ಭೂತಾನ್ ಅಡಕೆ ಭೀತಿ, ಎಲೆ ಚುಕ್ಕಿ ರೋಗದಿಂದ ಫಜೀತಿ, ಶಿವಮೊಗ್ಗದಲ್ಲಿ ಬೀದಿಗಿಳಿದ ಬೆಳೆಗಾರರು

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

 SHIVAMOGGA LIVE NEWS 

SHIMOGA | ಭೂತಾನ್ ದೇಶದಿಂದ (BHUTAN ADIKE) ಅಡಕೆ ಆಮದು ರದ್ದುಗೊಳಿಸಬೇಕು. ಎಲೆ ಚುಕ್ಕಿ ಬಾಧಿತ ತೋಟದ ರೈತರಿಗೆ ಪರಿಹಾರ ನೀಡಬೇಕು. ಅಡಕೆ ಸಂಶೋಧನಾ ಕೇಂದ್ರ ಸ್ಥಾಪಿಸಬೇಕು ಎಂದು ಆಗ್ರಹಿಸಿ ಶಿವಮೊಗ್ಗದಲ್ಲಿ ರೈತ ಸಂಘ ಮತ್ತು ಹಸಿರು ಸೇನೆ, ಅಡಕೆ ಮಾರಾಟ ಸಹಕಾರ ಸಂಘಗಳ ಒಕ್ಕೂಟದ ವತಿಯಿಂದ ಪ್ರತಿಭಟನೆ ನಡೆಸಲಾಯಿತು.

Shimoga Nanjappa Hospital

ಖಾಸಗಿ ಬಸ್ ನಿಲ್ದಾಣದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಪ್ರತಿಭಟನಾಕಾರರು ಮೆರವಣಿಗೆ ಮಾಡಿದರು. ಬಳಿಕ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.

(BHUTAN ADIKE)

ಅಡಕೆ ಧಾರಣೆ ಕುಸಿತದ ಆತಂಕ 

ಕೇಂದ್ರ ಸರ್ಕಾರ ಭೂತಾನ್ ದೇಶದಿಂದ 17 ಸಾವಿರ ಮೆಟ್ರಿಕ್ ಟನ್ ಅಡಕೆ ಆಮದು ಮಾಡಿಕೊಳ್ಳಲು ನಿರ್ಧರಿಸಿದೆ. ಇದಕ್ಕೆ ಅಮದು ಸುಂಕದಿಂದ ವಿನಾಯಿತಿ ನೀಡಲಾಗಿದೆ. ಈ ಅಡಕೆ ಬರುವುದರಿಂದ ಸ್ಥಳೀಯ ಬೆಳೆಗಾರರಿಗೆ ಯಾವುದೆ ತೊಂದರೆ ಆಗುವುದಿಲ್ಲ ಎಂದು ಅಡಕೆ ಕಾರ್ಯಪಡೆ ಅಧ್ಯಕ್ಷ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ. ಆದರೆ ಸ್ಥಳೀಯ ಮಾರುಕಟ್ಟೆಯಲ್ಲಿ ಅಡಕೆ ಧಾರಣೆ ಕುಸಿತವಾಗಲಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

ಕ್ಲಿಕ್ ಮಾಡಿ ಇದನ್ನೂ ಓದಿ ಜಗತ್ತಿನ ಶ್ರೇಷ್ಠ ವಿಜ್ಞಾನಿಗಳ ಪಟ್ಟಿಯಲ್ಲಿ ಕುವೆಂಪು ವಿವಿಯ ಇಬ್ಬರಿಗೆ ಸ್ಥಾನ

ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ರೈತ ಸಂಘ ಮತ್ತು ಹಸಿರು ಸೇನೆಯ ರಾಜ್ಯಾಧ್ಯಕ್ಷ ಹೆಚ್.ಆರ್.ಬಸವರಾಜಪ್ಪ ಅವರು, ಭೂತಾನ್ ಅಡಕೆ ಆಮದು ನಿಲ್ಲಿಸಬೇಕು. ಎಲೆ ಚುಕ್ಕಿ ರೋಗಕ್ಕೆ ಔಷಧ ಒದಗಿಸಲು ರಾಜ್ಯ ಸರ್ಕಾರ 10 ಕೋಟಿ ರೂ. ಮಂಜೂರು ಮಾಡಿದೆ. ಇದನ್ನು 100 ಕೋಟಿ ರೂ.ಗೆ ಹೆಚ್ಚಳ ಮಾಡಬೇಕು. ಅಡಕೆಗೆ ವಿವಿಧ ರೋಗಗಳು ಬಾಧಿಸುತ್ತಿದ್ದು ಅದರ ಸಂಶೋಧನೆಗೆ ಕೂಡಲೆ ಅಡಕೆ ಸಂಶೋಧನಾ ಕೇಂದ್ರ ಸ್ಥಾಪಿಸಬೇಕು ಎಂದು ಆಗ್ರಹಿಸಿದರು.

protest against bhutan areca adike

(BHUTAN ADIKE)

‘ಮೂರು ಕಾಸಿನ ಬೆಲೆಯಿಲ್ಲ’

ಅಡಕೆಯಿಂದ ಈ ಭಾಗದ ರೈತರಿಗೆ ಚೈತನ್ಯ ಮೂಡಿತ್ತು. ಆದರೆ ಆಮದು ಮಾಡಿಕೊಳ್ಳುವುದರಿಂದ ಬೆಲೆ ಕುಸಿತ ಉಂಟಾಗಲಿದೆ. ಇತ್ತ ಅಡಕೆ ಟಾಸ್ಕ್ ಫೋರ್ಸ್ ಗೆ ಮೂರು ಕಾಸಿನ ಬೆಲೆ ಇಲ್ಲ. ಅದರ ಅಧ್ಯಕ್ಷ ಆರಗ ಜ್ಞಾನೇಂದ್ರ ಸುಳ್ಳು ಹೇಳುವುದರಲ್ಲಿ ನಂಬರ್ 1. ಅಡಕೆ ಆಮದು ಮಾಡಿಕೊಳ್ಳುವುದರಿಂದ ಸ್ಥಳೀಯ ಬೆಳೆಗಾರರಿಗೆ ಯಾವುದೆ ಸಮಸ್ಯೆ ಇಲ್ಲ ಅನ್ನುತ್ತಿದ್ದಾರೆ. ಸಾಗರದ ಶಾಸಕರು ಸಮಸ್ಯೆಯಾಗುತ್ತದೆ ಅನ್ನುತ್ತಿದ್ದಾರೆ. ಈ ಮೂಲಕ ರೈತರನ್ನು ಗೊಂದಲಕ್ಕೀಡು ಮಾಡುತ್ತಿದ್ದಾರೆ.ತೀ.ನಾ.ಶ್ರೀನಿವಾಸ್, ಕಾಂಗ್ರೆಸ್ ಪಕ್ಷದ ಮಾಜಿ ಜಿಲ್ಲಾಧ್ಯಕ್ಷ

ಅಡಕೆ ಮಾರಾಟ ಸಹಕಾರ ಸಂಘಗಳ ಒಕ್ಕೂಟದ ಪಾಧಿಕಾರಿಗಳು, ವಿವಿಧೆಡೆಯ ರೈತರು ಪ್ರತಿಭಟೆನೆಯಲ್ಲಿ ಭಾಗಿಯಾಗಿದ್ದರು.

JNNCE College shimoga

ಕ್ಲಿಕ್ ಮಾಡಿ ಇದನ್ನೂ ಓದಿ ಗ್ರಾಮ ಪಂಚಾಯಿತಿ ಒಂದು ಸ್ಥಾನಕ್ಕೆ ಉಪ ಚುನಾವಣೆ, ಶಿವಮೊಗ್ಗ ಡಿಸಿಯಿಂದ ಅಧಿಸೂಚನೆ

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment