ಶಿವಮೊಗ್ಗಕ್ಕೆ ಜಪಾನ್ ಕಾನ್ಸುಲ್ ಡೆಪ್ಯೂಟಿ ಜನರಲ್, ಹೂಡಿಕೆ ಕುರಿತು ಚರ್ಚೆ, ವಿಮಾನ ನಿಲ್ದಾಣಕ್ಕೆ ಭೇಟಿ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

 SHIVAMOGGA LIVE NEWS 

SHIMOGA | ಜಪಾನ್ (JAPAN) ದೇಶದ ಕಾನ್ಸುಲೇಟ್’ನ ಡೆಪ್ಯೂಟಿ ಜನರಲ್ ಮಾರೋವ್ ಕಟ್ಸುಮಾಸಾ ಅವರು ಇವತ್ತು ಶಿವಮೊಗ್ಗಕ್ಕೆ ಭೇಟಿ ನೀಡಿದ್ದಾರೆ. ಪ್ರವಾಸಿ ಮಂದಿರದಲ್ಲಿ ಸಂಸದ ಬಿ.ವೈ.ರಾಘವೇಂದ್ರ ಅವರೊಂದಿಗೆ ಚರ್ಚೆ ನಡೆಸಿದರು.

Shimoga Nanjappa Hospital

ಶಿವಮೊಗ್ಗ ಜಿಲ್ಲೆಯಲ್ಲಿನ ಅಭಿವೃದ್ಧಿ ಕಾರ್ಯಗಳು, ಹೂಡಿಕೆ ಸಂಬಂಧ ಡೆಪ್ಯೂಟಿ ಜನರಲ್ ಮಾರೋವ್ ಕಟ್ಸುಮಾಸಾ ಅವರು ಸಂಸದ ರಾಘವೇಂದ್ರ ಅವರೊಂದಿಗೆ ಚರ್ಚಿಸಿದರು.

ಏನೇನು ಚರ್ಚೆ ನಡೆಯಿತು? (JAPAN)

ಶಿವಮೊಗ್ಗದಲ್ಲಿ ಜಪಾನ್ (JAPAN) ಕಂಪನಿಗಳ ಹೂಡಿಕೆ ಕುರಿತು ಚರ್ಚೆ ನಡೆಸಲಾಯಿತು. ತಮ್ಮ ವ್ಯಾಪ್ತಿಯಲ್ಲಿ ಸುಮಾರು 200 ಕಂಪನಿಗಳಿವೆ. ಅವುಗಳ ಪೈಕಿ ಕೆಲವು ಕಂಪನಿಗಳಿಗೆ ಶಿವಮೊಗ್ಗ ಜಿಲ್ಲೆಯಲ್ಲಿ ಹೂಡಿಕೆ ಮಾಡುವ ಕುರಿತು ಚರ್ಚಿಸುವಂತೆ ಸಂಸದ ರಾಘವೇಂದ್ರ ಮನವಿ ಮಾಡಿದರು. ಇದಕ್ಕೆ ಮಾರೋವ್ ಕಟ್ಸುಮಾಸಾ ಒಪ್ಪಿಗೆ ಸೂಚಿಸಿದ್ದಾರೆ.

ಜಪಾನ್ ಕಂಪಾನಿಗಳು ಹೂಡಿಕೆ ಮಾಡಿದರೆ, ಶಿವಮೊಗ್ಗ ಜಿಲ್ಲೆಯಲ್ಲಿ ಉದ್ಯೋಗ ಸೃಷ್ಟಿಗೆ ಅನುಕೂಲವಾಗಲಿದೆ. ಇನ್ನು, ವಿಮಾನ ನಿಲ್ದಾಣ ಕುರಿತು ಮಾಹಿತಿ ಸಂಗ್ರಹಿಸಿದ ಡೆಪ್ಯೂಟಿ ಕಾನ್ಸುಲ್ ಜನರಲ್ ಅವರು, ಸರಕು ಸಾಗಣೆ ಕುರಿತು ವಿವರಣೆ ಪಡೆದರು.

ವಿಮಾನ ನಿಲ್ದಾಣಕ್ಕೆ ಭೇಟಿ

ಸೋಗಾನೆ ಬಳಿ ನಿರ್ಮಾಣವಾಗುತ್ತಿರುವ ವಿಮಾನ ನಿಲ್ದಾಣ ಕಾಮಗಾರಿ ಸ್ಥಳಕ್ಕೆ ಜಪಾನ್ ಕಾನ್ಸುಲ್ ಡೆಪ್ಯೂಟಿ ಜನರಲ್ ಮಾರೋವ್ ಕಟ್ಸುಮಾಸಾ ಮತ್ತು ಅವರ ತಂಡ ಭೇಟಿ ನೀಡಲಿದೆ. ವಿಮಾನ ನಿಲ್ದಾಣ ಕಾಮಗಾರಿ ವೀಕ್ಷಿಸಲಿದ್ದಾರೆ. ಆ ಬಳಿಕ ಕುವೆಂಪು ವಿಶ್ವವಿದ್ಯಾಲಯಕ್ಕೆ ಭೇಟಿ ನೀಡಿ, ಶೈಕ್ಷಣಿಕ ವ್ಯವಸ್ಥೆ ಕುರಿತು ಮಾಹಿತಿ ಪಡೆಯಲಿದ್ದಾರೆ.

ಕ್ಲಿಕ್ ಮಾಡಿ ಇದನ್ನೂ ಓದಿ ಶಿವಮೊಗ್ಗದ ಪ್ರತಿಷ್ಠಿತ ನಂಜಪ್ಪ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ವತಿಯಿಂದ ವಾಕಥಾನ್, ಹೇಗಿತ್ತು?

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment