ಶಿವಮೊಗ್ಗ, ಭದ್ರಾವತಿಯಲ್ಲಿ ಪೊಲೀಸರ ದಾಳಿ, ಐವರ ಬಂಧನ, ಕಾರಣ ಬಿಚ್ಚಿಟ್ಟ ಗೃಹ ಸಚಿವರು

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

 SHIVAMOGGA LIVE NEWS 

SHIMOGA | ರಾಜ್ಯಾದ್ಯಂತ ಪಾಪ್ಯೂಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್ಐ) ಸಂಘಟನೆ ಕಾರ್ಯಕರ್ತರ ಮೇಲೆ ಪೊಲೀಸರು ದಾಳಿ (RAID ON PFI) ನಡೆಸಿದ್ದಾರೆ. ಶಿವಮೊಗ್ಗ ಮತ್ತು ಭದ್ರಾವತಿಯಲ್ಲಿ ಪೊಲೀಸರು ದಾಳಿ ಮಾಡಿ, ಐವರನ್ನು ವಶಕ್ಕೆ ಬಂಧಿಸಲಾಗಿದೆ.

Shimoga Nanjappa Hospital

ಈ ಕುರಿತು ಜಿಲ್ಲಾ ಪೊಲೀಸ್ ಇಲಾಖೆ ಪ್ರಕಟಣೆ ಬಿಡುಗಡೆ ಮಾಡಿದೆ. ‘ಕಾನೂನು, ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಭದ್ರಾವತಿಯಲ್ಲಿ ಮೂವರು ಮತ್ತು ಶಿವಮೊಗ್ಗದಲ್ಲಿ ಇಬ್ಬರನ್ನು ವಶಕ್ಕೆ ಪಡೆಯಲಾಗಿದೆ. ಆಯಾ ತಾಲೂಕು ದಂಡಾಧಿಕಾರಿ ಅವರ ಮುಂದೆ ಹಾಜರುಪಡಿಸಲಾಗಿದೆ. ಮುಂಜಾಗ್ರತ ಕ್ರಮವಾಗಿ ಬಂಧನಕ್ಕೆ ಅವರು ಆದೇಶಿಸಿದ್ದ್ದಾರೆ.

ಯಾರೆಲ್ಲ ಅರೆಸ್ಟ್ ಆದವರಾರು?

ಭದ್ರಾವತಿಯಲ್ಲಿ ಮೊಹಮ್ಮದ್ ಸಾದಿಕ್ ಉಲ್ಲಾ, ಮೋಯಿವುದ್ದೀನ್ ತಾಹೀರ್, ಹರ್ಷದುಲ್ಲಾ ಎಂಬುವವರನ್ನು ಬಂಧಿಸಲಾಗಿದೆ. ಶಿವಮೊಗ್ಗದಲ್ಲಿ ರಹೀಮ್, ಸಯ್ಯದ್, ಮನ್ಸೂರ್ ಅಲಿ ಖಾನ್ ಮತ್ತು ರಫೀಕ್ ಎಂಬುವವರನ್ನು ಬಂಧಿಸಲಾಗಿತ್ತು (RAID ON PFI). ಈ ಪೈಕಿ ರಹೀಮ್ ಮತ್ತು ಸಯ್ಯದ್ ಗೆ ಜಾಮೀನು ಮಂಜೂರಾಗಿದೆ. ವೈಯಕ್ತಿಕ ಬಾಂಡ್ ಪಡೆದು ತಾಲೂಕು ಮ್ಯಾಜಿಸ್ಟ್ರೇಟ್ ಅವರು ಜಾಮೀನು ಮಂಜೂರು ಮಾಡಿದ್ದಾರೆ. ಉಳಿದವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಶಾಂತಿ ಸುವ್ಯವಸ್ಥೆಗೆ ಭಂಗ, ಆಸ್ತಿಪಾಸ್ತಿ ಹಾನಿ ಉಂಟು ಮಾಡುವ ಸಾಧ್ಯತೆ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ನ್ಯಾಯಾಂಗ ಬಂಧನಕ್ಕೆ ವಹಿಸಲಾಗಿದೆ. ಯಾವುದೆ ಮುಚ್ಚಳಿಕೆಯನ್ನು ಬರೆಯಿಸಿಕೊಂಡಿಲ್ಲ.ನಾಗರಾಜ್, ಶಿವಮೊಗ್ಗ ತಹಶೀಲ್ದಾರ್

ಬಂಧನಕ್ಕೆ ಕಾರಣವೇನು?

ಪಿಎಫ್ಐ ಸಂಘಟನೆ ಕಾರ್ಯಕರ್ತರ ಬಂಧನ ವಿಚಾರವಾಗಿ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ತೀರ್ಥಹಳ್ಳಿಯಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ.

‘ಬೆಳಗ್ಗೆಯಿಂದ ರಾಜ್ಯಾದ್ಯಂತ ಪಿಎಫ್ಐ ಸಂಘಟನೆಯ ಪದಾಧಿಕಾರಿಗಳು, ಕಾರ್ಯಕರ್ತರನ್ನು ಮುನ್ನೆಚ್ಚರಿಕೆ ಕ್ರಮವಾಗಿ ವಶಕ್ಕೆ (RAID ON PFI) ಪಡೆಯಲಾಗಿದೆ. ತಹಶೀಲ್ದಾರ್ ಎದುರು ಇವರನ್ನು ಹಾಜರುಪಡಿಸಲಾಗಿದೆ. ಈ ಹಿಂದೆ ಎನ್ಐಎ ದಾಳಿ ವೇಳೆ ಮತ್ತು ಕೆಲವು ಶಂಕಿತರ ಮೇಲೆ ಪೊಲೀಸರು ದಾಳಿ ನಡೆಸಿದಾಗ ಇವರೆಲ್ಲ ಆತಂಕ ಉಂಟು ಮಾಡಿದ್ದರು. ಮುಂದೆಯು ಇವರು ಶಾಂತಿ ಭಂಗ ಉಂಟು ಮಾಡುವ ಸಾಧ್ಯತೆ ಇರುವುದರಿಂದ ಹಲವರನ್ನು ವಶಕ್ಕೆ ಪಡೆಯಲಾಗಿದೆ’ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದರು.

ಕ್ಲಿಕ್ ಮಾಡಿ ಇದನ್ನೂ ಓದಿ ಪಿತೃ ಪಕ್ಷಕ್ಕೆ ಊರಿಗೆ ಹೋದ ಸ್ಟಾಫ್ ನರ್ಸ್ ಗಳ ಮನೆ ಬೀಗ ಮುರಿದ ಖದೀಮರು

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment