BREAKING NEWS | ಶಿರಾಳಕೊಪ್ಪದಲ್ಲಿ ಬೆಳಗಿನ ಜಾವ ಭೂಮಿ ಕಂಪಿಸಿದ ಅನುಭವ, ವೈರಲ್ ಆಯ್ತು ಸ್ಕ್ರೀನ್ ಶಾಟ್

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

 SHIVAMOGGA LIVE NEWS 

SHIKARIPURA | ಶಿಕಾರಿಪುರ ತಾಲೂಕು ಶಿರಾಳಕೊಪ್ಪದಲ್ಲಿ ಇಂದು ಬೆಳಗಿನ ಜಾವ ಭೂಮಿ ಕಂಪಿಸಿದ (EARTH QUAKE FEEL) ಅನುಭವವಾಗಿದೆ. ಇದರಿಂದ ಭಯಭೀತರಾದ ಜನರು ಮನೆಯಿಂದ ಹೊರಗೆ ಬಂದಿದ್ದಾರೆ.

Shimoga Nanjappa Hospital

ಬೆಳಗಿನ ಜಾವ 3.55ರ ಹೊತ್ತಿಗೆ ಭೂಮಿ ಕಂಪಿಸಿದ ಅನುಭವವಾಗಿದೆ ಎಂದು ಹೇಳಲಾಗುತ್ತಿದೆ. ಶಿರಾಳಕೊಪ್ಪ ಪಟ್ಟಣ ಮತ್ತು ಸುತ್ತಮುತ್ತಲ ಒಂದು ಕಿ.ಮೀ ಸುತ್ತಮುತ್ತಲು ಈ ಅನುಭವವಾಗಿದೆ ಎಂದು ಜನರು ತಿಳಿಸಿದ್ದಾರೆ.

ಮನೆಯಿಂದ ಹೊರ ಬಂದ ಜನ (EARTH QUAKE FEEL)

ಭೂಮಿ ಕಂಪನದ ಅನುಭವ ಆಗುತ್ತಿದ್ದಂತೆ ಜನರು ಮನೆಯಿಂದ ಹೊರಗೆ ಬಂದಿದ್ದಾರೆ. ಕೆಲವರು ಜೋರು ಶಬ್ದವಾಯಿತು ಎಂದೂ ತಿಳಿಸಿದ್ದಾರೆ. ಬೆಳಗಿನ ಜಾವ ಗಾಢ ನಿದ್ರೆಯಲ್ಲಿದ್ದವರಿಗೆ ಕಂಪನದ ಅನುಭವದಿಂದ ಆತಂಕಗೊಂಡಿದ್ದರು.

ತಹಶೀಲ್ದಾರ್ ಏನಂತಾರೆ? (EARTH QUAKE FEEL)

ಇನ್ನು ಈ ಕುರಿತು ಶಿವಮೊಗ್ಗ ಲೈವ್.ಕಾಂ ಜೊತೆಗೆ ಮಾತನಾಡಿದ ತಹಶೀಲ್ದಾರ್ ಕವಿರಾಜ್ ಅವರು, ‘ಶಿರಾಳಕೊಪ್ಪ ಪಟ್ಟಣದ ಒಂದು ಕಿ.ಮೀ ಸುತ್ತಳತೆಯಲ್ಲಿ ಭೂಮಿ ಕಂಪಿಸಿದ ಅನುಭವವಾಗಿದೆ ಎಂದು ಜನರು ತಿಳಿಸಿದ್ದಾರೆ. ಇದು ಭೂಕಂಪನವೊ ಅಥವಾ ಬೇರೇನಾದರು ಕಾರಣವೋ ಅನ್ನುವ ಕುರಿತು ಇನ್ನಷ್ಟೆ ತಿಳಿದು ಬರಬೇಕಿದೆ. ಈ ಕುರಿತು ಜಿಲ್ಲಾಧಿಕಾರಿ ಅವರಿಗೆ ತಿಳಿಸಿದ್ದೇವೆ. ಬೆಂಗಳೂರಿನಿಂದ ಅಧಿಕೃತ ವರದಿ ಬರಬೇಕಿದೆ’ ಎಂದು ತಿಳಿಸಿದರು.

ಹರಿದಾಡಿದ ಸ್ಕ್ರೀನ್ ಶಾಟ್

ಮತ್ತೊಂದೆಡೆ ಶಿರಾಳಕೊಪ್ಪದಲ್ಲಿ ಭೂಕಂಪನ ಸಂಭವಿಸಿದೆ ಎಂದು ಸ್ಕ್ರೀನ್ ಶಾಟ್ ಹರಿದಾಡುತ್ತಿದೆ. ಶಿರಾಳಕೊಪ್ಪದಲ್ಲಿ 4.1 ತೀವ್ರತೆಯ ಭೂಕಂಪನವಾಗಿದೆ ಎಂದು ಅದರಲ್ಲಿ ತಿಳಿಸಲಾಗಿದೆ. ಮ್ಯಾಪ್ ನಲ್ಲಿ ಶಿರಾಳಕೊಪ್ಪದಲ್ಲಿ ಕೆಂಪು ಮಾರ್ಕ್ ತೋರಿಸಲಾಗಿದೆ. ಆದರೆ ಜಿಲ್ಲಾಡಳಿತವಾಗಲಿ, ತಾಲೂಕು ಆಡಳಿತವಾಗಲಿ ಭೂಕಂಪನದ ಕುರಿತು ಖಚಿತಪಡಿಸಿಲ್ಲ. ಮತ್ತೊಂದೆಡೆ ಭೂಕಂಪನ ಅಧ್ಯಯನ ಮಾಡುವ ಪ್ರತಿಷ್ಠಿತ ಸಂಸ್ಥೆಗಳು ಕೂಡ ಭೂಕಂಪನದ ಕುರಿತು ಖಚಿತಪಡಿಸಿಲ್ಲ.

ಜಿಲ್ಲೆಯಲ್ಲಿ ಇತ್ತೀಚಿನ ಕಂಪನಗಳು

2019ರ ಫೆಬ್ರವರಿ 3ರಂದು ತೀರ್ಥಹಳ್ಳಿ ತಾಲೂಕು ವಿಠಲನಗರದಲ್ಲಿ ಭೂಕಂಪನ ಸಂಭವಿಸಿತ್ತು. ರಿಕ್ಟರ್ ಮಾಪನದಲ್ಲಿ 2.2 ತೀವ್ರತೆ ದಾಖಲಾಗಿತ್ತು. ಇನ್ನು, ಶಿವಮೊಗ್ಗದ ಹುಣಸೋಡು ಗ್ರಾಮದಲ್ಲಿ ಸ್ಪೋಟ ಸಂಭವಿಸಿ, ಜಿಲ್ಲೆಯಾದ್ಯಂತ ಕಂಪನದ ಅನುಭವ ಉಂಟಾಗಿತ್ತು.

Shimoga Nanjappa Hospital

ಕ್ಲಿಕ್ ಮಾಡಿ ಇದನ್ನೂ ಓದಿ ಹೊರಗಿಂದ ಲಾಕ್ ಮಾಡಿದಂತೆಯೇ ಇತ್ತು, ಬಾಗಿಲು ತೆಗೆಯಲು ಹೋದಾಗ ಕಾದಿತ್ತು ಶಾಕ್

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment