ಬಿಜೆಪಿ ಸೇರ್ಪಡೆ ಆಗುತ್ತಾರಾ?

ಕಾಂಗ್ರೆಸ್ ಪಕ್ಷ ತೊರೆಯುತ್ತಿರುವ ರಾಜು ಎಂ.ತಲ್ಲೂರು ಅವರು ಬಿಜೆಪಿ ಸೇರ್ಪಡೆ ಆಗುತ್ತಾರೆ ಎಂದು ಹೇಳಲಾಗುತ್ತಿದೆ. ಆದರೆ ಸುದ್ದಿಗೋಷ್ಠಿಯಲ್ಲಿ, ‘ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡುತ್ತಿದ್ದೇನೆ. ಬೆಂಬಲಿಗರ ಸಭೆ ಕರೆದು ಮುಂದಿನ ನಿರ್ಧಾರ ಪ್ರಕಟಿಸುತ್ತೇನೆ’ ಎಂದು ತಿಳಿಸಿದರು. ಈ ನಡುವೆ ಸೊರಬ ಕ್ಷೇತ್ರದಲ್ಲಿ ರಾಜ ತಲ್ಲೂರು ಅವರಿಗೆ ಬಿಜೆಪಿಗೆ ಸ್ವಾಗತ ಎಂದು ಪೋಸ್ಟರ್, ಫ್ಲೆಕ್ಸ್ ಅಳವಡಿಸಲಾಗಿದೆ.

ಕ್ಲಿಕ್ ಮಾಡಿ ಇದನ್ನೂ ಓದಿ ಹಿಟ್ ಅಂಡ್ ರನ್, ನಡೆದು ಹೋಗುತ್ತಿದ್ದ ವ್ಯಕ್ತಿಗೆ ನ್ಯಾನೋ ಕಾರು ಡಿಕ್ಕಿ

ADVERTISEMENT 

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್‌ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ. ವಾಟ್ಸಪ್‌ ನಂಬರ್: 7411700200
Kalleshwara-Enterprises.webp

Leave a Comment