ಶಿವಮೊಗ್ಗ ಪಾಲಿಕೆ ಮೇಯರ್, ಉಪ ಮೇಯರ್ ಸ್ಥಾನಕ್ಕೆ ಹೊಸ ಮಿಸಲಾತಿ ಪ್ರಕಟ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

 SHIVAMOGGA LIVE NEWS 

SHIMOGA | ಮಹಾನಗರ ಪಾಲಿಕೆಯ ಮೇಯರ್, ಉಪ ಮೇಯರ್ ಸ್ಥಾನದ ಮೀಸಲಾತಿಯನ್ನು (new reservation) ಸರ್ಕಾರ ಬದಲಾವಣೆ ಮಾಡಿದೆ. ಹೈಕೋರ್ಟ್ ಆದೇಶದ ಮೇರೆಗೆ ಹೊಸತಾಗಿ ಮೀಸಲಾತಿಯನ್ನು ಪ್ರಕಟಿಸಿದೆ.

Shimoga Nanjappa Hospital

ಪಾಲಿಕೆಯ ಮೇಯರ್, ಉಪ ಮೇಯರ್ ಸ್ಥಾನಕ್ಕೆ ಆ.24ರಂದು ಮೀಸಲು ಪ್ರಕಟಿಸಲಾಗಿತ್ತು. ಆಗ ಮೇಯರ್ ಸ್ಥಾನಕ್ಕೆ ಹಿಂದುಳಿದ ವರ್ಗ (ಎ), ಉಪ ಮೇಯರ್ ಸ್ಥಾನ ಸಾಮಾನ್ಯ ವರ್ಗ ಮಹಿಳೆಗೆ ಮೀಸಲು ಎಂದು ಪ್ರಕಟಿಸಲಾಗಿತ್ತು.

ಹೈಕೋರ್ಟ್ ಆದೇಶದ ಮೇರೆಗೆ ಸರ್ಕಾರ ಮೀಸಲಾತಿಯನ್ನು (new reservation) ಬದಲಾಯಿಸಿದೆ. ಶಿವಮೊಗ್ಗ ಪಾಲಿಕೆ ಮೇಯರ್ ಸ್ಥಾನವನ್ನು ಪರಿಶಿಷ್ಟ ಜಾತಿಗೆ, ಉಪ ಮೇಯರ್ ಸ್ಥಾನವನ್ನು ಹಿಂದುಳಿದ ವರ್ಗ (ಎ) ಮಹಿಳೆಗೆ ಮೀಸಲುಗೊಳಿಸಲಾಗಿದೆ.

ಹೈಕೋರ್ಟಲ್ಲಿ ರಿಟ್ ಅರ್ಜಿ (new reservation)

ಈ ಹಿಂದೆ ಸರ್ಕಾರ ಪ್ರಕಟಿಸಿದ್ದ ಮೀಸಲು ವಿರುದ್ಧ ನಾಗರಾಜ್ ಎಂಬುವವರು ಹೈಕೋರ್ಟ್ ನಲ್ಲಿ ರಿಟ್ ಅರ್ಜಿ ಸಲ್ಲಿಸಿದ್ದರು. ಸರ್ಕಾರ ಹೈಕೋರ್ಟ್ ಸೂಚನೆಯಂತೆ ಮೀಸಲು ಪ್ರಕಟಿಸಿಲ್ಲ ಎಂದು ಅರ್ಜಿಯಲ್ಲಿ ಉಲ್ಲೇಖಿಸಿದ್ದರು. ವಿಚಾರಣೆ ನಡೆಸಿದ ಹೈಕೋರ್ಟ್ ಸೆ.19ರಂದು ಮಧ್ಯಂತರ ತೀರ್ಪು ನೀಡಿದೆ.

ಈ ಹಿಂದೆ ಹೈಕೋರ್ಟ್ ತಿಳಿಸಿದಂತೆ ಮೀಸಲಾತಿ ಪ್ರಕಟಿಸಬೇಕು. ಇಲ್ಲವಾದಲ್ಲಿ ಸರ್ಕಾರ ಹೈಕೋರ್ಟ್ ಮುಂದೆ ಕಾರಣ ತಿಳಿಸಬೇಕು ಎಂದು ಮಧ್ಯಂತರ ಆದೇಶದಲ್ಲಿ ತಿಳಿಸಲಾಗಿದೆ. ಇದೆ ಕಾರಣಕ್ಕೆ ಈಗ ಸರ್ಕಾರ ಮೀಸಲಾತಿಯನ್ನು ಪುನರ್ ಪರಿಶೀಲಿಸಿ, ಹೊಸ ಪಟ್ಟಿಯನ್ನು ಪ್ರಕಟಿಸಿದೆ.

RL Jalappa Academy

ಕ್ಲಿಕ್ ಮಾಡಿ ಇದನ್ನೂ ಓದಿ ಸರಣಿ ಅಪಘಾತ, ಎರಡು ಕಾರುಗಳು ಜಖಂ, ಚಕ್ರದಡಿ ಸಿಲುಕಿದ ಬೈಕ್, ಬಸ್ಸಿನ ಗಾಜು ಪೀಸ್ ಪೀಸ್

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : September 30, 2022

Leave a Comment