ಭಾರತ್ ಜೋಡೋ ಯಾತ್ರೆಗೆ ಶಿವಮೊಗ್ಗದ ಕಾರ್ಯಕರ್ತರು, ಯಾವ್ಯಾವ ದಿನ ಯಾವ ಕ್ಷೇತ್ರದವರು ಭಾಗಿ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

 SHIVAMOGGA LIVE NEWS 

SHIMOGA | ರಾಹುಲ್ ಗಾಂಧಿ ಅವರ ನೇತೃತ್ವದಲ್ಲಿ ನಡೆಯುತ್ತಿರುವ ಭಾರತ್ ಜೋಡೋ (BHARAT JODO) ಯಾತ್ರೆಯಲ್ಲಿ ಶಿವಮೊಗ್ಗ ಜಿಲ್ಲೆಯ ಕಾಂಗ್ರೆಸ್ ಕಾರ್ಯಕರ್ತರು ಪಾಲ್ಗೊಳ್ಳಲಿದ್ದಾರೆ. ಪ್ರತಿ ಕ್ಷೇತ್ರದಿಂದ ತಲಾ ಐದು ಸಾವಿರದಂತೆ ಕಾರ್ಯಕರ್ತರು ಯಾತ್ರೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಕಾಂಗ್ರೆಸ್ ಪಕ್ಷದ ಜಿಲ್ಲಾಧ್ಯಕ್ಷ ಹೆಚ್.ಎಸ್.ಸುಂದರೇಶ್ ಅವರು ತಿಳಿಸಿದರು.

Shimoga Nanjappa Hospital

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಹೆಚ್.ಎಸ್.ಸುಂದರೇಶ್ ಅವರು, ಮೂರು ದಿನದ ಪಾದಯಾತ್ರೆಯಲ್ಲಿ ಶಿವಮೊಗ್ಗ ಜಿಲ್ಲೆಯ ಕಾರ್ಯಕರ್ತರು ಭಾಗವಹಿಸಲಿದ್ದಾರೆ. ಒಂದೊಂದು ದಿನ ನಿರ್ದಿಷ್ಟ ವಿಧಾನಸಭೆ ಕ್ಷೇತ್ರ ವ್ಯಾಪ್ತಿಯ ಕಾರ್ಯಕರ್ತರು ಯಾತ್ರೆಯಲ್ಲಿ ಪಾಲ್ಗೊಳ್ಳುವಂತೆ ಸೂಚಿಸಲಾಗಿದೆ ಎಂದು ತಿಳಿಸಿದರು.

ಯಾವ್ಯಾವ ದಿನ ಯಾವ ಕ್ಷೇತ್ರ? (BHARAT JODO)

ಅ.10ರಂದು ಸಂಜೆ 4 ಗಂಟೆಗೆ ಚಿತ್ರದುರ್ಗದ ಹಿರಿಯೂರಿನ ತಾಜಾ ಪ್ಯಾಲೆಸ್ ಬಳಿ ಪಾದಯಾತ್ರೆ ಆರಂಭವಾಗಲಿದೆ. ಹರ್ತಿಕೋಟೆ ಗ್ರಾಮದ ಬಾಳೇನಹಳ್ಳಿ ದೇವಸ್ಥಾನದ ಆರ್ಚ್ ಬಳಿ ಸಂಜೆ 7 ಗಂಟೆಗೆ ಪಾದಯಾತ್ರೆ ಮುಕ್ತಾಯವಾಗಲಿದೆ. ಆ ದಿನ ಶಿಕಾರಿಪುರ, ಸಾಗರ, ತೀರ್ಥಹಳ್ಳಿ ವಿಧಾನಸಭೆ ವ್ಯಾಪ್ತಿಯ ಕಾರ್ಯಕರ್ತರು ಪಾಲ್ಗೊಳ್ಳಲಿದ್ದಾರೆ.

Baby Props Studio in Shimoga

ಅ.11ರಂದು ಸಂಜೆ 4 ಗಂಟೆಗೆ ಸಾಣೆಕೆರೆಯಿಂದ ಪಾದಯಾತ್ರೆ ಆರಂಭವಾಗಲಿದೆ. ಸಂಜೆ 7 ಗಂಟೆಗೆ ಚಿತ್ರದುರ್ಗದ ಸಿದ್ಧಾಪುರ ಸಾಮ್ರಾಟ್ ನಗರ ಆರ್ಚ್ ಬಳಿ ಮುಕ್ತಾಯವಾಗಲಿದೆ. ಶಿವಮೊಗ್ಗ ಗ್ರಾಮಾಂತರ, ಭದ್ರಾವತಿ ಮತ್ತು ಶಿವಮೊಗ್ಗ ನಗರದ ಕಾರ್ಯಕರ್ತರು ಪಾಲ್ಗೊಳ್ಳಲಿದ್ದಾರೆ.

ಅ.12ರಂದು ಸಂಜೆ 4 ಗಂಟೆಗೆ ಗಿರಿಯಮ್ಮನ ಹಳ್ಳಿಯ ಆರ್ಚ್ ಬಳಿ ಪಾದಯಾತ್ರೆ ಆರಂಭವಾಗಲಿದೆ. ಸಂಜೆ 7 ಗಂಟೆಗೆ ಹಿರೇಹಳ್ಳಿ ಟೋಲ್ ಪ್ಲಾಜಾ ಬಳಿ ಮುಕ್ತಾಯವಾಗಲಿದೆ. ಸೊರಬ ಕ್ಷೇತ್ರದ ಕಾರ್ಯಕರ್ತರು ಆ ದಿನ ಪಾಲ್ಗೊಳ್ಳಲಿದ್ದಾರೆ ಎಂದು ಸುಂದರೇಶ್ ತಿಳಿಸಿದರು.

ಒಡೆದ ಮನಸುಗಳನ್ನು ಒಗ್ಗೂಡಿಸಲು ರಾಹುಲ್ ಗಾಂಧಿ ಅವರು ಭಾರತ್ ಜೋಡೋ (BHARAT JODO) ಯಾತ್ರೆ ಕೈಗೊಂಡಿದ್ದಾರೆ. ಅವರಿಗೆ ದೊಡ್ಡ ಮಟ್ಟದ ಬೆಂಬಲ ವ್ಯಕ್ತವಾಗಿದೆ. ಇದರಿಂದ ಬಿಜೆಪಿಯವರಿಗೆ ನಡುಕ ಶುರುವಾಗಿದೆ ಎಂದು ಸಂದರೇಶ್ ತಿಳಿಸಿದರು.

ಮಾಜಿ ಶಾಸಕರಾದ ಕೆ.ಬಿ.ಪ್ರಸನ್ನಕುಮಾರ್, ಆರ್.ಪ್ರಸನ್ನ ಕುಮಾರ್, ಪಾಲಿಕೆ ಸದಸ್ಯರಾದ ಹೆಚ್.ಸಿ.ಯೋಗೇಶ್, ರೇಖಾ ರಂಗನಾಥ್, ಯಮುನಾ ರಂಗೇಗೌಡ ಸೇರಿದಂತೆ ಹಲವರು ಪತ್ರಿಕಾಗೋಷ್ಠಿಯಲ್ಲಿ ಹಾಜರಿದ್ದರು.

Shimoga Nanjappa Hospital

ಕ್ಲಿಕ್ ಮಾಡಿ ಇದನ್ನೂ ಓದಿ ಬೆಳಗಿನ ಜಾವ ಭೂಮಿ ಕಂಪನ, ಡಿಸಿ ಭೇಟಿ, ಈತನಕ ಏನೇನಾಯ್ತು? ಭೂ ವಿಜ್ಞಾನಿಗಳು ಹೇಳೋದೇನು?

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment