ಕಾಂಗ್ರೆಸ್’ಗೆ ಗುಡ್ ಬಾಯ್ ಹೇಳಿ ಬಿಜೆಪಿ ಸೇರ್ಪಡೆಯಾದ ಸೊರಬದ ಮುಖಂಡ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

 SHIVAMOGGA LIVE NEWS 

SHIMOGA | ಕಾಂಗ್ರೆಸ್ ಪಕ್ಷ ತೊರೆದಿದ್ದ ಸೊರಬದ ಮುಖಂಡ ಇವತ್ತು ಬಿಜೆಪಿ (JOIN BJP) ಸೇರ್ಪಡೆಯಾಗಿದ್ದಾರೆ. ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ರಾಜು ಎಂ.ತಲ್ಲೂರು ಅವರು ಬಿಜೆಪಿ ಪಕ್ಷ ಸೇರಿದ್ದಾರೆ.

Shimoga Nanjappa Hospital

ಸಂಸದ ಬಿ.ವೈ.ರಾಘವೇಂದ್ರ, ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ, ಜಿಲ್ಲಾಧ್ಯಕ್ಷ ಟಿ.ಡಿ.ಮೇಘರಾಜ್ ಮತ್ತು ಬಿಜೆಪಿ ಮುಖಂಡರ ಸಮ್ಮುಖದಲ್ಲಿ ರಾಜು ಎಂ.ತಲ್ಲೂರು ಅವರು ಬಿಜೆಪಿ (JOIN BJP) ಸೇರ್ಪಡೆಯಾದರು.

ರಾಜು ತಲ್ಲೂರು ಅವರು ತಮ್ಮ ತಪ್ಪಿನ ಅರಿವಾಗಿ ಬಿಜೆಪಿ ಸೇರ್ಪಡೆಯಾಗುತ್ತಿದ್ದಾರೆ. ಇವರ ನೇತೃತ್ವದಲ್ಲಿ ಪಕ್ಷ ಮತ್ತು ಸಂಘಟನೆಗೆ ಹೆಚ್ಚಿನ ಶಕ್ತಿ ಲಭಿಸಲಿದೆ. ಬಿ.ವೈ.ರಾಘವೇಂದ್ರ, ಸಂಸದ

ಪಕ್ಷದ ಶಾಲು ಹೊದಿಸಿ, ಬಿಜೆಪಿ ಧ್ವಜ ನೀಡಿ ರಾಜು ತಲ್ಲೂರು ಅವರನ್ನು ಪಕ್ಷಕ್ಕೆ ಸೇರಿಸಿಕೊಳ್ಳಲಾಯಿತು.

ವಿಭಾಗ ಪ್ರಭಾರಿ ಗಿರೀಶ್ ಪಟೇಲ್, ಓಬಿಸಿ ಮೋರ್ಚಾ ಜಿಲ್ಲಾಧ್ಯಕ್ಷ ಮಾಲತೇಶ್, ಸೊರಬ ಮಂಡಲ ಅಧ್ಯಕ್ಷ ಪ್ರಕಾಶ್ ಸೇರಿದಂತೆ ಹಲವರು ಇದ್ದರು.

ಯಡಿಯೂರಪ್ಪ ಅಶೀರ್ವಾದ (JOIN BJP)

ಬಿಜೆಪಿ ಸೇರ್ಪಡೆ ಆಗುತ್ತಿದ್ದಂತೆ ರಾಜು ತಲ್ಲೂರು ಅವರು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಭೇಟಿಯಾದರು. ವಿನೋಬನಗರದಲ್ಲಿರುವ ಮನೆಯಲ್ಲಿ ಯಡಿಯೂರಪ್ಪ ಅವರನ್ನು ಭೇಟಿಯಾಗಿ ಅವರು ಆಶೀರ್ವಾದ ಪಡೆದರು.

ಇದೆ ವೇಳೆ ಮಾತನಾಡಿದ ಬಿ.ಎಸ್.ಯಡಿಯೂರಪ್ಪ ಅವರು, ‘ರಾಜು ತಲ್ಲೂರು ಅವರು ಪಕ್ಷಕ್ಕೆ ಸೇರ್ಪಡೆಯಾಗಿರುವುದು ಆ ಭಾಗದಲ್ಲಿ ಆನೆ ಬಲ ಬಂದಂತಾಗಿದೆ. ಅವರಿಗೆ ಪಕ್ಷದಲ್ಲಿ ಸರಿಯಾದ ಸ್ಥಾನಮಾನ ನೀಡಲಾಗುತ್ತದೆ. ಇನ್ನೂ ಅನೇಕ ಮುಖಂಡರು ಬಿಜೆಪಿ ಸೇರ್ಪಡೆ ಆಗಲಿದ್ದಾರೆ. ಇದರಿಂದ ರಾಜ್ಯದಲ್ಲಿ 150 ಸೀಟ್ ಗೆಲ್ಲಲು ಸಹಕಾರಿ ಆಗಲಿದೆ’ ಎಂದು ತಿಳಿಸಿದರು.

ಕ್ಲಿಕ್ ಮಾಡಿ ಇದನ್ನೂ ಓದಿ ಕಾಂಗ್ರೆಸ್ ಪಕ್ಷಕ್ಕೆ ಗುಡ್ ಬಾಯ್ ಹೇಳಿದ ಸಿದ್ದರಾಮಯ್ಯ ಆಪ್ತ, ಕಾರಣವೇನು?

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment