ರಾಘವೇಂದ್ರ ಗೆಲ್ಲದಿದ್ದರೆ ರಾಜಕೀಯ ನಿವೃತ್ತಿಯ ಸವಾಲು ಹಾಕಿದ ಬಿಜೆಪಿ ಎಂಎಲ್ಎ

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

ಶಿವಮೊಗ್ಗ ಲೈವ್.ಕಾಂ | 19 ಏಪ್ರಿಲ್ 2019

ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಅವರು ಗೆಲ್ಲದೆ ಇದ್ದರೆ ರಾಜಕೀಯ ನಿವೃತ್ತಿ ಪಡೆಯುತ್ತೇನೆ ಅಂತಾ ಸಾಗರ ಶಾಸಕ ಹರತಾಳು ಹಾಲಪ್ಪ ಸವಾಲು ಹಾಕಿದ್ದಾರೆ. ಸಾಗರದ ಮಡಸೂರು ಲಿಂಗದಹಳ್ಳಿಯಲ್ಲಿ ಆಯೋಜಿಸಲಾಗಿದ್ದ ಬಿಜೆಪಿ ಪ್ರಚಾರ ಸಭೆಯಲ್ಲಿ ಮಾತನಾಡಿದ ಹಾಲಪ್ಪ, ಈ ಸವಾಲು ಹಾಕಿದ್ದಾರೆ. ಸುದ್ದಿಯ ಮುಂದಿನ 5 ಪ್ಯಾರಾಗಳು ಕೆಳಗಿವೆ.

ಈಡಿಗ ಸಮುದಾಯಕ್ಕೆ ಬಿಜೆಪಿಯಿಂದ ಎಂದಿಗೂ ಅನ್ಯಾಯವಾಗಿಲ್ಲ. ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದಾಗ ಕಾರ್ಕಳದ ಕೋಟಿ ಚನ್ನಯ್ಯ ಪೀಠ ಸ್ಥಾಪನೆಗೆ 99 ಕೋಟಿ ರೂ. ನೀಡಿದ್ದರು. ಮಂಗಳೂರಿನಲ್ಲಿ ಜಮೀನು ನೀಡಿದ್ದಾರೆ. ಶಿವಮೊಗ್ಗದಲ್ಲಿ ಈಡಿಗ ಸಭಾಭವನ ನಿರ್ಮಾಣಕ್ಕೆ ಜಾಗದ ಜೊತೆಗೆ ಮೂರು ಕೋಟಿ ರೂ. ಅನುದಾನವನ್ನೂ ನೀಡಿದ್ದಾರೆ. ಅಲ್ಲದೇ, ಬಿಜೆಪಿಯ ಆರು ಶಾಸಕರು ಈಡಿಗ ಸಮುದಾಯಕ್ಕೆ ಸೇರಿದವರಾಗಿದ್ದಾರ ಎಂದರು.

Haratalu-Halappa

ತುಮರಿ ಸೇತುವೆ ರಾಜಕಿಯ ವಿಷಯವಲ್ಲ

ಸಭೆಯಲ್ಲಿ ಮಾತನಾಡಿದ ಅಭ್ಯರ್ಥಿ ಬಿ.ವೈ.ರಾಘವೇಂದ್ರ, ತುಮರಿ ಸೇತುವೆ ರಾಜಕೀಯ ವಿಷಯವಲ್ಲ. ಸೇತುವೆ ನಿರ್ಮಾಣಕ್ಕೆ ಗ್ಲೋಬಲ್ ಟೆಂಡರ್ ಕರೆಯಲಾಗಿದೆ. 450 ಕೋಟಿ ರೂ. ವೆಚ್ಚದಲ್ಲಿ ಭಾರತದ ಏಳನೇ ಅತಿ ಉದ್ದ ಮತ್ತು ಎತ್ತರದ ಸೇತುವೆ ಎಂಬ ಹೆಗ್ಗಳಿಕೆ ಪಡೆಯಲಿದೆ. ಇನ್ನು 30 ತಿಂಗಳಲ್ಲಿ ಸೇತುವೆ ನಿರ್ಮಾಣವಾಗಲಿದೆ ಎಂದರು.

ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ | 7411700200

ಸುದ್ದಿಗಾಗಿ ಮೊಬೈಲ್ ನಂಬರ್ | 9964634494ಈ ಮೇಲ್ | shivamoggalive@gmail.com

Leave a Comment