ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
[su_highlight background=”#d70000″ color=”#ffffff”]SHIVAMOGGA LIVE NEWS[/su_highlight]
SHIMOGA | ಬಜರಂಗದಳ ಕಾರ್ಯಕರ್ತ ಹಿಂದೂ ಹರ್ಷ ಹತ್ಯೆ ಪ್ರಕರಣದ 10ನೇ ಆರೋಪಿಗೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ವಿಶೇಷ ನ್ಯಾಯಾಲಯ (NIA COURT) ಷರತ್ತುಬದ್ಧ ಜಾಮೀನು ನೀಡಿದೆ.

ಹಿಂದೂ ಹರ್ಷ ಹತ್ಯೆ ಪ್ರಕರಣದ 10ನೇ ಆರೋಪಿ ಜಾಫರ್ ಸಾದಿಕ್ (52) ಎಂಬಾತನಿಗೆ ಗುರುವಾರ ಎನ್ಐಎ ವಿಶೇಷ ನ್ಯಾಯಾಲಯ ಜಾಮೀನು ನೀಡಿದೆ.
ಏನೆಲ್ಲ ಷರತ್ತು ವಿಧಿಸಲಾಗಿದೆ? (NIA COURT)
ಜಾಫರ್ ಸಾದಿಕ್ ಗೆ 50 ಸಾವಿರ ರೂ. ವೈಯಕ್ತಿಕ ಬಾಂಡ್, ಶೂರಿಟಿ ನೀಡುವಂತೆ ಸೂಚಿಸಿದೆ. ಇನ್ನು, ನ್ಯಾಯಾಲಯ ವಿನಾಯಿತಿ ನೀಡದ ಹೊರತು ತಪ್ಪದೆ ವಿಚಾರಣೆಗೆ ಹಾಜರಾಗಬೇಕು. ಅಲ್ಲದೆ ಪ್ರಕರಣದ ಸಾಕ್ಷಿ ನಾಶ ಪಡಿಸಬಾರದು, ಸಾಕ್ಷಿಗಳಿಗೆ ಬೆದರಿಕೆ ಹಾಕಬಾರದು. ಯಾವುದೆ ಅಪರಾಧ ಚಟುವಟಿಕೆಯಲ್ಲಿ ಭಾಗಿಯಾಗಬಾರದು ಎಂದು ನ್ಯಾಯಾಲಯ ಷರತ್ತು ವಿಧಿಸಿದೆ.
ಜಾಮೀನು ನೀಡಲು ಕಾರಣವೇನು?
ಆರೋಪಿ ಜಾಫರ್ ಸಾದಿಕ್ ಗೆ ಜಾಮೀನು ನೀಡದಂತೆ ಎನ್ಐಎ ಪರ ವಕೀಲರು ವಿರೋಧ ವ್ಯಕ್ತಪಡಿಸಿದ್ದರು. ‘ಜಾಫರ್ ಖರಿದಿಸಿದ್ದ ಕಾರುಗಳನ್ನು ಕೃತ್ಯಕ್ಕೆ ಬಳಕೆ ಮಾಡಲಾಗಿದೆ. ಅಲ್ಲದೆ ಆತನ ಪುತ್ರ ಕೂಡ ಪ್ರಕರಣದಲ್ಲಿ ಭಾಗಿಯಾಗಿದ್ದು, ಆತನ ರಕ್ಷಣೆಗೆ ಮುಂದಾಗಿದ್ದ. ಇತರೆ ಆರೋಪಿಗಳ ಕೃತ್ಯದ ಕುರಿತು ಜಾಫರ್ ಗೆ ಮಾಹಿತಿ ಇದೆ’ ಎಂದು ವಾದಿಸಿದ್ದರು.
ವಾದ ಆಲಿಸಿದ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ನ್ಯಾ. ಸಿ.ಎಂ.ಗಂಗಾಧರ್ ಅವರು, ಜಾಫರ್ ಸಾದಿಕ್ ಮೇಲಿನ ಆರೋಪ ಜಾಮೀನು ನಿರಾಕರಿಸುವಂತದ್ದಲ್ಲ ಎಂದು ಘೋಷಿಸಿದರು.
ಯಾರಿದು ಜಾಫರ್ ಸಾದಿಕ್? (NIA COURT)
ಜಾಫರ್ ಸಾದಿಕ್, ಸಕೆಂಡ್ ಹ್ಯಾಂಡ್ ಕಾರುಗಳ ಡೀಲರ್. ಅಲ್ಲದೆ ಹರ್ಷ ಹತ್ಯೆ ಪ್ರಕರಣದ 6ನೇ ಆರೋಪಿ ಜಿಲಾನ್ ಎಂಬಾತನ ತಂದೆ.
ಪುತ್ರ ಜಿಲಾನ್, ಹರ್ಷ ಹತ್ಯೆ ಪ್ರಕರಣದಲ್ಲಿ ಭಾಗಿಯಾದ ವಿಚಾರ ತಿಳಿದು ಆತನ ರಕ್ಷಣೆಗೆ ಮುಂದಾಗಿದ್ದ. ಬೆಂಗಳೂರಿನಲ್ಲಿರುವ ಸ್ನೇಹಿತನ ಮನೆಯಲ್ಲಿ ಪುತ್ರ ಜಿಲಾನ್ ಗೆ ಆಶ್ರಯ ಕೊಡಿಸಿದ್ದ. ಇನ್ನು, ಜಾಫರ್ ಸಾದಿಕ್ ಖರೀದಿಸಿದ್ದ ಕಾರುಗಳನ್ನು ಆರೋಪಿಗಳು ಕೃತ್ಯಕ್ಕೆ ಮತ್ತು ಪರಾರಿಯಾಗಲು ಬಳಕೆ ಮಾಡಿದ್ದರು. ಇದೆ ಕಾರಣಕ್ಕೆ ಫೆ.24ರಂದು ಜಾಫರ್ ಸಾದಿಕ್ ನನ್ನು ಬಂಧಿಸಲಾಗಿತ್ತು.
ಕ್ಲಿಕ್ ಮಾಡಿ ಇದನ್ನೂ ಓದಿ | ಹೋರಾಟ ಮತ್ತಷ್ಟು ತೀವ್ರ, ಅ.18ರಂದು ವಿಧಾನ ಸೌಧ ಚಲೋ, ಶಿವಮೊಗ್ಗದಿಂದಲೂ ಜನ ಭಾಗಿ
ADVERTISEMENT
- ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
- ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422
SHIVAMOGGA LIVE WHATSAPP
ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಮಲವಗೊಪ್ಪದ ಭದ್ರಾ ನಾಲೆಯಲ್ಲಿ ನಾಪತ್ತೆಯಾಗಿದ್ದ ಹರಿಗೆಯ ಬಾಲಕ ಶವವಾಗಿ ಪತ್ತೆ, ಆಗಿದ್ದೇನು?

- ಶಿವಮೊಗ್ಗದಲ್ಲಿ ಆಲಿಕಲ್ಲು ಮಳೆ, ಎಲ್ಲೆಲ್ಲಿ ಹೇಗಿತ್ತು ಭಾನುವಾರದ ವರ್ಷಧಾರೆ? ಎಲ್ಲೆಲ್ಲಿ ಹಾನಿಯಾಗಿದೆ?

- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು
















