ಶಿವಮೊಗ್ಗದಲ್ಲಿ ತಲೆ ಎತ್ತಲಿದೆ ಟ್ರಕ್ ಟರ್ಮಿನಲ್, ಎರಡು ಕಡೆ ಸ್ಥಳ ಪರಿಶೀಲನೆ, ಏನೇನಿರುತ್ತೆ ಅಲ್ಲಿ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 25 NOVEMBER 2022

SHIMOGA | ಶಿವಮೊಗ್ಗ ನಗರ ವ್ಯಾಪ್ತಿಯಲ್ಲಿ ವ್ಯವಸ್ಥಿತ ಟ್ರಕ್ ಟರ್ಮಿನಲ್ (truck terminal) ನಿರ್ಮಾಣಕ್ಕಾಗಿ ಎರಡು ಸ್ಥಳಗಳನ್ನು ಗುರುತಿಸಲಾಗಿದೆ. ಸ್ಥಳ ಅಂತಿಮಗೊಳಿಸಿದ ತಕ್ಷಣ ನಿರ್ಮಾಣ ಕಾಮಗಾರಿ ಆರಂಭಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ದೇವರಾಜ ಅರಸು ಟರ್ಮಿನಲ್ ಅಧ್ಯಕ್ಷ ಡಿ.ಎಸ್.ವೀರಯ್ಯ ಅವರು ತಿಳಿಸಿದರು.

Shimoga Nanjappa Hospital

ಜಿಲ್ಲಾಧಿಕಾರಿ ಕಚೇರಿಯಲ್ಲಿ ಟ್ರಕ್ ಟರ್ಮಿನಲ್ (truck terminal) ನಿರ್ಮಾಣ ಕುರಿತಾಗಿ ಅಧಿಕಾರಿಗಳ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.

ಕ್ಲಿಕ್ ಮಾಡಿ ಇದನ್ನೂ ಓದಿ ಶಿವಮೊಗ್ಗದ ಗ್ರಾಹಕ ನ್ಯಾಯಾಲಯದ ಮಹತ್ವದ ಆದೇಶ, SBI ಬ್ಯಾಂಕಿಗೆ 1 ಲಕ್ಷ ರೂ. ದಂಡ

ಸಿದ್ಲೀಪುರ ಸಮೀಪ ಕೆಐಎಡಿಬಿ ಜಮೀನು ಹಾಗೂ ಹರಿಗೆ ಬಳಿ ಜಮೀನು ಗುರುತಿಸಲಾಗಿದೆ. ಟ್ರಕ್ ಟರ್ಮಿನಲ್ ನಿರ್ಮಾಣಕ್ಕಾಗಿ 40 ಎಕರೆ ಸ್ಥಳದ ಅಗತ್ಯವಿದೆ. ಪ್ರತಿ ಜಿಲ್ಲೆಯಲ್ಲಿ ಟ್ರಕ್ ಟರ್ಮಿನಲ್ ನಿರ್ಮಾಣಕ್ಕಾಗಿ ಕ್ರಮ ಕೈಗೊಳ್ಳಲಾಗಿದೆ. ರಾಜ್ಯದ 7 ಜಿಲ್ಲೆಗಳಲ್ಲಿ ನಿರ್ಮಾಣ ಕಾರ್ಯ ಪೂರ್ಣಗೊಂಡಿದೆ ಎಂದರು.

(truck terminal)

ಟರ್ಮಿನಲ್‍ನಲ್ಲಿ ಏನೇನೆಲ್ಲ ಇರಲಿದೆ?

ಟ್ರಕ್ ಟರ್ಮಿನಲ್‍ನಲ್ಲಿ ಸುಮಾರು 500 ಟ್ರಕ್‍ಗಳು ತಂಗಲು ವ್ಯವಸ್ಥೆ ಕಲ್ಪಿಸಲಾಗುವುದು. ಇಲ್ಲಿ ತಂಗಲು ಡಾರ್ಮೆಟರಿ, ಕುಡಿಯುವ ನೀರು, ಶೌಚಾಲಯದಂತಹ ಅಗತ್ಯ ಸೌಲಭ್ಯಗಳು, ಪೊಲೀಸ್ ಚೌಕಿ, ಆರೋಗ್ಯ ಕೇಂದ್ರ, ಎಟಿಎಂ, ರೆಸ್ಟೋರೆಂಟ್‍ನಂತಹ ಸೌಲಭ್ಯ ಕಲ್ಪಿಸಲಾಗುವುದು. ಇದರಿಂದ ಸ್ಥಳೀಯವಾಗಿ ಉದ್ಯೋಗವಕಾಶ ಸಹ ಸೃಷ್ಟಿಯಾಗಲಿದೆ ಎಂದು ಹೇಳಿದರು.

ಟ್ರಕ್ ಟರ್ಮಿನಲ್ ನಿರ್ಮಿಸಲು ಆದಷ್ಟು ಬೇಗನೆ ಸ್ಥಳವನ್ನು ಅಂತಿಮಗೊಳಿಸಿ ಹಸ್ತಾಂತರಿಸಲು ಕ್ರಮ ಕೈಗೊಳ್ಳುವಂತೆ ವೀರಯ್ಯ ಅವರು ಸಭೆಯಲ್ಲಿ ಜಿಲ್ಲಾಧಿಕಾರಿ ಅವರಿಗೆ ಮನವಿ ಮಾಡಿದರು.

Shimoga nanjappa Hospital

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment