3 ಜಿಲ್ಲೆಯ ರೈತರಿಗಷ್ಟೇ 500 ರೂ., ಶಿವಮೊಗ್ಗ ಸೇರಿ ಉಳಿದ ಜಿಲ್ಲೆಯ ಅನ್ನದಾತರಿಗಿಲ್ಲ ನೆರವು, ಆಕ್ರೋಶ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 24 NOVEMBER 2022

SHIMOGA | ರಾಜ್ಯದ ಮೂರು ಜಿಲ್ಲೆಗಳ ರೈತರು (paddy farmers) ಬೆಳೆದ ಭತ್ತಕ್ಕೆ 500 ರೂ. ಪ್ರೋತ್ಸಾಹ ಧನ ನೀಡಲಾತ್ತಿದೆ. ಇದನ್ನು ಎಲ್ಲಾ ಜಿಲ್ಲೆಗೂ ವಿಸ್ತರಣೆ ಮಾಡಬೇಕು ಎಂದು ಆಗ್ರಹಿಸಿ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ವತಿಯಿಂದ ಪ್ರತಿಭಟನೆ ನಡೆಸಲಾಯಿತು.

Shimoga Nanjappa Hospital

ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದ ರೈತರು, ಕೇಂದ್ರ ಮತ್ತು ರಾಜ್ಯ ಸರ್ಕಾರ ಕೆಲವು ಜಿಲ್ಲೆಗಳಲ್ಲಿ ಮಾತ್ರ ಭತ್ತ ಖರೀದಿ ಕೇಂದ್ರ ಆರಂಭಿಸಿದೆ. ಅಲ್ಲದೆ ಪ್ರತಿ ಕ್ವಿಂಟಾಲ್ ಭತ್ತಕ್ಕೆ 500 ರೂ. ಪ್ರೋತ್ಸಾಹ ಧನ ನೀಡುತ್ತಿವೆ. ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ರೈತರಿಗೆ (paddy farmers) ಮಾತ್ರ ಈ ಸೌಲಭ್ಯ ಒದಗಿಸಲಾಗುತ್ತಿದೆ. ಈ ತಾರತಮ್ಯ ಬಿಟ್ಟು ಉಳಿದೆಲ್ಲ ಜಿಲ್ಲೆಯ ರೈತರಿಗೆ ಪ್ರೋತ್ಸಾಹ ಧನ ನೀಡಬೇಕು ಎಂದು ಆಗ್ರಹಿಸಿದರು.

ಇನ್ನು, ಕೆ.ಎಸ್.ಎಫ್.ಸಿ ಮೂಲಕ ಭತ್ತ ಖರೀದಿ ಮಾಡಲಾಗುತ್ತಿದೆ. ಇದನ್ನು ಕೈ ಬಿಟ್ಟು ಅಕ್ಕಿ ಗಿರಣಿಗಳ ಮೂಲಕ ಖರೀದಿ ಮಾಡಬೇಕು. ಇದರಿಂದ ಮಧ್ಯವರ್ತಿಗಳ ಹಾವಳಿ ನೀಗಲಿದೆ. ಅಲ್ಲದೆ ರೈತರು ಭತ್ತವನ್ನು ಖರೀದಿ ಕೇಂದ್ರಕ್ಕೆ ಕೊಂಡೊಯ್ಯುವ ಸಾಗಣೆ ವೆಚ್ಚವು ಉಳಿತಾಯವಾಗಲಿದೆ ಎಂದು ಮನವಿ ಮಾಡಿದರು.

ಕ್ಲಿಕ್ ಮಾಡಿ ಇದನ್ನೂ ಓದಿ ‘ಈ ಕೆಲಸ ಮಾಡದಿದ್ದರೆ ಯಡಿಯೂರಪ್ಪ ಅವರನ್ನು ಶಿಕಾರಿಪುರದ ಹುಚ್ಚರಾಯ ಸ್ವಾಮಿ ಕ್ಷಮಿಸುವುದಿಲ್ಲ’

ಮತ್ತೊಂದೆಡೆ ಮೆಕ್ಕೆಜೋಳಕ್ಕೆ 3 ಸಾವಿರ ರೂ. ಬೆಂಬಲ ಬೆಲೆ ಘೋಷಿಸಬೇಕು. ತಕ್ಷಣದಿಂದಲೆ ಖರೀದಿ ಕೇಂದ್ರ ಆರಂಭಿಸಬೇಕು ಎಂದು ರೈತರು ಆಗ್ರಹಿಸಿದರು. ಇದೆ ವೇಳೆ ಮಾತನಾಡಿದ ರೈತ ಸಂಘ ಮತ್ತು ಹಸಿರು ಸೇನೆ ರಾಜ್ಯಾಧ್ಯಕ್ಷ ಹೆಚ್.ಆರ್.ಬಸವರಾಜಪ್ಪ ಅವರು, ‘ತಮ್ಮ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಅಧಿವೇಶನದ ಸಂದರ್ಭ ಬೆಳಗಾವಿ ಸುವರ್ಣ ಸೌಧದ ಮುಂದೆ ಪ್ರತಿಭಟನೆ ನಡೆಸಲಾಗುತ್ತದೆ. ಈ ವೇಳೆ ಕಾನೂನು ಸುವ್ಯವಸ್ಥೆ ಹದಗೆಟ್ಟರೆ ಅದಕ್ಕೆ ಸರ್ಕಾರವೆ ಹೊಣೆ’ ಎಂದು ಎಚ್ಚರಿಸಿದರು.

ಪ್ರಮುಖರಾದ ತೀ.ನ.ಶ್ರೀನಿವಾಸ್, ರೈತ ಸಂಘದ ಜಿಲ್ಲಾಧ್ಯಕ್ಷ ಶಿವಮೂರ್ತಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಇ.ಬಿ.ಜಗದೀಶ್, ರಾಜ್ಯ ಉಪಾಧ್ಯಕ್ಷ ಚಂದ್ರಪ್ಪ ಸೇರಿದಂತೆ ಹಲವರು ಪ್ರತಿಭಟನೆಯಲ್ಲಿದ್ದರು.

Shimoga Nanjappa Hospital

(paddy farmers)

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment