ಭದ್ರಾವತಿಯಲ್ಲಿ ಯಾರೂ ಇಲ್ಲದಾಗ ಮನೆಗೆ ನುಗ್ಗಿದರು, ಮೂರು ಹಂಡೆ ಕದ್ದೊಯ್ದರು

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

 SHIVAMOGGA LIVE NEWS 

BHADRAVATHI | ಮನೆಯಲ್ಲಿ ಯಾರೂ ಇಲ್ಲದ ವೇಳೆ ಕಿಟಕಿ ತೆಗೆದು ಒಳ ನುಗ್ಗಿರುವ ಕಳ್ಳರು ಹಂಡೆಗಳು, ಲ್ಯಾಪ್ ಟಾಪ್ ಬ್ಯಾಗ್ (LAPTOP BAG) ಮತ್ತು ವೈಫೈ ಸ್ಪೀಕರ್ ಕದ್ದೊಯ್ದಿದ್ದಾರೆ.

Shimoga Nanjappa Hospital

ಭದ್ರಾವತಿ ನ್ಯೂ ಟೌನ್ ನಲ್ಲಿರುವ ಗೋಪಿ ಎಂಬುವವರ ಮನೆಯಲ್ಲಿ ಕಳ್ಳತನವಾಗಿದೆ. ಗೋಪಿ ಅವರು ತಮ್ಮ ಊರು ಆಂಧ್ರಕ್ಕೆ ತೆರಳಿದ್ದರು. ಅಲ್ಲಿಂದ ಭದ್ರಾವತಿಯ ಮನೆಗೆ ಹಿಂತಿರುಗಿದಾಗ ಹಿಂಬದಿಯ ಕಿಟಕಿ ತೆಗೆದಿರುವುದನ್ನು ಗಮನಿಸಿದ್ದರು.

ಮನೆಯ ಬಾಗಿಲು ತೆಗೆದು ನೋಡಿದಾಗ ವಸ್ತುಗಳೆಲ್ಲ ಚಲ್ಲಾಪಿಲ್ಲಿಯಾಗಿದ್ದವು. ಎಲ್ಲೆಡೆ ಪರಿಶೀಲಿಸಿದಾಗ ದೇವರ ಮನೆಯಲ್ಲಿದ್ದ ಮೂರು ಹಂಡೆಗಳು ಕಾಣೆಯಾಗಿದ್ದವು. ಟೇಬಲ್ ಮೇಲೆ ಇಟ್ಟಿದ್ದ ಲೆನೋವೋ ಕಂಪನಿಯ ಲ್ಯಾಪ್ ಟಾಪ್  (LAPTOP BAG) ಬ್ಯಾಗ್, ವೈಫೈ ಸ್ಪೀಕರ್ ಗಳು ನಾಪತ್ತೆಯಾಗಿದ್ದವು ಎಂದು ದೂರಿನಲ್ಲಿ ತಿಳಿಸಿದ್ದಾರೆ. ಇವುಗಳ ಒಟ್ಟು ಮೌಲ್ಯ 32 ಸಾವಿರ ರೂ. ಎಂದು ಅಂದಾಜಿಸಲಾಗಿದೆ.

ಭದ್ರಾವತಿ ನ್ಯೂ ಟೌನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ನಡೆಯುತ್ತಿದೆ.

Shimoga Nanjappa Hospital

ಕ್ಲಿಕ್ ಮಾಡಿ ಇದನ್ನೂ ಓದಿ ಹೊಸಮನೆ ಬಳಿ ರಾಷ್ಟ್ರಮಟ್ಟದ ಶಟಲ್ ಬ್ಯಾಡ್ಮಿಂಟನ್ ಆಟಗಾರನಿಗೆ ಕಾರು ಡಿಕ್ಕಿ

ADVERTISEMENT LAPTOP BAG

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : October 10, 2022

Leave a Comment