SHIVAMOGGA LIVE NEWS | 17 ನವೆಂಬರ್ 2022
SAGARA | ಮಾಜಿ ಸಚಿವ ಕಾಗೋಡು ತಿಮ್ಮಪ್ಪ, ಅವರ ಪುತ್ರಿ ಡಾ.ರಜನಂದಿನಿ ಅವರು ಈ ಭಾರಿ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಪಕ್ಷದ ಟಿಕೆಟ್ ಗಾಗಿ ಅರ್ಜಿ ಸಲ್ಲಿಸಿದ್ದಾರೆ. ಇದು ಇತರೆ ಆಕಾಂಕ್ಷಿಗಳನ್ನು ಇಕ್ಕಟ್ಟಿಗೆ ಸಿಲುಕಿಸಿದೆ. ಮುಂದೇನು ಎಂಬ ಪ್ರಶ್ನೆಯನ್ನು ಹುಟ್ಟುಹಾಕಿದೆ. application for ticket
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಮತ್ತು ಅವರ ಪುತ್ರಿ ಡಾ.ರಾಜನಂದಿನಿ ಅವರು ಕಾಂಗ್ರೆಸ್ ಪಕ್ಷದ ಟಿಕೆಟ್ ಗಾಗಿ ಅರ್ಜಿ ಸಲ್ಲಿಸಿದ್ದಾರೆ. ಇಬ್ಬರಲ್ಲಿ ಒಬ್ಬರಿಗಾದರು ಟಿಕೆಟ್ ಸಿಗಬಹುದು ಎಂಬ ವಿಶ್ವಾಸ ಹೊಂದಿದ್ದಾರೆ.
application for ticket
ಮಾಜಿ ಸಚಿವರು ಹೇಳಿದ್ದೇನು?
ಈ ಕುರಿತು ಶಿವಮೊಗ್ಗದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಕಾಗೋಡು ತಿಮ್ಮಪ್ಪ ಅವರು, ‘ಚುನಾವಣೆಗೆ ಸ್ಪರ್ಧಿಸುವ ಕುರಿತು ಯೋಚನೆ ಮಾಡಿಲ್ಲ. ಸ್ವಾಭಾವಿಕವಾಗಿ ಅರ್ಜಿ ಸಲ್ಲಿಸಿದ್ದೇನೆ. ಪುತ್ರಿ ಕೂಡ ರಾಜಕೀಯ ಆಸಕ್ತಿ ಹೊಂದಿದ್ದಾರೆ. ಆದ್ದರಿಂದ ಅವರು ಅರ್ಜಿ ಸಲ್ಲಿಸಿದ್ದಾರೆ ಎಂದು ತಿಳಿಸಿದರು. ಟಿಕೆಟ್ ಗಾಗಿ ತಮ್ಮ ಕುಟುಂಬದಲ್ಲಿ ಯಾವುದೆ ಸ್ಪರ್ಧೆ ಇಲ್ಲ’ ಎಂದು ಸ್ಪಷ್ಟನೆ ನೀಡಿದರು.
VIDEO |
application for ticket
ಶಾಸಕ, ಸಚಿವ, ಸಭಾಧ್ಯಕ್ಷ
ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅವರು ಸಾಗರ ಕ್ಷೇತ್ರದಿಂದ ಐದು ಭಾರಿ ಶಾಸಕರಾಗಿ ಆಯ್ಕೆಯಾಗಿದ್ದರು. 1972ರಲ್ಲಿ ಸಂಯುಕ್ತ ಸೋಷಿಯಲಿಸ್ಟ್ ಪಕ್ಷದಿಂದ ಮೊದಲ ಭಾರಿ ವಿಧಾನಸಭೆಗೆ ಪ್ರವೇಶ ಪಡೆದಿದ್ದರು. ಆನಂತರ 1989, 1994, 1999 ಮತ್ತು 2013ರಲ್ಲಿ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಿ, ಗೆಲುವು ಸಾಧಿಸಿದ್ದರು. ಶಾಸಕರಾಗಿ, ಸಚಿವರಾಗಿ, ವಿಧಾನಸಭೆಯ ಅಧ್ಯಕ್ಷರಾಗಿ ಜವಾಬ್ದಾರಿ ನಿಭಾಯಿಸಿದ್ದರು. ವಯಸ್ಸು, ಆರೋಗ್ಯದ ಕಾರಣಕ್ಕೆ ಈ ಭಾರಿ ಅವರು ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದು ಹೇಳಲಾಗುತ್ತಿತ್ತು.
ಕ್ಲಿಕ್ ಮಾಡಿ ಇದನ್ನೂ ಓದಿ | ಶರಾವತಿ ಮುಳುಗಡೆ ಸಂತ್ರಸ್ಥರ ಬೃಹತ್ ಸಮಾವೇಶಕ್ಕೆ ದಿನಾಂಕ ಫಿಕ್ಸ್
ಕಾಗೋಡು ತಿಮ್ಮಪ್ಪ ಅವರು ಸ್ಪರ್ಧೆ ಮಾಡುವುದಿಲ್ಲ ಎಂಬ ಕಾರಣಕ್ಕೆ ಅವರ ಪುತ್ರಿ ಡಾ. ರಾಜನಂದಿನಿ ಸೇರಿದಂತೆ ಎರಡನೇ ಹಂತದ ನಾಯಕರು ಪ್ರಚಾರ ಆರಂಭಿಸಿದ್ದರು.
ಊರೂರು ಸುತ್ತಿದ್ದ ಆಕಾಂಕ್ಷಿಗಳು
ಸಾಗರ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ಟಿಕೆಟ್ ಆಕಾಂಕ್ಷಿಗಳು ಕಳೆದ ಒಂದು ವರ್ಷದಿಂದ ಸಂಘಟನೆ ಆರಂಭಿಸಿದ್ದರು. ತಮ್ಮ ವೈಯಕ್ತಿ ವರ್ಚಸ್ಸು ವೃದ್ಧಿಸಿಕೊಳ್ಳುವ ಪ್ರಯತ್ನ ಮಾಡಿದ್ದರು. ಹಳ್ಳಿ, ಹಳ್ಳಿ ಸುತ್ತಿದ್ದರು. ಕಾರ್ಯಕ್ರಮಗಳನ್ನು ರೂಪಿಸಿ, ಹೋರಾಟಗಳನ್ನು ಮಾಡಿ, ಕಾರ್ಯಕರ್ತರನ್ನು ಸಂಘಟಿಸಿದ್ದರು. ಕಾಗೋಡು ತಿಮ್ಮಪ್ಪ ಅವರು ಚುನಾವಣಾ ಕಣಕ್ಕಿಳಿಯುವುದಿಲ್ಲ ಎಂಬ ವಿಶ್ವಾಸದೊಂದಿಗೆ, ‘ತಾವೇ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ’ ಎಂದು ಬಿಂಬಿಸಿಕೊಂಡಿದ್ದರು. ಇದೇ ಉತ್ಸಾಹದಲ್ಲಿ ಟಿಕೆಟ್ ಪಡೆಯಲು ಅರ್ಜಿಯನ್ನೂ ಸಲ್ಲಿಸಿದ್ದರು. accordingly
ಕೊನೆ ಕ್ಷಣದಲ್ಲಿ ಶಾಕ್
ಸಾಗರ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದಿಂದ ಟಿಕೆಟ್ ಬಯಸಿ ಅರ್ಜಿ ಸಲ್ಲಿಸಿದ್ದವರಿಗೆ, ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅವರು ಕೊನೆ ಕ್ಷಣದಲ್ಲಿ ಶಾಕ್ ನೀಡಿದ್ದಾರೆ. ತಾವು ಮತ್ತು ತಮ್ಮ ಪುತ್ರಿ ಅರ್ಜಿ ಸಲ್ಲಿಸಿರುವುದು ಇತರೆ ಆಕಾಂಕ್ಷಿಗಳಿಗೆ ನುಂಗಲಾರದ ತುತ್ತಾಗಿದೆ. ‘ಕಾಗೋಡು ತಿಮ್ಮಪ್ಪ ಅವರು ಅರ್ಜಿ ಸಲ್ಲಿಸುವುದಾಗಿ ಈ ಮೊದಲೆ ತಿಳಿಸಿದ್ದರೆ, ತಾವು ಅರ್ಜಿ ಹಾಕುತ್ತಿರಲಿಲ್ಲ’ ಎಂದು ಆಪ್ತರ ನಡುವೆ ಬೇಸರ ವ್ಯಕ್ತಪಡಿಸುತ್ತಿದ್ದಾರೆ.
ಒಂದು ವೇಳೆ ಪಕ್ಷದ ಹೈಕಮಾಂಡ್ ಹಿರಿತನ, ಅನುಭವಕ್ಕೆ ಆದ್ಯತೆ ನೀಡಿದರೆ ಕಾಗೋಡು ತಿಮ್ಮಪ್ಪ ಅವರು ಮತ್ತೊಮ್ಮೆ ಸ್ಪರ್ಧೆ ಮಾಡಲಿದ್ದಾರೆ. ಬೇರೆಯದ್ದೆ ಮಾನದಂಡ ಅನುಸರಿಸಿದರೆ ಉಳಿದ ಆಕಾಂಕ್ಷಿಗಳ ಪೈಕಿ ಒಬ್ಬರಿಗೆ ಟಿಕೆಟ್ ಸಿಗುವ ಸಾದ್ಯತೆ ಇದೆ. ಸದ್ಯ ಕಾಗೋಡು ತಿಮ್ಮಪ್ಪ ಅವರ ನಡೆ ಆಕಾಂಕ್ಷಿಗಳಲ್ಲಿ ಗೊಂದಲ ನಿರ್ಮಿಸಿದ್ದರೆ, ಯಾರಿಗೆ ಟಿಕೆಟ್ ಲಭ್ಯವಾಗಲಿದೆ ಎಂದು ಜನರು ಕುತೂಹಲದಿಂದ ನೋಡುವಂತಾಗಿದೆ.
ADVERTISEMENT
- ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
- ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422
SHIVAMOGGA LIVE WHATSAPP
ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.