ಮಹಿಳೆಯರೆ ಹುಷಾರ್, ಶಿವಮೊಗ್ಗದಲ್ಲಿ ಬಸ್ ಹತ್ತುವಾಗ ಹಿಂದಿರುವವರ ಬಗ್ಗೆ ಇರಲಿ ನಿಗಾ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 23 NOVEMBER 2022

SHIMOGA | ಬಸ್ ಹತ್ತುವಾಗ ಮಹಿಳೆಯ ವ್ಯಾನಿಟಿ ಬ್ಯಾಗಿನ (vanity bag) ಜಿಪ್ ತೆಗೆದು, ಅದರೊಳಗಿದ್ದ ಚಿನ್ನಾಭರಣ ಕಳ್ಳತನ ಮಾಡಲಾಗಿದೆ. ಶಿವಮೊಗ್ಗದಿಂದ ದಾವಣಗೆರೆಗೆ ತೆರಳಲು ಬಸ್ ಹತ್ತುವಾಗ ಘಟನೆ ಸಂಭವಿಸಿದೆ.

Shimoga Atiyas Motors

ಶಿವಮೊಗ್ಗದ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದಲ್ಲಿ ಅನುಸೂಯ ಎಂಬುವವರ ವ್ಯಾನಿಟಿ ಬ್ಯಾಗಿನಲ್ಲಿ ಕಳ್ಳತನ ಮಾಡಲಾಗಿದೆ.

(vanity bag)

ಮದುವೆ ಮನೆಗೆ ಹೊರಟಿದ್ದರು

ಮದುವೆ ಸಮಾರಂಭದಲ್ಲಿ ಪಾಲ್ಗೊಳ್ಳಲು ಅನುಸೂಯ ಅವರು ಪತಿಯೊಂದಿಗೆ ದಾವಣಗೆರೆಗೆ ತೆರಳುತ್ತಿದ್ದರು. ಬಸ್ ನಿಲ್ದಾಣದ ಪ್ಲಾಟ್ ಫಾರಂನಲ್ಲಿ ದಾವಣಗೆರೆ ಬಸ್ ಹತ್ತಿದ್ದಾರೆ. ಸೀಟಿನಲ್ಲಿ ಕುಳಿತಾಗ ವ್ಯಾನಿಟಿ ಬ್ಯಾಗಿನ ಜಿಪ್ ತೆಗೆದಿರುವುದು ಗೊತ್ತಾಗಿದೆ. ಪರಿಶೀಲನೆ ನಡೆಸಿದಾಗ ಬ್ಯಾಗಿನಲ್ಲಿದ್ದ ಪ್ಲಾಸ್ಟಿಕ್ ಬಾಕ್ಸ್ ನಾಪತ್ತೆಯಾಗಿತ್ತು. ಇದರಿಂದ ಅನಸೂಯ ಅವರು ಆತಂಕಕ್ಕೀಡಾಗಿದ್ದಾರೆ.

(vanity bag)

ಲಕ್ಷ ಲಕ್ಷ ಮೌಲ್ಯದ ಚಿನಾಭರಣ

‘ಪ್ಲಾಸ್ಟಿಕ್ ಬಾಕ್ಸಿನಲ್ಲಿ ಲಕ್ಷ ಲಕ್ಷ ಮೌಲ್ಯದ ಚಿನ್ನಾಭರಣ ಇತ್ತು’ ಎಂದು ಅನುಸೂಯ ಅವರು ದೂರಿನಲ್ಲಿ ತಿಳಿಸಿದ್ದಾರೆ. ನಾಲ್ಕು ಜೊತೆ ವಿವಿಧ ಮಾದರಿಯ ಚಿನ್ನದ ಬಳೆಗಳು, ಒಂದು ಜೊತೆ ಜುಮ್ಕಿ ಕಳ್ಳತನವಾಗಿದೆ. ಇವುಗಳ ಮೌಲ್ಯ 5.60 ಲಕ್ಷ ರೂ. ಎಂದು ದೂರಿನಲ್ಲಿ ತಿಳಿಸಲಾಗಿದೆ.

ದೊಡ್ಡಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Shimoga Nanjappa Hospital

ಕ್ಲಿಕ್ ಮಾಡಿ ಇದನ್ನೂ ಓದಿ | ಸಿಟಿ ಸೆಂಟರ್ ಮಾಲ್ ಕೇಸ್, ಪಾಲಿಕೆಗೆ ಒಂದು ವಾರದ ಗಡುವು, ಏನಿದು ಪ್ರಕರಣ?

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : November 23, 2022

Leave a Comment