ಡಿಸಿಸಿ ಬ್ಯಾಂಕ್ ಮುಂದೆ ನಿಲ್ಲಿಸಿದ್ದ ಕಾರಿನ ಗಾಜು ಒಡೆದು 5 ಲಕ್ಷ ರೂ. ದರೋಡೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 6 NOVEMBER 2022

SHIKARIPURA | ಡಿಸಿಸಿ ಬ್ಯಾಂಕ್ ಮುಂದೆ ನಿಲ್ಲಿಸಿದ್ದ ಕಾರಿನಲ್ಲಿದ್ದ ಐದು ಲಕ್ಷ ರೂ. ಹಣ ಕಳ್ಳತನ ಮಾಡಲಾಗಿದೆ. ಕಾರಿನ ಗಾಜು ಒಡೆದು ಕೃತ್ಯ (car glass break) ಎಸಗಲಾಗಿದೆ.

Shimoga Nanjappa Hospital

ಶಿಕಾರಿಪುರ ಪಟ್ಟಣದ ಡಿಸಿಸಿ ಬ್ಯಾಂಕ್ ಮುಂಭಾಗ ಘಟನೆ ಸಂಭವಿಸಿದೆ. ಕಪ್ಪನಹಳ್ಳಿಯ ಕೇಶವ ಎಂಬುವವರ ಕಾರಿನಲ್ಲಿ ಇರಿಸಿದ್ದ ಹಣ ಕಳ್ಳತನವಾಗಿದೆ.

(car glass break)

ಕೃತ್ಯ ಸಂಭವಿಸಿದ್ದು ಹೇಗೆ?

ಕೇಶವ ಅವರು ಶಿಕಾರಿಪುರದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಶಾಖೆಯಿಂದ 5 ಲಕ್ಷ ರೂ. ಹಣ ಬಿಡಿಸಿಕೊಂಡು ಬಂದಿದ್ದರು. ಹಣವನ್ನು ಕಾರಿನಲ್ಲಿ ಇರಿಸಿದ್ದರು. ಬಳಿಕ ಪಟ್ಟಣದ ಡಿಸಿಸಿ ಬ್ಯಾಂಕಿಗೆ ಬಂದಿದ್ದರು. ಬ್ಯಾಂಕಿನೊಳಗೆ ಹೋಗಿ ಬರುವಷ್ಟರಲ್ಲಿ ಹಣ ಕಳ್ಳತನವಾಗಿತ್ತು.

ಕಾರಿನ ಎಡಗಡೆಯ ಗಾಜು ಒಡೆದು ಕಳ್ಳರು ಹಣ ದೋಚಿದ್ದಾರೆ. ಘಟನೆ ಮಾಹಿತಿ ತಿಳಿಯುತ್ತಿದ್ದಂತೆ ಡಿವೈಎಸ್ಪಿ ಶಿವಾನಂದ ಮದರಕಂಡಿ, ಇನ್ಸ್ ಪೆಕ್ಟರ್ ಲಕ್ಷ್ಮಣ್, ಪಿಎಸ್ಐ ಪ್ರಶಾಂತ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಶಿಕಾರಿಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. (car glass break) 

ಕ್ಲಿಕ್ ಮಾಡಿ ಇದನ್ನೂ ಓದಿ ಬೆಳ್ಳಂಬೆಳಗ್ಗೆ ಆರೋಪಿಗೆ ಗುಂಡೇಟು, ಪ್ರಕರಣದ ಬಗ್ಗೆ ಶಿವಮೊಗ್ಗ ಎಸ್.ಪಿ ಹೇಳಿದ 3 ಪ್ರಮುಖಾಂಶ ಇಲ್ಲಿದೆ

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment