ಶರಾವತಿ ಮುಳುಗಡೆ ಸಂತ್ರಸ್ಥರ ಬೃಹತ್ ಸಮಾವೇಶಕ್ಕೆ ದಿನಾಂಕ ಫಿಕ್ಸ್

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE | 15 ನವೆಂಬರ್ 2022

SHIMOGA | ಶರಾವತಿ ಸಂತ್ರಸ್ಥರನ್ನು ಒಕ್ಕಲೆಬ್ಬಿಸಲು ಬಿಜೆಪಿ ಸರ್ಕಾರ ಹುನ್ನಾರ ನಡೆಸಿದೆ. ಇದರ ವಿರುದ್ಧ ಕಾಂಗ್ರೆಸ್ ಪಕ್ಷದ ವತಿಯಿಂದ ದೊಡ್ಡ ಮಟ್ಟದ ಹೋರಾಟ (sharavathi protest) ನಡೆಸಲಾಗುತ್ತಿದೆ. ನ.28ರಂದು ಶಿವಮೊಗ್ಗದಲ್ಲಿ ಸಮಾವೇಶ ಆಯೋಜಿಸಲಾಗಿದೆ ಎಂದು ಮಾಜಿ ಶಾಸಕ ಮಧು ಬಂಗಾರಪ್ಪ ತಿಳಿಸಿದರು.

Shimoga Nanjappa Hospital

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಧು ಬಂಗಾರಪ್ಪ ಅವರು, ನ.28ರಂದು ಆಯನೂರಿನಿಂದ ಪಾದಯಾತ್ರೆ ನಡೆಸಲಾಗುತ್ತದೆ. ಜಿಲ್ಲೆಯ ವಿವಿಧೆಡೆಯ ಶರಾವತಿ ಸಂತ್ರಸ್ಥರು ಮಕ್ಕಳು, ಮಹಿಳೆಯರು ದೊಡ್ಡ ಸಂಖ್ಯೆಯ ಜನರು ಭಾಗವಹಿಸಲಿದ್ದಾರೆ. ಅದೇ ದಿನ ಸಂಜೆ ಸಮಾವೇಶ ನಡೆಯಲಿದೆ ಎಂದು ತಿಳಿಸಿದರು‌.

(sharavathi protest)

ಜಾಗೃತ ಸಮಿತಿ ಅಸ್ಥಿತ್ವಕ್ಕೆ

ಶರಾವತಿ ಸಂತ್ರಸ್ಥರ ಹೋರಾಟಕ್ಕೆ ಕಾಂಗ್ರೆಸ್ ಪಕ್ಷದ ವತಿಯಿಂದ ಶರಾವತಿ ಮುಳುಗಡೆ ಸಂತ್ರಸ್ಥರ ಕಾಂಗ್ರೆಸ್ ಜಾಗೃತ ಸಮಿತಿ ಅಸ್ಥಿತ್ವಕ್ಕೆ ಬಂದಿದೆ. ಶರಾವತಿ ಸಂತ್ರಸ್ಥರ ಸಮಸ್ಯೆಗೆ ಶಾಶ್ವತ ಪರಿಹಾರ ಒದಗಿಸುವುದು ಈ ಸಮಿತಿಯ ಪ್ರಮುಖ ಉದ್ದೇಶ. ದೀಪದ ಕೆಳಗೆ ಸದಾ ಕತ್ತಲು ಇರಲಿದೆ. ಹಾಗೆಯೆ ರಾಜ್ಯಕ್ಕೆ ಬೆಳಕು ನೀಡಿದ ಮುಳುಗಡೆ ಸಂತ್ರಸ್ಥರು ಕತ್ತಲಲ್ಲಿ ಇದ್ದಾರೆ. ಇದೆ ಕಾರಣಕ್ಕೆ ಹೋರಾಟ ನಡೆಸಲಾಗುತ್ತಿದೆ.

ಸಮಾವೇಶದಲ್ಲಿ ಎಐಸಿಸಿ ರಾಜ್ಯ ಉಸ್ತುವಾರಿ ರಣದೀಪ್ ಸುರ್ಜೆವಾಲಾ, ರಾಜ್ಯಸಭೆ ಸದಸ್ಯ ಬಿ.ಕೆ.ಹರಿಪ್ರಸಾದ್, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು.

(sharavathi protest)

ಶರಾವತಿ ಮುಳುಗಡೆ ಸಂತ್ರಸ್ಥರ ಬದುಕು ಅತಂತ್ರಗೊಳಿಸಲಾಗಿದೆ. ಅವರ ಬದುಕಿಗೆ ಈಗ ನಾವು ನೆರವಾಗಬೇಕಿದೆ. ಆ ದಿಕ್ಕಿನಲ್ಲಿ ಚರ್ಚೆ ನಡೆಸಲು ನ.28 ರಂದು ಮುಳುಗಡೆ ಸಂತ್ರಸ್ಥರ ಸಭೆ ಕರೆಯಲಾಗಿದೆ.ಆರ್.ಪ್ರಸನ್ನ ಕುಮಾರ್, ಸಮಿತಿ ಸಂಚಾಲಕ

ಶರಾವತಿ ಸಂತ್ರಸ್ಥರು, ಮಲೆನಾಡ ರೈತರ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಈ ಹೋರಾಟ ನಡೆಯುತ್ತಿದೆ. ಎಲ್ಲರು ಒಮ್ಮತದಿಂದ ಹೋರಾಟ ನಡೆಸಲಿದ್ದೇವೆ. ಒಂದು ಲಕ್ಷ ಜನರು ಸಮಾವೇಶ ಭಾಗವಹಿಸಲಿದ್ದಾರೆ.ಹೆಚ್.ಎಸ್.ಸುಂದರೇಶ್, ಕಾಂಗ್ರೆಸ್ ಜಿಲ್ಲಾಧ್ಯಕ್ಷ

ಶರಾವತಿ ಸಂತ್ರಸ್ಥರಿಗೆ ಜಾಗ ಮಂಜೂರು ಮಾಡಲಾಗಿತ್ತು. ಈಗ ಅದನ್ನು ಡಿನೋಟಿಫಿಕೇಷನ್ ಮಾಡಲಾಗಿದೆ. ಪ್ರಭಾವಿಗಳ ಜಾಗ ಬಿಟ್ಟು ಉಳಿದ ಜಾಗವನ್ನು ಡಿನೋಟಿಫೈ ಮಾಡಲಾಗಿದೆ.ಕಿಮ್ಮನೆ ರತ್ನಾಕರ್, ಮಾಜಿ ಸಚಿವ

Shimoga Nanjappa Hospital

ಇದನ್ನೂ ಓದಿ |ಶಿವಮೊಗ್ಗದಲ್ಲಿ ಕಾಡಾನೆ ಹಾವಳಿ, ಅಧ್ಯಯನಕ್ಕೆ ತಜ್ಞರ ಟೀಮ್, ಏನೆಲ್ಲ ಪರಿಶೀಲಿಸಿತು? ಮುಂದೇನು? 

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

 

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment