ಡಿಸೇಲ್ ಸುರಿದುಕೊಂಡರು, ಪೊಲೀಸ್ ಬಸ್, ಜೆಸಿಬಿಗೆ ಅಡ್ಡಲಾಗಿ ಮಲಗಿದರು, ಕಾರ್ಯಾಚರಣೆ ವೇಳೆ ಹೈಡ್ರಾಮಾ

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

 SHIVAMOGGA LIVE NEWS 

SHIMOGA | ತುಂಗಾ ಮೇಲ್ದಂಡೆ ಯೋಜನೆ ವ್ಯಾಪ್ತಿಗೆ ಸೇರಿದ ಜಾಗದಲ್ಲಿ ಅಕ್ರಮವಾಗಿ ಮನೆಗಳನ್ನು ನಿರ್ಮಾಣ ಮಾಡಲಾಗಿದ್ದು, ಅವುಗಳ ತೆರವು ಕಾರ್ಯಾಚರಣೆ (DEMOLITION) ನಡೆಸಲಾಯಿತು. ಈ ಸಂದರ್ಭ ಸ್ಥಳೀಯರು ಜೆಸಿಬಿಗೆ ಅಡ್ಡಲಾಗಿ ಮಲಗಿ ಕಾರ್ಯಾಚರಣೆಗೆ ಪ್ರತಿರೋಧ ಒಡ್ಡಿದರು. ಪೊಲೀಸರ ಎದುರಲ್ಲೆ ಮೈಮೇಲೆ ಡಿಸೇಲ್ ಸುರಿದುಕೊಂಡು ಆತ್ಮಹತ್ಯೆಗೂ ಯತ್ನಿಸಿದ ಘಟನೆ ನಡೆಯಿತು.

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

Shimoga Nanjappa Hospital

ಸಾಗರ ರಸ್ತೆಯ ಮಲ್ಲಿಗೇನಹಳ್ಳಿಯ ಡಾ. ಬಿ.ಆರ್.ಅಂಬೇಡ್ಕರ್ ಕಾಲೋನಿಯಲ್ಲಿ ಇವತ್ತು ಒತ್ತುವರಿ ತೆರವು ಕಾರ್ಯಾಚರಣೆ ನಡೆಸಲಾಯಿತು. ನ್ಯಾಯಾಲಯದ ಆದೇಶದ ಮೇರೆಗೆ ತುಂಗಾ ಮೇಲ್ದಂಡೆ ಯೋಜನೆ ಅಧಿಕಾರಿಗಳು ಜೆಸಿಬಿಯೊಂದಿಗೆ ಕಾರ್ಯಾಚರಣೆಗೆ ಇಳಿದಿದ್ದರು. ವಿರೋಧ ವ್ಯಕ್ತವಾಗುವ ಮುನ್ಸೂಚನೆ ಹಿನ್ನೆಲೆ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿತ್ತು.

(DEMOLITION)

ಖಾಕಿ ಸರ್ಪಗಾವಲಿನಲ್ಲಿ ಕಾರ್ಯಾಚರಣೆ

ಮಲ್ಲಿಗೇನಹಳ್ಳಿಯಲ್ಲಿ 5.30 ಎಕರೆ ಜಾಗ ಒತ್ತುವರಿಯಾಗಿದೆ. ಅದರಲ್ಲಿ ಸುಮಾರು 200 ಮನೆಗಳನ್ನ ನಿರ್ಮಾಣ ಮಾಡಲಾಗಿದೆ. ಹೈಕೋರ್ಟ್ ಆದೇಶದ ಹಿನ್ನೆಲೆ ಒತ್ತುವರಿ ತೆರವು ಕಾರ್ಯಾಚರಣೆ ನೆಡಸಲಾಗುತ್ತಿದೆ ಎಂದು ತುಂಗಾ ಮೇಲ್ದಂಡೆ ಯೋಜನೆ ಅಧಿಕಾರಿಗಳು ಕಾರ್ಯಾಚರಣೆ ಆರಂಭಿಸಿದ್ದರು. ಈ ವೇಳೆ ದಲಿತ ಸಂಘರ್ಷ ಸಮಿತಿ ನೇತೃತ್ವದಲ್ಲಿ ಸ್ಥಳೀಯರು ಪ್ರತಿರೋಧ ವ್ಯಕ್ತಪಡಿಸಿದರು. ಜೆಸಿಬಿಗೆ ಅಡ್ಡಲಾಗಿ ಮಲಗಿ ಆಕ್ರೋಶ ಹೊರಹಾಕಿದರು. ಅಹಿತಕರ ಘಟನೆಗಳು ನಡೆಯಬಾರದು ಎಂದು ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿತ್ತು.

ಕ್ಲಿಕ್ ಮಾಡಿ ಇದನ್ನೂ ಓದಿ ‘ನಿಮ್ಮ ಸರ್ವನಾಶಕ್ಕೆ ನೀವೆ ಕಾರಣ’, ಪ್ರತಿಜ್ಞೆಯಾಗಿ ವಾರಕ್ಕೆ ವ್ಯಕ್ತಿ ಸಾವು, ಗ್ರಾಮದಲ್ಲಿ ಆಕ್ರೋಶ

(DEMOLITION)

ಮಧ್ಯಾಹ್ನದವರೆಗೆ ಮುಂದುವರೆದ ಹೋರಾಟ

ಜೆಸಿಬಿ ಬಳಸಿ ಮನೆಗಳ ತೆರವು ಕಾರ್ಯಾಚರಣೆಗೆ ತುಂಗಾ ಮೇಲ್ದಂಡೆ  ಯೋಜನೆ ಅಧಿಕಾರಿಗಳು ಸಿದ್ಧವಾಗಿದ್ದರು. ಆದರೆ ಸ್ಥಳೀಯರ ಪ್ರತಿಭಟನೆ ಹಿನ್ನೆಲೆ ಮಧ್ಯಾಹ್ನದವರೆಗೆ ಕಾರ್ಯಾಚರಣೆ ಸ್ಥಗಿತಗೊಳಿಸಲಾಯಿತು. ಶಾಸಕರು, ಜಿಲ್ಲಾಧಿಕಾರಿ ಅವರು ಸ್ಥಳಕ್ಕೆ ಭೇಟಿ ನೀಡಬೇಕು ಎಂದು ಸ್ಥಳೀಯರು ಆಗ್ರಹಿಸಿದರು. ಆದರೆ ಯಾರಬ್ಬರೂ ಸ್ಥಳಕ್ಕೆ ಭೇಟಿ ನೀಡದಿದ್ದರಿಂದ ಪುನಃ ಕಾರ್ಯಚರಣೆಗೆ ಸಿದ್ಧತೆ ಮಾಡಿಕೊಳ್ಳಲಾಯಿತು.

demolition at malligenahalli in Shimoga

ಮಾಜಿ ಎಂಎಲ್ಎ ಭೇಟಿ

ಮಾಜಿ ಕೆ.ಬಿ.ಪ್ರಸನ್ನ ಕುಮಾರ್ ಅವರು ಸ್ಥಳಕ್ಕೆ ಭೇಟಿ ನೀಡಿ, ದಲಿತ ಸಂಘರ್ಷ ಸಮಿತಿ ಮುಖಂಡರು, ಸ್ಥಳೀಯರು ಮತ್ತು ಅಧಿಕಾರಿಗಳಿಂದ ಮಾಹಿತಿ ಪಡೆದರು.

ಅಂಬೇಡ್ಕರ್ ನಗರದ ಹಕ್ಕಿಪಿಕ್ಕಿ ಕ್ಯಾಂಪ್ ಗೆ ಸರ್ಕಾರ ಕುಡಿಯುವ ನೀರು, ಅಂಗನವಾಡಿ ವ್ಯವಸ್ಥೆ ಮಾಡಿದೆ. ಈ ಜಾಗದ ಮಾಲೀಕರು ಸರ್ಕಾರ ಮತ್ತು ತುಂಗಾ ಮೇಲ್ದಂಡೆ ಪ್ರಾಧಿಕಾರ. ಸರ್ಕಾರಿ ಅಧಿಕಾರಿಗಳು ನೋಟಿಸ್ ಕೊಟ್ಟಿದ್ದೇವೆ ಎಂದು ಹೇಳುತ್ತಿದ್ದಾರೆ. 129 ಮನೆಗಳನ್ನು ತೆರವು ಮಾಡುವಂತೆ ತಿಳಿಸಿದ್ದಾರೆ. ಸ್ಲಂ ನಿವಾಸಿಗಳಿಗೆ ರಕ್ಷಣೆ ಕೊಡಲು ಸ್ಲಂ ಬೋರ್ಡ್ ಇದೆ. ಆದರೆ ಆ ಇಲಾಖೆಗೆ ಸಂಬಂಧಿಸಿದ ಯಾವೊಬ್ಬ ಅಧಿಕಾರಿಯೂ ಬಂದಿಲ್ಲ. ಇದಕ್ಕೆ ಸರ್ಕಾರದ ಕುಮ್ಮಕ್ಕು ಇದೆ. ಕಾನೂನು ಪ್ರಕಾರ ಇಲ್ಲಿಯ ನಿವಾಸಿಗಳಿಗೆ ಖಾತೆ ಮಾಡಿಕೊಡಬೇಕು.ಕೆ.ಬಿ.ಪ್ರಸನ್ನ ಕುಮಾರ್, ಮಾಜಿ ಶಾಸಕ

20 ನಿಮಿಷ ಕಾಲವಕಾಶ

ಬಹು ಹೊತ್ತು ಕಾರ್ಯಾಚರಣೆ (DEMOLITION) ಸ್ಥಗಿತಗೊಳಿಸಲಾಗಿತ್ತು. ಪ್ರತಿಭಟನಾನಿರತರೊಂದಿಗೆ ಮಾತನಾಡಿದ ತುಂಗಾ ಮೇಲ್ದಂಡೆ ಯೋಜನೆ ಅಧಿಕಾರಿಗಳು, 20 ನಿಮಿಷ ಕಾಲವಕಾಶ ನೀಡಿದರು. ಸಮಯ ಮುಗಿಯುತ್ತಿದ್ದಂತೆ ತೆರವು ಕಾರ್ಯಾಚರಣೆ ಆರಂಭಿಸಿದರು. ಹೊಸತಾಗಿ ನಿರ್ಮಾಣವಾಗಿದ್ದ ಕಟ್ಟಡಗಳನ್ನು ತೆರವು ಮಾಡಿದರು.

demolition at malligenahalli in Shimoga

ಡಿಸೇಲ್ ಸುರಿದುಕೊಂಡು ಹೈಡ್ರಾಮಾ

ಜೆಸಿಬಿಗಳು ಮನೆಗಳ ತೆರವು ಕಾರ್ಯಾಚರಣೆ (DEMOLITION) ಆರಂಭ ಮಾಡುತ್ತಿದ್ದಂತೆ, ಪ್ರತಿಭಟನೆ ನಡೆಸುತ್ತಿದ್ದ ಇಬ್ಬರು ಮೈಮೇಲೆ ಡಿಸೇಲ್ ಸುರಿದುಕೊಂಡು, ಆತ್ಮಹತ್ಯೆಗೆ ಯತ್ನಿಸಿದರು. ಇದರಿಂದ ಸ್ಥಳದಲ್ಲಿ ಕೆಲ ಹೊತ್ತು ಬಿಗುವಿನ ವಾತಾವರಣ ನಿರ್ಮಾಣಾಯಿತು. ಇನ್ನು, ಪೊಲೀಸರು ಕೆಲವರನ್ನು ಬಂಧಿಸಿ ಕರೆದೊಯ್ಯಲು ಮುಂದಾದರು. ಆಗ ಮಹಿಳೆಯರು ಬಸ್ಸಿನ ಮುಂಭಾಗ ಮಲಗಿ ಪ್ರತಿಭಟಿಸಿದರು.

ಹೈಕೋರ್ಟ್ ಆದೇಶದಂತೆ ತುಂಗಾ ಮೇಲ್ದಂಡೆ ಯೋಜನೆ ಅಧಿಕಾರಿಗಳು ಕೆಲವು ಮನೆಗಳನ್ನು ತೆರವು ಮಾಡಿದರು. ಅಲ್ಲದೆ ಒತ್ತುವರಿ ತೆರವು ಮಾಡುವಂತೆ ಸೂಚನೆಯನ್ನು ನೀಡಿದರು.

demolition at malligenahalli in Shimoga

demolition at malligenahalli in Shimoga

demolition at malligenahalli in Shimoga

 

demolition at malligenahalli in Shimoga

demolition at malligenahalli in Shimoga

Shimoga Nanjappa Hospital

demolition at malligenahalli in Shimoga

demolition at malligenahalli in Shimoga

Shimoga Nanjappa Hospital

demolition at malligenahalli in Shimoga

demolition at malligenahalli in Shimoga

demolition at malligenahalli in Shimoga

jnnce college of engineering

ಕ್ಲಿಕ್ ಮಾಡಿ ಇದನ್ನೂ ಓದಿ ಶಿವಮೊಗ್ಗ – ಸಾಗರ ಹೆದ್ದಾರಿಯಲ್ಲಿ ಅಪಘಾತ, ಮಾಜಿ ಸೈನಿಕ ಸಾವು

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment