‘ತಕ್ಷಣ ಅವರನ್ನ ಗಲ್ಲಿಗೇರಿಸಬೇಕು, ಅಂತಹ ಕಾನೂನು ರೂಪಿಸುವಂತೆ ಪ್ರಧಾನಿಗೆ ಮನವಿ ಮಾಡ್ತೀನಿ’

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

 SHIVAMOGGA LIVE NEWS 

SHIMOGA | ರಾಮ ಮಂದಿರ (RAM MANDIR) ಸ್ಫೋಟಿಸಲು ನಿಷೇಧಿತ ಪಿಎಫ್ಐ ಸಂಘಟನೆ ಸಂಚು ರೂಪಿಸಿದ ವಿಚಾರ ಬಯಲಾಗಿದೆ. ಇದು ಹಿಂದೂ ಸಮಾಜಕ್ಕೆ ದೊಡ್ಡ ಆಘಾತ ಉಂಟು ಮಾಡಿದೆ. ಸ್ಪೋಟದ ಸಂಚು ರೂಪಿಸಿದವರನ್ನು ತಕ್ಷಣ ಗಲ್ಲಿಗೇರಿಸಬೇಕು ಎಂದು ಶಾಸಕ ಕೆ.ಎಸ್. ಈಶ್ವರಪ್ಪ ಬೇಸರ ವ್ಯಕ್ತಪಡಿಸಿದರು.

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

Shimoga Nanjappa Hospital

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಯೋಧ್ಯೆಯಲ್ಲಿ ರಾಮಮಂದಿರ (RAM MANDIR)  ನಿರ್ಮಾಣ ಮಾಡಲಾಗುತ್ತಿದೆ. ಇದು ಹಿಂದೂ ಸಮಾಜದ ಬಹು ವರ್ಷದ ಕನಸಾಗಿತ್ತು. ಬಹಳ ವೇಗವಾಗಿ ಕಾಮಗಾರಿ ನಡೆಯುತ್ತಿದೆ. ಆದರೆ ಇದನ್ನು ಸ್ಪೋಟಿಸಲು ರಾಷ್ಟ್ರದ್ರೋಹಿ ಸಂಘಟನೆ ಪಿಎಫ್‌ಐ ಪ್ರಯತ್ನ ನಡೆಸಿತ್ತು ಎಂಬುದು ಬೆಳಕಿಗೆ ಬಂದಿದೆ. ಇದು ಹಿಂದೂ ಸಮಾಜಕ್ಕೆ ದೊಡ್ಡ ಆಘಾತವಾಗಿದೆ ಎಂದರು.

ಯಾರು ಬಂದರು ರಾಮ ಮಂದಿರಕ್ಕೆ ಹಾನಿ ಉಂಟು ಮಾಡಲು ಸಾಧ್ಯವಿಲ್ಲ. ಪ್ರಜಾಪ್ರಭುತ್ವ, ಸಂವಿಧಾನ ಕುರಿತು ನಂಬಿಕೆ ಇರುವ ಪ್ರತಿಯೊಬ್ಬರು ಪಿಎಫ್‌ಐ ನಡೆಯನ್ನು ಖಂಡನೆ ಮಾಡಬೇಕು. ಕಾಂಗ್ರೆಸ್, ಜೆಡಿಎಸ್, ಕಮ್ಯುನಿಸ್ಟ್ ಪಕ್ಷದವರು ಕೂಡ ಇದನ್ನು ಖಂಡಿಸಬೇಕು ಎಂದು ಆಗ್ರಹಿಸಿದರು.

(RAM MANDIR)

ಗಲ್ಲಿಗೇರಿಸುವ ಕಾನೂನು ರೂಪಿಸಬೇಕು

ಬಾಬ್ರಿ ಮಸೀದಿ ಗುಲಾಮಗಿರಿಯ ಸಂಕೇತದಂತೆ ಇತ್ತು. ಅಯೋಧ್ಯೆ ರಾಮ ಹುಟ್ಟಿದ ಜಾಗ.  ರಾಮ ಮಂದಿರ ಉದ್ಘಾಟನೆಯನ್ನು ಎಲ್ಲರೂ ಕಾತುರದಿಂದ ಕಾಯುತ್ತಿದ್ದಾರೆ. ಆದರೆ ಅದನ್ನು ಸ್ಪೋಟಿಸುವ ಸಂಚು ರೂಪಿಸಿರುವವರಿಗೆ ಕಠಿಣ ಶಿಕ್ಷೆಯನ್ನೆ ವಿಧಿಸಬೇಕು.

ರಾಮ ಮಂದಿರ ಸ್ಪೋಟಿಸುವ ಸಂಚು ರೂಪಿಸಿರುವವರನ್ನು ಕೂಡಲೆ ಗಲ್ಲಿಗೇರಿಸಬೇಕು. ಅಂತಹ ಕಾನೂನು ಜಾರಿಯಾಗಬೇಕು. ಆಗ ಮಾತ್ರ ಇಂತಹವರಲ್ಲಿ ಭಯ ಮೂಡಲು ಸಾಧ್ಯವಾಗಲಿದೆ. ಅದಕ್ಕಾಗಿ ಕಾನೂನು ತಿದ್ದುಪಡಿ ಮಾಡುವಂತೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮನವಿ ಮಾಡುತ್ತೇನೆ ಎಂದರು.

jnnce college shimoga

ಕ್ಲಿಕ್ ಮಾಡಿ ಇದನ್ನೂ ಓದಿ ಶಿವಮೊಗ್ಗದ 100 ಅಡಿ ರಸ್ತೆಯ ಫುಟ್ ಪಾತ್ ಕೆಳಗೆ ವಿಚಿತ್ರ ಶಬ್ದ, ಹೊಗೆ ಪ್ರತ್ಯಕ್ಷ, ಜನರಲ್ಲಿ ಆತಂಕ

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment