ಸರ್ಕಾರದ ವಿರುದ್ಧ ಮಹಿಳೆಯರಿಂದ ತೀವ್ರ ಹೋರಾಟದ ಎಚ್ಚರಿಕೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 26 NOVEMBER 2022

SHIMOGA | ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶರಾವತಿ ಮುಳುಗಡೆ ಸಂತ್ರಸ್ಥರ
ಸಮಸ್ಯೆಯನ್ನು ಬಗೆಹರಿಸುವುದಾಗಿ ಘೋಷಿಸಬೇಕು. ಇಲ್ಲದಿದ್ದರೆ ಮಹಿಳಾ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ (women protest) ತೀವ್ರಗೊಳಿಸಲಾಗುವುದು ಎಂದು ಕಾಂಗ್ರೆಸ್ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಅನಿತಾ ಕುಮಾರಿ ಎಚ್ಚರಿಕೆ ನೀಡಿದರು.

Shimoga Nanjappa hospital

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಶರಾವತಿ ಮುಳುಗಡೆ ಸಂತ್ರಸ್ಥರ ಬದುಕು ಕೂಡ ಮುಳುಗಡೆಯಾಗಿದೆ. ಇದರ ಜೊತೆಗೆ ಮಲೆನಾಡಿನ ಸಮಸ್ಯೆಗಳು ಸಾಕಷ್ಟಿವೆ. ಶಿವಮೊಗ್ಗಕ್ಕೆ ಮುಖ್ಯಮಂತ್ರಿಗಳು ಭೇಟಿ ನೀಡುತ್ತಿದ್ದಾರೆ. ಅವರು ಈ ದಿನವೇ ಸಂತ್ರಸ್ಥರ ಸಮಸ್ಯೆ ಮತ್ತು ಮಲೆನಾಡು ಭಾಗದ ಸಮಸ್ಯೆಗಳನ್ನು ಬಗೆಹರಿಸಲು ಬದ್ಧರಾಗಬೇಕು ಎಂದರು. (women protest)

ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಇನ್ನು 15 ದಿನದಲ್ಲಿ ಸಂತ್ರಸ್ಥರ ಸಮಸ್ಯೆ ಬಗೆಹರಿಸುವುದಾಗಿ ಮಾತುಕೊಟ್ಟಿದ್ದರು. ಈಗಾಗಲೇ 10 ದಿನಗಳು ಕಳೆದಿವೆ. ಅವರು ಸಹ ಮುಖ್ಯಮಂತ್ರಿಗಳ ಜೊತೆಗಿರುತ್ತಾರೆ. ಸಂತ್ರಸ್ಥರ ಬಗ್ಗೆ ಮೂಗಿಗೆ ತುಪ್ಪ ಹಚ್ಚುವ ಬಿಜೆಪಿ ನಾಯಕರೆಲ್ಲಾ ಇವತ್ತು ಪಕ್ಷ ಸಂಘಟನೆಯ ಹೆಸರಲ್ಲಿ ಬರುತ್ತಿದ್ದಾರೆ. ಅವರೆಲ್ಲರೂ ಶರಾವತಿ
ಸಂತ್ರಸ್ಥರ ಬಗ್ಗೆ ಗಮನಹರಿಸಬೇಕು ಎಂದರು.

ಕ್ಲಿಕ್ ಮಾಡಿ ಇದನ್ನೂ ಓದಿ ಮದುವೆಗೆ ಹುಡುಗಿ ಹುಡುಕಿಕೊಡಿ ಅಂತಾ ಶಿವಮೊಗ್ಗ ರಕ್ಷಣಾಧಿಕಾರಿಗೆ ಮನವಿ ಕೊಟ್ಟ ಯುವಕ

ಸಂತ್ರಸ್ಥರಿಗೆ ಹಕ್ಕುಪತ್ರ ನೀಡಲು ಒತ್ತಾಯಿಸಿ ಜಿಲ್ಲಾ ಕಾಂಗ್ರೆಸ್ ಸಮಿತಿ ಹಾಗೂ ಶರಾವತಿ ಮುಳುಗಡೆ ಸಂತ್ರಸ್ಥರ ಕಾಂಗ್ರೆಸ್ ಜಾಗೃತ ಸಮಿತಿ ನ. 28ರಂದು ಮಲೆನಾಡ ಜನಾಕ್ರೋಶದ ಹೆಸರಲ್ಲಿ ಪಾದಯಾತ್ರೆ ಮತ್ತು ಬೃಹತ್ ಸಮಾವೇಶ ಆಯೋಜಿಸಿದೆ. ಆಯನೂರಿನಲ್ಲಿ ಬೆಳಗ್ಗೆ 9 ಗಂಟೆಗೆ ಆರಂಭವಾಗುವ ಪಾದಯಾತ್ರೆಯಲ್ಲಿ ಜಿಲ್ಲೆಯ ಕಾಂಗ್ರೆಸ್ ಮಹಿಳಾ (women protest) ಕಾರ್ಯಕರ್ತೆಯರೆಲ್ಲರೂ ಮತ್ತು ಸಂತ್ರಸ್ಥ ಮಹಿಳೆಯರು ಭಾಗವಹಿಸಲಿದ್ದಾರೆ. ಹಾಗೆಯೇ ಸಂಜೆ 4 ಗಂಟೆಗೆ ಶಿವಮೊಗ್ಗದ ಎನ್‌ಇಎಸ್ ಕಾಲೇಜ್ ಮೈದಾನದಲ್ಲಿ ನಡೆಯುವ ಸಮಾವೇಶದಲ್ಲೂ ಮಹಿಳೆಯರು ಪಾಲ್ಗೊಳ್ಳುತ್ತೇವೆ ಎಂದರು.

ಕ್ಲಿಕ್ ಮಾಡಿ ಇದನ್ನೂ ಓದಿ ‘ಸಿದ್ದರಾಮಯ್ಯ ಅಡ್ರೆಸ್ ಇಲ್ಲದಂತೆ ಧೂಳೀಪಟ ಆಗುತ್ತಾರೆ’

ಪತ್ರಿಕಾಗೋಷ್ಠಿಯಲ್ಲಿ ಪ್ರಮುಖರಾದ ಪಾಲಿಕೆ ವಿರೋಧ ಪಕ್ಷದ ನಾಯಕಿ ರೇಖಾ ರಂಗನಾಥ್, ಯಮುನಾ ರಂಗೇಗೌಡ, ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷೆ ವೇದಾ ವಿಜಯಕುಮಾ, ಶ್ವೇತಾ ಬಂಡಿ, ಕವಿತಾ, ಗೌರಮ್ಮ, ಮಂಜುಳಮ್ಮ, ರೇಷ್ಮಾ, ಸುವರ್ಣಾ ನಾಗರಾಜ್, ಸುಷ್ಮಾ, ಕವಿತಾ ರುದ್ರೇಶ್, ವಿಶಾಲಾಕ್ಷಿ, ಪ್ರತಿಭಾ ಮೊದಲಾದವರಿದ್ದರು.

Shimoga Nanjappa HOspital

(women protest)

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment