ಸಿಸಿಟಿವಿ ಕಿತ್ತು ಹಾಕಿ, 10 ಕ್ವಿಂಟಾಲ್ ಅಡಕೆ ಕಳ್ಳತನ, 26 ಜನರ ವಿರುದ್ಧ ಕೇಸ್

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

 SHIVAMOGGA LIVE NEWS 

HOLEHONNURU | ಮನೆಯಲ್ಲಿ ಯಾರೂ ಇಲ್ಲದ ವೇಳೆ ಬಾಗಿಲಿನ ಬೀಗ ಮುರಿದು 10 ಕ್ವಿಂಟಾಲ್ (10 quintal) ಅಡಕೆ ಕಳ್ಳತನ ಮಾಡಲಾಗಿದೆ. ಘಟನೆ ಸಂಬಂಧ 26 ಜನರ ವಿರುದ್ಧ ದೂರು ನೀಡಲಾಗಿದೆ.

Shimoga Nanjappa Hospital

ಹೊಳೆಹೊನ್ನೂರು ಹೋಬಳಿಯ ಮೈದೊಳಲು ಗ್ರಾಮದ ಸೋಮಶೇಖರಪ್ಪ ಎಂಬುವವರ ಮನೆಯಲ್ಲಿ ಕಳ್ಳತನವಾಗಿದೆ.

ಹೇಗಾಯಿತು ಘಟನೆ? (10 quintal) 

ಸೋಮಶೇಖರಪ್ಪ ಅವರು ನ್ಯಾಯ ಬೆಲೆ ಅಂಗಡಿ ನಡೆಸುತ್ತಿದ್ದಾರೆ. ತಮ್ಮ ಪತ್ನಿ ಮತ್ತು ಮಗಳಿಗೆ ಆರೋಗ್ಯ ಸರಿ ಇಲ್ಲದ್ದರಿಂದ ತೋರಿಸುವ ಸಲುವಾಗಿ ಮಂಗಳೂರಿಗೆ ತೆರಳಿದ್ದರು. ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಮನೆ ಮುಂದೆ ಅಳವಡಿಸಿದ್ದ ಸಿಸಿಟಿವಿಯನ್ನು ಕಿತ್ತು ಹಾಕಲಾಗಿದೆ. ಮನೆಯ ಬಾಗಿಲಿನ ಬೀಗ ಮುರಿದು ಒಳಗೆ ನುಗ್ಗಿ ಕಳ್ಳತನ ಮಾಡಲಾಗಿದೆ.

ಮನೆಯಲ್ಲಿದ್ದ ಸುಮಾರು 10 ಕ್ವಿಂಟಾಲ್ (10 quintal)  ಒಣ ಅಡಕೆಯನ್ನು ಕದ್ದು ಸಾಗಿಸಲಾಗಿದೆ. ಇದರ ಮೌಲ್ಯ ಅಂದಾಜು 4.50 ಲಕ್ಷ ರೂ. ಎಂದು ಸೋಮಶೇಖರಪ್ಪ ದೂರಿನಲ್ಲಿ ಆರೋಪಿಸಿದ್ದಾರೆ.

ಘಟನೆ ಸಂಬಂಧ 26 ಜನರ ವಿರುದ್ಧ ದೂರು ನೀಡಿದ್ದಾರೆ. ಹೊಳೆಹೊನ್ನೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ನಡೆಯುತ್ತಿದೆ.

ಕ್ಲಿಕ್ ಮಾಡಿ ಇದನ್ನೂ ಓದಿ | ನೇಣು ಬಿಗಿದುಕೊಂಡ ರೈತ, ಕಣ್ಣುಗಳನ್ನು ದಾನ ಮಾಡಿದ ಕುಟುಂಬ

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : September 29, 2022

Leave a Comment