ಗಲಾಟೆ, ಚಾಕು ಇರಿತ ಕೇಸ್, ಭದ್ರಾವತಿಯಲ್ಲಿ 6 ಮಂದಿ ಅರೆಸ್ಟ್, ಯಾರನ್ನೆಲ್ಲ ಬಂಧಿಸಲಾಗಿದೆ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 16 NOVEMBER 2022

BHADRAVATHI | ಪಟ್ಟಣದಲ್ಲಿ ಭಾನುವಾರ ಸಂಜೆ ಯುವಕರ ನಡುವೆ ಗಲಾಟೆ, ಚಾಕು ಇರಿತ ಪ್ರಕರಣ ಸಂಬಂಧ ಪ್ರತ್ಯೇಕವಾಗಿ ಮೂರು ಪ್ರಕರಣ ದಾಖಲಾಗಿತ್ತು. ಘಟನೆ ಸಂಬಂಧ ಪೊಲೀಸರು ಆರು ಆರೋಪಿಗಳನ್ನು ಬಂಧಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. (six arrest)

Shimoga Nanjappa HOspital

ನ.13ರಂದು ಸಂಜೆ ಭದ್ರಾವತಿಯ ಜೂನಿಯರ್ ಕಾಲೇಜು ಬಳಿ ಜಹೀರ್, ಅಸ್ಲಂ ಮತ್ತು ಹರೀಶ್, ಗೌತಮ್ ಅಲಿಯಾಸ್ ಅಪ್ಪು ಎಂಬುವವರ ಮಧ್ಯೆ ಗಲಾಟೆಯಾಗಿದೆ. ಈ ಸಂಬಂಧ ಜಹೀರ್ ಮತ್ತು ಹರೀಶ್ ಪ್ರತ್ಯೇಕವಾಗಿ ದೂರು ನೀಡಿದ್ದರು. ಪೊಲೀಸರು ಎರಡು ಪ್ರತ್ಯೇಕ ಪ್ರಕರಣ ದಾಖಲಾಗಿತ್ತು.

ಕ್ಲಿಕ್ ಮಾಡಿ ಇದನ್ನೂ ಓದಿ ಗಾಜನೂರು ಮೀನು ಹೊಟೇಲ್ ಗಳ ಮೇಲೆ ದಿಢೀರ್ ದಾಳಿ, ಕೇಸ್ ದಾಖಲು

ಜಹೀರ್ ನೀಡಿದ ದೂರಿನ ಹಿನ್ನೆಲೆ ನೆಹರೂ ನಗರದ ಹರೀಶ್ (22) ಮತ್ತು ಗೌತಮ್ ಅಲಿಯಾಸ್ ಅಪ್ಪು (22) ಎಂಬುವವರನ್ನು ಬಂಧಿಸಲಾಗಿದೆ. ಹರೀಶ್ ನೀಡಿದ ದೂರಿನ ಹಿನ್ನೆಲೆ ಸಿದ್ದಾಪುರ ಹೊಸೂರು ಗ್ರಾಮದ ಜಹೀರ್ (27), ಎಕಿನ್ಸಾ ಕಾಲೋನಿಯ ಅಸ್ಲಾಂ ಅಲಿಯಾಸ್ ಅಸ್ಲಿ (29) ಎಂಬುವವರನ್ನು ಬಂಧಿಸಲಾಗಿದೆ.

six arrest in bhadravathi

(six arrest)

ಚಾಕು ಇರಿದವರು ಅಂಧರ್

ಇನ್ನು, ಗಲಾಟೆ ಬಳಿಕ ಆಸ್ಪತ್ರೆಗೆ ದಾಖಲಾಗಿದ್ದ ಜಹೀರ್ ನನ್ನು ನೋಡಲು ಹೋಗಿದ್ದ ರಿಜ್ವಾನ್ ಎಂಬಾತನಿಗೆ ಚಾಕುವಿನಿಂದ ಇರಿಯಾಲಾಗಿತ್ತು. ಈ ಸಂಬಂಧ ಪ್ರಕರಣ ದಾಖಲಾಗಿದ್ದು ಹೊಸಮನೆಯ ಮಂಜುನಾಥ್ (24) ಮತ್ತು ಅಶೋಕ್ (22) ಎಂಬುವವರನ್ನು ಬಂಧಿಸಲಾಗಿದೆ.

ಆರೋಪಿಗಳನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಪೊಲೀಸ್ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Atiaya Shimoga Showroom

 

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment