ಶಿವಮೊಗ್ಗ ಲೈವ್.ಕಾಂ | 19 ಏಪ್ರಿಲ್ 2019
ಚುನಾವಣಾ ಪ್ರಚಾರದ ಒತ್ತಡದ ನಡುವೆಯೂ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಶಿಕಾರಿಪುರದ ಶ್ರೀ ಹುಚ್ಚರಾಯಸ್ವಾಮಿ ಬ್ರಹ್ಮರಥೋತ್ಸವದಲ್ಲಿ ಭಾಗವಹಿಸಿದ್ದರು. ಬೆಳಗ್ಗೆ ಕುಟುಂಬ ಸಹಿತ ದೇವಸ್ಥಾನಕ್ಕೆ ಆಗಮಿಸಿದ ಯಡಿಯೂರಪ್ಪ, ದೇವರ ದರ್ಶನ ಪಡೆದರು. ಕೆಲ ಹೊತ್ತು ಜಾತ್ರೆಯಲ್ಲಿ ಪಾಲ್ಗೊಂಡಿದ್ದರು.
![]() |
ಯಡಿಯೂರಪ್ಪ ಜೊತೆ ಸೆಲ್ಫಿಗೆ ರಶ್
ಇನ್ನು, ಯಡಿಯೂರಪ್ಪ ಅವರು ದೇವರ ದರ್ಶನ ಪಡೆದು ದೇವಸ್ಥಾನದಿಂದ ಹಿಂತಿರುಗುತ್ತಿದ್ದಂತೆ, ಜನರು ಮುಗಿಬಿದ್ದರು. ಸೆಲ್ಫಿ ತೆಗೆಸಿಕೊಳ್ಳಲು ನಾ ಮುಂದು, ತಾ ಮುಂದು ಎಂದು ನೂಕುನುಗ್ಗಲು ಉಂಟಾಯಿತು. ಪೊಲೀಸರ ಮಧ್ಯಪ್ರವೇಶದಿಂದ ಪರಿಸ್ಥಿತಿ ತಿಳಿಯಾಯಿತು. ಆದರೆ ಸೆಲ್ಫಿ ಕೇಳಿದವರಿಗೆಲ್ಲ ಯಡಿಯೂರಪ್ಪ ಪೋಸ್ ಕೊಟ್ಟರು.
ಜಾತ್ರೆಯಲ್ಲಿ ವಿಶೇಷ ಪೂಜೆ
ಶ್ರೀ ಹುಚ್ಚರಾಯ ಸ್ವಾಮಿ ಬ್ರಹ್ಮರಥೋತ್ಸವ ಮತ್ತು ಜಾತ್ರೆಗೆ ಸುತ್ತಮುತ್ತಲ ಊರುಗಳಿಂದ ಭಕ್ತರು ಆಗಮಿಸಿದ್ದರು. ದೇವರ ದರ್ಶನ ಪಡೆದರು. ನೂರಾರು ಭಕ್ತರು ರಥ ಎಳೆದು ದೇವರ ಆಶೀರ್ವಾದ ಬೇಡಿದರು.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ | 7411700200
ಸುದ್ದಿಗಾಗಿ ಮೊಬೈಲ್ ನಂಬರ್ | 9964634494
ಈ ಮೇಲ್ | shivamoggalive@gmail.com
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200