‘ಅಡಕೆಗಷ್ಟೇ ಅಲ್ಲ, ಕೇಂದ್ರ, ರಾಜ್ಯ ಸರ್ಕಾರಕ್ಕೂ ಕೊಳೆ ರೋಗ ಬಂದಿದೆ’

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

 SHIVAMOGGA LIVE NEWS 

ಶಿವಮೊಗ್ಗ : ಕೊಳೆ ರೋಗದ ಕುರಿತು ನಿರ್ಲಕ್ಷ್ಯ ವಹಿಸಿರುವ ಸರ್ಕಾರಕ್ಕೆ ಕೊಳೆ ರೋಗ ಬಂದಿದೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ (CONGRESS PRESIDENT) ಹೆಚ್.ಎಸ್. ಸುಂದರೇಶ್ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Shimoga Nanjappa Hospital

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಹೆಚ್.ಎಸ್.ಸುಂದರೇಶ್ ಅವರು, ಕೊಳೆ ರೋಗದಿಂದ ಅಡಕೆ ಬೆಳೆ ನಾಶವಿರಲಿ, ತೋಟಗಳೇ ವಿನಾಶದತ್ತ ಸಾಗಿವೆ. ರೈತರು ಆತ್ಮಹತ್ಯೆ ದಾರಿ ತುಳಿದಿದ್ದಾರೆ. ತೋಟಗಾರಿಕೆ ಇಲಾಖೆ ಮತ್ತು ತಜ್ಞರು ನೀಡಿದ ಸಲಹೆಗಳು, ಔಷಧಿ ಪ್ರಯೋಜನಕ್ಕೆ ಬರುತ್ತಿಲ್ಲ. ಅಡಕೆ ಬೆಳೆಗಾರರ ಜೊತೆಗೆ ಕೃಷಿಕ ಕೂಲಿ ಮಾಡುವವರ ಕುಟುಂಬದವರು ಸಂಕಷ್ಟ ಪಡುತ್ತಿದ್ದಾರೆ. ರೈತರ ಹೆಸರಲ್ಲಿ ಅಧಿಕಾರ ಹಿಡಿದವರು ಈಗ ಅವರನ್ನೆ ಮರೆತಿದ್ದಾರೆ. ಇದನ್ನ ಗಮನಿಸಿದಾಗ, ನಿಜವಾಗಿಯೂ ರೋಗ ಬಂದಿರುವುದು ರೈತರನ್ನು ನಿರ್ಲಕ್ಷಿಸಿದ ಸರ್ಕಾರಕ್ಕೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಗಾಯದ ಮೇಲೆ ಬರೆ ಎಂಬಂತೆ ಕೇಂದ್ರ ಸರ್ಕಾರ ಅಡಕೆಯನ್ನು ಆಮದು ಮಾಡಿಕೊಳ್ಳಲು ಹೊರಟಿದೆ. ದೇಶೀಯ ಅಡಕೆಯೇ ರಫ್ತು ಮಾಡುವಷ್ಟು ಇರುವಾಗ ಭೂತಾನ್ ನಿಂದ ಅಡಕೆ ಆಮದು ಮಾಡಿಕೊಳ್ಳಲು ಕಾರಣವೇನು ಎಂದು ಪ್ರಶ್ನಿಸಿದರು.

(CONGRESS PRESIDENT)

ಭಾರತ್ ಜೋಡೋ ಯಾತ್ರೆ ಯಶಸ್ವಿಯಾಗಿ ಸಾಗಿದೆ. ರಾಹುಲ್ ಗಾಂಧಿ ಅವರು 3300 ಕಿ.ಮೀ. ಪಾದಯಾತ್ರೆ ಕೈಗೊಂಡಿದ್ದಾರೆ. ಇದು ಬಿಜೆಪಿಯವರ ನಿದ್ರೆ ಕೆಡಿಸಿದೆ. ಯಾತ್ರೆಯ ಬಗ್ಗೆ ಅಪಪ್ರಚಾರದಲ್ಲಿ ತೊಡಗಿದ್ದಾರೆ. ರಾಹುಲ್ ಅವರ ಅಂತಃಕರಣ ನೋಡಿ ಎಲ್ಲಾ ವರ್ಗದ ಜನರು ವಿಸ್ಮಯದಿಂದ, ಸಂಭ್ರಮದಿಂದ ಸ್ವಾಗತಿಸುತ್ತಿದ್ದಾರೆ. ರಾಜ್ಯದಲ್ಲಿ ಮತ್ತು ಕೇಂದ್ರದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದೆ ಬರುತ್ತದೆ ಎಂದು ಹೆಚ್.ಎಸ್.ಸುಂದರೇಶ್ ವಿಶ್ವಾಸ ವ್ಯಕ್ತಪಡಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಪ್ರಮುಖರಾದ ರಾಮೇಗೌಡ, ಪಾಲಿಕೆ ಸದಸ್ಯರಾದ ಹೆಚ್.ಸಿ. ಯೋಗೀಶ್, ಯಮುನಾ ರಂಗೇಗೌಡ, ಚಂದ್ರಶೇಖರ್, ಕೆ.ಎಲ್. ಜಗದೀಶ್, ಲಕ್ಷ್ಮಣಪ್ಪ, ಎನ್.ಡಿ. ಪ್ರವೀಣ್, ರಂಗೇಗೌಡ, ಸಂಜಯ್ ಕಶ್ಯಪ್ ಇದ್ದರು.

jnnce engineering college

ಕ್ಲಿಕ್ ಮಾಡಿ ಇದನ್ನೂ ಓದಿ ಶಿವಮೊಗ್ಗದ ATNC ಸಂಜೆ ಕಾಲೇಜು ಬಿ.ಕಾಂ ಪ್ರವೇಶಾತಿಗೆ ಅವಧಿ ವಿಸ್ತರಣೆ

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment