ಶಿವಮೊಗ್ಗದಲ್ಲಿ ಅದ್ಧೂರಿ ಈದ್ ಮಿಲಾದ್ ಮೆರವಣಿಗೆ, ಹೇಗಿತ್ತು ವೈಭವ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

 SHIVAMOGGA LIVE NEWS 

SHIMOGA | ಈದ್ ಮಿಲಾದ್ (EID PROCESSION) ಅಂಗವಾಗಿ ನಗರದಲ್ಲಿ ಅದ್ಧೂರಿ ಮೆರವಣಿಗೆ ನಡೆಯಿತು. ದೊಡ್ಡ ಸಂಖ್ಯೆಯಲ್ಲಿ ಭಾಗವಹಿಸಿದ್ದ ಮುಸ್ಲಿಂ ಸಮುದಾಯದವರು ನಗರದಾದ್ಯಂತ ಮೆರವಣಿಗೆ ನಡೆಸಿದರು. ಮೆರವಣಿಗೆ ಹಿನ್ನೆಲೆ ನಗರ ಹಸಿರುಮಯವಾಗಿತ್ತು.

Shimoga Nanjappa Hospital

ಗಾಂಧಿ ಬಜಾರ್ ನಿಂದ ಆರಂಭವಾದ ಮೆರವಣಿಗೆ ನಗರದ ವಿವಿಧೆಡೆ ಸಾಗಿತು. ಸುಮಾರು 1 ಕಿ.ಮೀ ಉದ್ದವಿದ್ದ ಮೆರವಣಿಗೆಯಲ್ಲಿ ಮಕ್ಕಳಿಂದ ಹಿರಿಯರವರೆಗೆ ಎಲ್ಲರೂ ಭಾಗವಹಿಸಿದ್ದರು. ಹಸಿರು ಬಾವುಟಗಳನ್ನು ತಿರುಗಿಸುತ್ತ ಯುವಕರು ಉತ್ಸಾಹದಿಂದ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು.

ಗಮನ ಸೆಳೆದ ಮಾದರಿಗಳು EID PROCESSION

ಮೆರವಣಿಗೆಯಲ್ಲಿ ವಿವಿಧ ಕಲಾಕೃತಿಗಳು ಭಾಗವಹಿಸಿದ್ದವು. ನಗರದ ವಿವಿಧ ಮಸೀದಿ ಕಮಿಟಿಯವರು ಮೆಕ್ಕಾ, ಮದೀನ, ಗುಂಬಜ್, ಟಿಪ್ಪು ಸುಲ್ತಾನ್ ಮಾದರಿಗಳು ಮೆರವಣಿಗೆಯಲ್ಲಿ ಗಮನ ಸೆಳೆದವು. ಹಸಿರು ಧ್ವಜದ ಜೊತೆಗೆ ರಾಷ್ಟ್ರಧ್ವಜವನ್ನು ಹಿಡಿದು ಯುವಕರು ಮೆರವಣಿಗೆಯಲ್ಲಿ ಭಾಗವಹಿಸಿದ್ದರು.

ಮಹಿಳೆಯರು, ಮಕ್ಕಳು ಭಾಗಿ (EID PROCESSION)

ಈದ್ ಮೆರವಣಿಗೆ ಈ ಭಾರಿ ಮಹಿಳೆಯರು, ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದು ವಿಶೇಷವಾಗಿತ್ತು. ಪ್ರಮುಖ ಸರ್ಕಲ್ ಗಳು, ರಸ್ತೆಗಳಲ್ಲಿ ಮುಸ್ಲಿಂ ಸಮುದಾಯದ ಮಹಿಳೆಯರು, ಮಕ್ಕಳು ನಿಂತು ಮೆರವಣಿಗೆಯನ್ನು ಕಣ್ತುಂಬಿಕೊಂಡರು. ಸಾಮಾನ್ಯವಾಗಿ ಮುಸ್ಲಿಂ ಮಹಿಳೆಯರು ಮನೆಯ ಬಳಿ ನಿಂತು ಮೆರವಣಿಗೆ ವೀಕ್ಷಿಸುತ್ತಿದ್ದರು.

ಎಲ್ಲೆಲ್ಲಿ ಸಾಗಿತು ಈದ್ ಮೆರವಣಿಗೆ?

ಗಾಂಧಿ ಬಜಾರ್ ಜಾಮಿಯಾ ಮಸೀದಿ ಮುಂಭಾಗದಿಂದ ಮೆರವಣಿಗೆ ಆರಂಭವಾಯಿತು. ಅಲ್ಲಿಂದ ಗಾಂಧಿ ಬಜಾರ್ 2ನೇ ಅಡ್ಡರಸ್ತೆ, ನಾಗಪ್ಪನ ಕೇರಿ, ಲಷ್ಕರ್ ಮೊಹಲ್ಲಾ ಮುಖ್ಯ ರಸ್ತೆ ಮೂಲಕ ಓಲ್ಡ್ ಬಾರ್ ಲೈನ್ ರಸ್ತೆ, ಪೆನ್ಷನ್ ಮೊಹಲ್ಲಾ ಮೂಲಕ ಸಾಗಿತು. ಬಳಿಕ ಬಿ.ಹೆಚ್.ರಸ್ತೆ, ಮೀನಾಕ್ಷಿ ಭವನ, ಟ್ಯಾಂಕ್ ಬಾಂಡ್ ರಸ್ತೆ, ಬಾಪೂಜಿ ನಗರ ಮುಖ್ಯ ರಸ್ತೆ, ಟ್ಯಾಂಕ್ ಮೊಹಲ್ಲಾ, ಬಾಲರಾಜ ಅರಸ್ ರಸ್ತೆ, ಮಹಾವೀರ ಸರ್ಕಲ್, ಗೋಪಿ ಸರ್ಕಲ್, ನೆಹರೂ ರಸ್ತೆ ಮೂಲಕ ಅಮೀರ್ ಅಹಮದ್ ಸರ್ಕಲ್ ತಲುಪಿತು.

ಕ್ಲಿಕ್ ಮಾಡಿ ಇದನ್ನೂ ಓದಿ ಶಿವಮೊಗ್ಗದ ಅಮೀರ್ ಅಹಮದ್ ಸರ್ಕಲ್ ಜಗಮಗ, ಕಣ್ತುಂಬಿಕೊಳ್ಳಲು ಜನವೋ ಜನ

ಬಿ.ಹೆಚ್.ರಸ್ತೆ ಮೂಲಕ ಅಶೋಕ ಸರ್ಕಲ್, ಎನ್.ಟಿ.ರಸ್ತೆ, ಗುರುದೇವ ರಸ್ತೆ, ಕ್ಲಾರ್ಕ್ ಪೇಟೆ, ನೂರಾನಿ ಮಸೀದಿ, ಕೆ.ಆರ್.ಪುರಂ ರಸ್ತೆ ಮಾರ್ಗವಾಗಿ ಅಮೀರ್ ಅಹಮದ್ ಸರ್ಕಲ್ ತಲುಪಿತು.

ಬಿಗಿ ಪೊಲೀಸ್ ಬಂದೋಬಸ್ತ್

ಈದ್ ಮಿಲಾದ್ ಮೆರವಣಿಗೆ ಅಂಗವಾಗಿ ಶಿವಮೊಗ್ಗ ನಗರದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿತ್ತು. ಮೆರವಣಿಗೆ ಸಾಗುವ ಹಾದಿ ಉದ್ದಕ್ಕೂ ಪೊಲೀಸರನ್ನು ನಿಯೋಜನೆ ಮಾಡಲಾಗಿತ್ತು.

Shimoga Nanjappa Hospital

ಕ್ಲಿಕ್ ಮಾಡಿ ಇದನ್ನೂ ಓದಿ ಶಿವಮೊಗ್ಗ ಬೈಪಾಸ್ ರಸ್ತೆ, ಬೈಕಿಗೆ ಹಿಂಬದಿಯಿಂದ ಮತ್ತೊಂದು ಬೈಕ್ ಡಿಕ್ಕಿ, ಸವಾರನ ಕಾಲಿಗೆ ಸರ್ಜರಿ

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment