ಎಲೆ ಚುಕ್ಕೆ ರೋಗ, ದೆಹಲಿಗೆ ನಿಯೋಗ, ಯಾರೆಲ್ಲ ಇರ್ತಾರೆ? ಏನೆಲ್ಲ ಚರ್ಚೆಯಾಗಲಿದೆ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

 SHIVAMOGGA LIVE NEWS 

ಅಡಿಕೆ ಬೆಳೆಯ ಎಲೆ ಚುಕ್ಕೆ ರೋಗ ಬಾಧೆ ಹಾವಳಿ

ಕೇಂದ್ರ ಸರಕಾರದ ಗಮನ ಸೆಳೆಯಲು ನಿಯೋಗ

BENGALURU | ಶಿವಮೊಗ್ಗ, ಚಿಕ್ಕಮಗಳೂರು ಹಾಗೂ ಕರಾವಳಿ ಭಾಗದಲ್ಲಿ ರೈತ ಸಮುದಾಯದ ಜೀವನಾಡಿಯದ ಅಡಿಕೆ ಬೆಳೆ ಎಲೆ ಚುಕ್ಕೆ ರೋಗದಿಂದ ನಲುಗಿದೆ. ಇದರ ನಿಯಂತ್ರಣ ಬಗ್ಗೆ ಕೇಂದ್ರ ಸರಕಾರದ ಗಮನ ಸೆಳೆಯಲು ನಾಳೆ ದೆಹಲಿಗೆ ನಿಯೋಗವೊಂದನ್ನು (DELEGATION TO DELHI), ಕೊಂಡೊಯ್ಯಲಾಗುವುದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.

Shimoga Nanjappa Hospital

ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಆರಗ ಜ್ಞಾನೇಂದ್ರ, ಎಲೆ ಚುಕ್ಕೆ ರೋಗವು ಇಡೀ ಮಲೆನಾಡು ಭಾಗದ ಅಡಕೆ ತೋಟಗಳಲ್ಲಿ ವ್ಯಾಪಕವಾಗಿ ಹಬ್ಬಿದೆ. ಅಡಕೆ ಬೆಳೆ ಸಂಪೂರ್ಣವಾಗಿ ನಾಶವಾಗುವ ಅಪಾಯಕ್ಕೆ ತುತ್ತಾಗಿದೆ ಎಂದರು.

(DELEGATION TO DELHI)

ಅಡಕೆ ಬೆಳೆ ಉಳಿಸಿ, ಬೆಳೆಗಾರರ ರಕ್ಷಣೆಗೆ ಬರಬೇಕಾದ ತುರ್ತು ಅಗತ್ಯವಿದೆ. ತಕ್ಷಣ ಪರಿಹಾರ ಕಂಡು ಕೊಳ್ಳುವ ನಿಟ್ಟಿನಲ್ಲಿ ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಹಾಗೂ ಇತರರನ್ನು ಭೇಟಿಯಾಗಿ ಚರ್ಚಿಸಲಾಗುವುದು ಎಂದು ತಿಳಿಸಿದರು.

ಎಲೆ ಚುಕ್ಕೆ ರೋಗದ ನಿಯಂತ್ರಣ ಬಗ್ಗೆ ಸಂಶೋಧನೆ, ರೈತರಿಗೆ ಪರಿಹಾರ ಹಾಗೂ ಇತರ ಮಾರ್ಗೋಪಾಯಗಳನ್ನು ಕಂಡುಕೊಳ್ಳುವ ಬಗ್ಗೆಯೂ ಚರ್ಚಿಸಲಾಗುವುದು ಎಂದು ಸಚಿವರು ತಿಳಿಸಿದರು.

ಸಂಸದ ರಾಘವೇಂದ್ರ, ಶಾಸಕರಾದ ಹರತಾಳು ಹಾಲಪ್ಪ ಹಾಗೂ ಇತರ ಗಣ್ಯರು, ರೋಗ ಪೀಡಿತ ಅಡಕೆ ತೋಟಗಳಿಗೆ, ತೀರ್ಥಹಳ್ಳಿ, ಸಾಗರ ಹಾಗೂ ಹೊಸನಗರ ತಾಲೂಕಿನಲ್ಲಿ ಭೇಟಿ ನೀಡಿ, ರೈತರು ಸಂಶೋಧನಾ ಕೇಂದ್ರದ ವಿಜ್ಞಾನಿಗಳು ಹಾಗೂ ಇತರರ ಜತೆ ಸಮಾಲೋಚನೆ, ಸಂವಾದ ನಡೆಸಿದ್ದೇವೆ ಎಂದು ಸಚಿವ ಆರಗ ಜ್ಞಾನೇಂದ್ರ ಹೇಳಿದರು.

ಶಿವಮೊಗ್ಗ ಸಂಸದ ಬಿ.ವೈ. ರಾಘವೇಂದ್ರ, ಸಾಗರ ಶಾಸಕ ಹರತಾಳು ಹಾಲಪ್ಪ, ಸೊರಬದ ಮಂಜಪ್ಪ ಹಾಗೂ ಇತರರು ನಿಯೋಗದಲ್ಲಿ (DELEGATION TO DELHI) ಭಾಗವಹಿಸುತ್ತಾರೆ ಎಂದು ಹೇಳಿದರು.

jnnce college shimoga

ಕ್ಲಿಕ್ ಮಾಡಿ ಇದನ್ನೂ ಓದಿ ಶರಾವತಿ ಮುಳುಗಡೆ ಸಂತ್ರಸ್ಥರಿಗೆ ಸಂಸದ ರಾಘವೇಂದ್ರ ಅಭಯ, ಏನಂದರು?

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment