ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS
SHIMOGA | ಶಿವಮೊಗ್ಗ ಪೊಲೀಸರು ನಗರದಲ್ಲಿ ಮತ್ತೆ ಶಾಂತಿ ಕದಡುವ ಪ್ರಯತ್ನ ಮಾಡಿದ ಆರೋಪಿಗಳ ಹೆಡೆಮುರಿ ಕಟ್ಟಲಾಗಿದೆ. ಭರ್ಮಪ್ಪ ನಗರದಲ್ಲಿ ಯುವಕನ ತಲೆಗೆ ಕಲ್ಲಿನಿಂದ ಹೊಡೆದು ಗಾಯಗೊಳಿಸಿದ ಪ್ರಕರಣ ಸಂಬಂಧ ಮೂವರನ್ನು ಶಿವಮೊಗ್ಗ ಪೊಲೀಸರು ಬಂಧಿಸಿದ್ದಾರೆ. ಅವರ ಫೋಟೊಗಳನ್ನು ಬಿಡುಗಡೆ ಮಾಡಲಾಗಿದೆ. (3 ARREST)
ಸೋಮವಾರ ರಾತ್ರಿ ಸೀಗೆಹಟ್ಟಿ, ಭರ್ಮಪ್ಪ ನಗರದಲ್ಲಿ ಘಟನೆ ಸಂಭವಿಸಿದೆ. ಆ ಬಳಿಕ ಏನೆಲ್ಲ ಬೆಳವಣಿಗೆಗಳಾದವು. ಅದರ ಟಾಪ್ ಪಾಯಿಂಟ್ ಇಲ್ಲಿದೆ.
ಪಾಯಿಂಟ್ 1 : ಸೋಮವಾರ ರಾತ್ರಿ ಸೀಗೆಹಟ್ಟಿ, ಭರ್ಮಪ್ಪ ನಗರದಲ್ಲಿ ಕೆಲವು ದುಷ್ಕರ್ಮಿಗಳು ಅವಾಚ್ಯ ಶಬ್ದಗಳಿಂದ ನಿಂದಿಸುತ್ತ ಬೈಕಿನಲ್ಲಿ ಸಾಗಿದರು. ಭರ್ಮಪ್ಪ ನಗರದಲ್ಲಿ ಪ್ರಕಾಶ್ (25) ಎಂಬಾತನ ತಲೆಗೆ ಇಟ್ಟಿಗೆಯಿಂದ ಹೊಡೆದು ಹಲ್ಲೆ ನಡೆಸಲಾಯಿತು. ಕುಟುಂಬದವರು, ಸ್ಥಳೀಯರು ಪ್ರಕಾಶ್ ನನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಿದರು.(3 ARREST)
ಪಾಯಿಂಟ್ 2 : ಘಟನೆ ಬೆನ್ನಿಗೆ ಸೀಗೆಹಟ್ಟಿ ಸರ್ಕಲ್ ನಲ್ಲಿ ಜನ ಗುಂಪುಗೂಡಿದರು. ದುಷ್ಕರ್ಮಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಸ್ಥಳಕ್ಕೆ ಪೊಲೀಸರು ದೌಡಾಯಿಸಿದರು. ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್ ಕೂಡ ಸ್ಥಳಕ್ಕೆ ಭೇಟಿ ನೀಡಿ, ಜನರನ್ನು ಸಮಾಧಾನ ಪಡಿಸಿದರು. ಈ ವೇಳೆ ದುಷ್ಕರ್ಮಿಗಳನ್ನ ಬಂಧಿಸಬೇಕು, ಕಠಿಣ ಶಿಕ್ಷೆ ಕೊಡಬೇಕು ಎಂದು ಜನರು ಆಗ್ರಹಿಸಿದರು.
(3 ARREST)
ಪಾಯಿಂಟ್ 4 : ದುಷ್ಕರ್ಮಿಗಳು ಬಜರಂಗದಳ ಕಾರ್ಯಕರ್ತ, ಮೃತ ಹರ್ಷನ ಕುಟುಂಬಕ್ಕೆ ಬೆದರಿಕೆ ಒಡ್ಡಿದ್ದಾರೆ ಎಂದು ಆರೋಪಿಸಲಾಯಿತು. ತಮಗೆ ರಕ್ಷಣೆ ಬೇಕು ಎಂದು ಹರ್ಷನ ಕುಟುಂಬದವರು ಮಾಧ್ಯಮಗಳ ಮುಂದೆ ಅಳಲು ತೊಡಿಕೊಂಡರು.


ಕ್ಲಿಕ್ ಮಾಡಿ ಇದನ್ನೂ ಓದಿ | ಶಿವಮೊಗ್ಗದಲ್ಲಿ ಆರೋಪಿ ಕಾಲಿಗೆ ಗುಂಡು ಹೊಡೆದ ಪೊಲೀಸರು
ಪಾಯಿಂಟ್ 10 : ಹಲ್ಲೆಕೋರರಿಗೆ ಪ್ರವೀಣ್ ಎಂಬಾತ ಈ ಹಿಂದೆ ಬೈದಿದ್ದ. ಇದೆ ಕಾರಣಕ್ಕೆ ಪ್ರವೀಣ್ ವಿರುದ್ಧ ಅವಾಚ್ಯವಾಗಿ ಬೈದುಕೊಂಡು ಆರೋಪಿಗಳು ರಸ್ತೆಯಲ್ಲಿ ಸಾಗಿದ್ದರು. ಪ್ರಕಾಶ್ ಎದುರಿಗೆ ಸಿಕ್ಕಾಗ ಆತನ ತಲೆಗೆ ಇಟ್ಟಿಯಿಂದ ಹೊಡೆದು ಹಲ್ಲೆ ಮಾಡಿದ್ದಾರೆ ಎಂದು ವಿಚಾರಣೆಯಿಂದ ಗೊತ್ತಾಗಿದೆ.ಸೀಗೆಹಟ್ಟಿ, ಭರ್ಮಪ್ಪನಗರ ಮತ್ತು ಹಳೆ ಶಿವಮೊಗ್ಗ ಭಾಗದ ಸೂಕ್ಷ್ಮ ಪ್ರದೇಶಗಳಲ್ಲಿ ಪೊಲೀಸ್ ಬಂದೋಬಸ್ತ್ ಮುಂದುವರೆದಿದೆ. ಅನುಮಾನಾಸ್ಪದ ವ್ಯಕ್ತಿಗಳನ್ನು ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ. ಕೆಲವು ಕಡೆ ವಾಹನಗಳ ತಪಾಸಣೆ ಮಾಡಲಾಗುತ್ತಿದೆ.

ಕ್ಲಿಕ್ ಮಾಡಿ ಇದನ್ನೂ ಓದಿ | ವೆಂಕಟೇಶ ನಗರದಲ್ಲಿ ವಿಜಯ್ ಕೊಲೆಗೆ ಕಾರಣವಾಯ್ತು ಕೊರಳಲ್ಲಿದ್ದ ಸರ
ADVERTISEMENT
- ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
- ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422
SHIVAMOGGA LIVE WHATSAPP
ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.
LATEST NEWS
- ಭದ್ರಾವತಿಯ ತರೀಕೆರೆ ರಸ್ತೆಯಲ್ಲಿ ಅಗ್ನಿ ಅವಘಡ, ಲಕ್ಷ ಲಕ್ಷ ಮೌಲ್ಯದ ವಸ್ತುಗಳು ಆಹುತಿ

- ಕಲ್ಲು ಬಂಡೆ ಬಿದ್ದು ಕೃಷಿಕ ಸ್ಥಳದಲ್ಲೇ ಸಾವು

- ಹೆಗಲತ್ತಿಯಲ್ಲಿ ನಾಗಯಕ್ಷೆ ದೇವಾಲಯದ 12ನೇ ವಾರ್ಷಿಕೋತ್ಸವ, ಇವತ್ತು ಪಲ್ಲಕ್ಕಿ ಉತ್ಸವ

- ಶಿವಮೊಗ್ಗ ಜಿಲ್ಲೆಯಲ್ಲಿ ರಣ ಬಿಸಿಲು, ತಾಪಮಾನ ಹೆಚ್ಚಳ, ಇವತ್ತು ಎಲ್ಲೆಲ್ಲಿ ಎಷ್ಟಿರಲಿದೆ ಉಷ್ಣಾಂಶ?

- ತುಂಗಾ ಚಾನಲ್ ಬಳಿ ಸ್ಕೂಟಿ ನಿಲ್ಲಿಸಿಕೊಂಡಿದ್ದವರ ಮೇಲೆ ಪೊಲೀಸ್ ದಾಳಿ, ಒಬ್ಬ ಎಸ್ಕೇಪ್, ಮತ್ತೊಬ್ಬ ಅರೆಸ್ಟ್

About The Editor
ನಿತಿನ್ ಆರ್.ಕೈದೊಟ್ಲು





