ಶಿವಮೊಗ್ಗ ಲೈವ್.ಕಾಂ | 17 ಏಪ್ರಿಲ್ 2019
ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:
ನಾನು ಭಾವುಕ ಜೀವಿ. ಪ್ರತಿದಿನ ಕಣ್ಣೀರು ಹಾಕುತ್ತೇನೆ. ಆದರೆ ಸುಮ್ ಸುಮ್ನೆ ಕಣ್ಣೀರು ಹಾಕುವುದಿಲ್ಲ. ಜನರ ಕಷ್ಟ ನೋಡಿದಾಗ ಕಣ್ಣಲ್ಲಿ ನೀರು ಬರುತ್ತದೆ ಅಂತಾ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ತಾವು ಕಣ್ಣೀರು ಹಾಕಲು ಕಾರಣವೇನು ಎಂಬುದಕ್ಕೆ ಸ್ಪಷ್ಟನೆ ನೀಡಿದ್ದಾರೆ.
ಸೊರಬ ತಾಲೂಕು ಆನವಟ್ಟಿಯಲ್ಲಿ ಮೈತ್ರಿ ಅಭ್ಯರ್ಥಿ ಮಧು ಬಂಗಾರಪ್ಪ ಪರವಾಗಿ ಪ್ರಚಾರಕ್ಕೆ ಆಗಮಿಸಿದ್ದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಕುಮಾರಸ್ವಾಮಿ, ಮಾಜಿ ಮುಖ್ಯಮಂತ್ರಿ ಅವರ ಹೃದಯದಲ್ಲಿ ಭಾವುಕತೆಯಿದ್ದರೆ ಕಣ್ಣೀರಿನ ಅರ್ಥ ಗೊತ್ತಾಗುತ್ತದೆ ಅಂತಾ ಯಡಿಯೂರಪ್ಪ ವಿರುದ್ಧ ಹರಿಹಾಯ್ದರು.
ಮೂರು ದಿನ ಶಿವಮೊಗ್ಗದಲ್ಲೇ ಇರ್ತಾರೆ ಡಿಕೆಶಿ
ಇನ್ನು, ಡಿ.ಕೆ.ಶಿವಕುಮಾರ್ ಅವರು ಪ್ರಚಾರಕ್ಕೆ ಬಾರದಿರುವ ಕುರಿತು ಪ್ರಶ್ನಿಸಿದಾಗ, ಸಚಿವ ಡಿ.ಕೆ.ಶಿವಕುಮಾರ್ ಅವರು ಕನಕಪುರದಲ್ಲಿ ಪ್ರಚಾರ ನಡೆಸುತ್ತಿದ್ದಾರೆ. ನಾಡಿದ್ದಿನಿಂದ ಮೂರು ದಿನ ಶಿವಮೊಗ್ಗದಲ್ಲಿ ಪ್ರಚಾರ ನಡೆಸಲಿದ್ದಾರೆ ಅಂತಾ ಸಿಎಂ ತಿಳಿಸಿದರು.
ಮೋದಿಗಿಂತಲೂ ಹೆಚ್ಚು ಪ್ರಚಾರ ಸಿಕ್ಕಿದ್ದು ಮಂಡ್ಯಕ್ಕೆ
ಮತ್ತೊಂದೆಡೆ, ಮಂಡ್ಯ ಚುನಾವಣೆ ಕುರಿತು ಪ್ರತಿಕ್ರಿಯೆ ನೀಡಿದ ಕುಮಾರಸ್ವಾಮಿ, ಈ ಬಾರಿ ಪ್ರಧಾನಿ ಮೋದಿ ಅವರಿಗಿಂತಲೂ ಮಂಡ್ಯಕ್ಕೆ ಹೆಚ್ಚಿನ ಪ್ರಚಾರ ಸಿಕ್ಕಿದೆ. ನಿಖಿಲ್ ಕುಮಾರಸ್ವಾಮಿ ಅವರನ್ನು ಮಾಧ್ಯಮಗಳು ರಾಷ್ಟ್ರಮಟ್ಟದ ನಾಯಕನ್ನಾಗಿಸಿವೆ. ಹಾಗಾಗಿ ಧನ್ಯವಾದ ಅರ್ಪಿಸುತ್ತೇನೆ ಎಂದು ವ್ಯಂಗ್ಯವಾಡಿದರು.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ | 7411700200
ಸುದ್ದಿಗಾಗಿ ಮೊಬೈಲ್ ನಂಬರ್ | 9964634494ಈ ಮೇಲ್ | shivamoggalive@gmail.com
LATEST NEWS
- ಕಾಂಗ್ರೆಸ್ನದ್ದು ‘3-C ಸರ್ಕಾರ’, ಮಿನಿಸ್ಟರ್ ರಾಜೀನಾಮೆಗೆ ಶಿವಮೊಗ್ಗದಲ್ಲಿ ಆಗ್ರಹ, ಏನಿದು ಮೂರು C?

- ಶಿವಮೊಗ್ಗ ಸಿಟಿಯ ವಿವಿಧೆಡೆ ಫೆಬ್ರವರಿ 6, 7ರಂದು ಕರೆಂಟ್ ಇರಲ್ಲ, ಎಲ್ಲೆಲ್ಲಿ? ಕಾರಣವೇನು?

- ಶಿವಮೊಗ್ಗ, ಭದ್ರಾವತಿಯಲ್ಲಿ ತುಸು ತಗ್ಗಿದ ತಾಪಮಾನ, ಉಳಿದ ತಾಲೂಕುಗಳಲ್ಲಿ ಹೇಗಿರಲಿದೆ?

- ಪೂಜಾ ಗೌಡ ನಂಬಿ ಅರ್ಧ ಕೋಟಿ ಹಣ ಕಳೆದುಕೊಂಡ ಶಿವಮೊಗ್ಗದ ಸೇಲ್ಸ್ಮನ್, ಆಗಿದ್ದೇನು?

- ಇವತ್ತು ಸಂಕಷ್ಟ ಚತುರ್ಥಿ, ಒಳ್ಳೆ ಸಮಯ ಎಷ್ಟೊತ್ತಿಗಿದೆ? – ಇಂದಿನ ಪಂಚಾಂಗ

About The Editor
ನಿತಿನ್ ಆರ್.ಕೈದೊಟ್ಲು





