ಮೆಸೇಜ್ ತಂದ ಸಂಕಷ್ಟ, ದೂರು ದಾಖಲಿಸಿ, ತಲೆ ಮೇಲೆ ಕೈ ಹೊತ್ತು ಕುಳಿತ ರೈತ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 18 NOVEMBER 2022

SHIMOGA |ಪ್ಯಾನ್ ಕಾರ್ಡ್ ಮಾಹಿತಿ ಅಪ್ ಡೇಟ್ ಮಾಡದಿದ್ದರೆ ನಿಮ್ಮ ಬ್ಯಾಂಕ್ ಖಾತೆ ಸಸ್ಪೆಂಡ್ ಆಗಲಿದೆ.’ ಹೀಗೆಂದು ಬಂದ ಎಸ್.ಎಂ.ಎಸ್ ನಂಬಿ ಕೃಷಿಕರೊಬ್ಬರು ವಂಚನೆಗೊಳಗಾಗಿದ್ದಾರೆ. (sms fraud)

Shimoga Atiyas Motors

ಶಿವಮೊಗ್ಗ ಜಿಲ್ಲೆಯ ಕೃಷಿಕರೊಬ್ಬರ (ಹೆಸರು ಗೌಪ್ಯ) ಮೊಬೈಲ್ ಫೋನ್ ಗೆ ಹೆಚ್.ಡಿ.ಎಫ್.ಸಿ ಬ್ಯಾಂಕ್ ಹೆಸರಿನಲ್ಲಿ ಮೆಸೇಜ್ ಬಂದಿದೆ. ‘ಪ್ಯಾನ್ ಕಾರ್ಡ್ ಅಪ್ ಡೇಟ್ ಮಾಡದಿದ್ದರೆ ಹೆಚ್.ಡಿ.ಎಫ್.ಸಿ ಬ್ಯಾಂಕಿನಲ್ಲಿರುವ ನಿಮ್ಮ ಖಾತೆ ಸಸ್ಪೆಂಡ್ ಆಗಲಿದೆ. ಈ ಕೂಡಲೆ ಪ್ಯಾನ್ ಕಾರ್ಡ್ ಅಪ್ ಡೇಟ್ ಮಾಡಲು ಕೆಳಗಿರುವ ಲಿಂಕ್ ಕ್ಲಿಕ್ ಮಾಡಿ’ ಎಂದು ಬರೆಯಲಾಗಿತ್ತು.

ಕ್ಲಿಕ್ ಮಾಡಿ ಇದನ್ನೂ ಓದಿ ಶಿವಮೊಗ್ಗದ ಖಾಸಗಿ ಬಸ್ ಮಾಲೀಕರಿಗೆ ಪೊಲೀಸರಿಂದ 8 ಖಡಕ್ ಸೂಚನೆ, ತಪ್ಪಿದರೆ ಕ್ರಮದ ಎಚ್ಚರಿಕೆ

ಬ್ಯಾಂಕಿನಿಂದಲೆ ಮೆಸೇಜ್ ಬಂದಿರಬೇಕು ಎಂದು ನಂಬಿದ ಕೃಷಿಕ, ಲಿಂಕ್ ಕ್ಲಿಕ್ ಮಾಡಿದ್ದಾರೆ. ತಕ್ಷಣವೆ ವೆಬ್ ಸೈಟ್ ಒಂದು ತೆರೆದುಕೊಂಡಿದ್ದು, ಅದರಲ್ಲಿ ಬ್ಯಾಂಕ್ ಮಾಹಿತಿ ಕೇಳಲಾಗಿತ್ತು. ಅವುಗಳನ್ನು ದಾಖಲು ಮಾಡುತ್ತಿದ್ದಂತೆ ಒಟಿಪಿ ಬಂದಿದೆ. ಒ.ಟಿ.ಪಿ ಸಂಖ್ಯೆ ಎಂಟ್ರಿ ಮಾಡುತ್ತಿದ್ದಂತೆ, ಎರಡು ಭಾರಿ ಹಣ ಕಡಿತವಾಗಿದೆ.

ಕ್ಲಿಕ್ ಮಾಡಿ ಇದನ್ನೂ ಓದಿ ಶಿವಮೊಗ್ಗ ಡಿಸಿ, ಎಸ್ಪಿಗೆ ಮೀಟರ್ ಹಾಕದೆ, ಯದ್ವ ತದ್ವ ದುಡ್ಡು ಕೇಳಿದ ಆಟೋ ಚಾಲಕ, ಮುಂದೇನಾಯ್ತು?

ಮೊದಲ ಭಾರಿ 24,500 ರೂ, ಎರಡನೇ ಭಾರಿ 34 ಸಾವಿರ ರೂ. ಸೇರಿ ಒಟ್ಟು 58,500 ರೂ. ಹಣ ಕಡಿತವಾಗಿದೆ. ಆ ಬಳಿಕ ಕೃಷಿಕ ತನ್ನ ಖಾತೆ ಇರುವ ಬ್ಯಾಂಕಿಗೆ ಕರೆ ಮಾಡಿದ್ದಾರೆ. ಆಗ ಮೋಸ ಹೋಗಿರುವುದು ಗೊತ್ತಾಗಿದೆ. ಘಟನೆ ಸಂಬಂಧ ಶಿವಮೊಗ್ಗದ ಸಿಇಎನ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.

(sms fraud)

ಎಚ್ಚರ ತಪ್ಪಿದರೆ ಹಣ ಮಾಯ

ಪ್ಯಾನ್ ಕಾರ್ಡ್, ಆಧಾರ್ ಕಾರ್ಡ್ ಸೇರಿದಂತೆ ಯಾವುದೆ ಅಪ್ ಡೇಟ್ ಗಾಗಿ ಬ್ಯಾಂಕುಗಳು ಗ್ರಾಹಕರಿಗೆ ಲಿಂಕ್ ಇರುವ ಮೆಸೇಜ್ ಕಳುಹಿಸುವುದಿಲ್ಲ. ‘ಎಟಿಎಂ ಸಸ್ಪೆಂಡ್ ಆಗಲಿದೆ’, ‘ಖಾತೆ ಸಸ್ಪೆಂಡ್ ಮಾಡಲಾಗುತ್ತದೆ’ ಎಂಬ ಮೆಸೇಜುಗಳು ಬಂದಾಗ, ಗ್ರಾಹಕರು ಸಂಬಂಧಿಸಿದ ಬ್ರಾಂಚ್ ಗಳಿಗೆ ತೆರಳಿ ಮಾಹಿತಿ ಪಡೆಯಬೇಕಿದೆ. ಯಾವುದೆ ಅಪ್ ಡೇಟ್ ಇದ್ದರು ಬ್ಯಾಂಕಿನಲ್ಲಿಯೆ ಮಾಡುವುದರಿಂದ ಹಣ ಸುರಕ್ಷಿತವಾಗಿ ಉಳಿಯಲಿದೆ.

Shimoga Nanjappa HOspital

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : November 18, 2022

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್‌, ಯಾಕೆ?

ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್‌, ಯಾಕೆ?

ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

ಮಾವನ ಕುತ್ತಿಗೆ ಸೀಳಿ ಕೊಲೆಗೆ ಯತ್ನಿಸಿದ ಅಳಿಯ, ಎಲ್ಲಿ? ಕಾರಣವೇನು?

ಮಾವನ ಕುತ್ತಿಗೆ ಸೀಳಿ ಕೊಲೆಗೆ ಯತ್ನಿಸಿದ ಅಳಿಯ, ಎಲ್ಲಿ? ಕಾರಣವೇನು?

ಗೆಜ್ಜೇನಹಳ್ಳಿಯಲ್ಲಿ ಹಿಟ್ ಅಂಡ್ ರನ್ ಅಪಘಾತ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು

ಗೆಜ್ಜೇನಹಳ್ಳಿಯಲ್ಲಿ ಹಿಟ್ ಅಂಡ್ ರನ್ ಅಪಘಾತ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು

ಶಿವಮೊಗ್ಗ ಜಿಲ್ಲೆಯಲ್ಲಿ ಮುಂದುವರೆದ ಮಳೆ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ಮುಂದುವರೆದ ಮಳೆ, ಇವತ್ತು ಎಷ್ಟಿರಲಿದೆ ತಾಪಮಾನ?

Leave a Comment