ಓವರ್ ಟೇಕ್ ಮಾಡುವಾಗ ಅಪಘಾತ, ದೇವಸ್ಥಾನದ ಹುಂಡಿ ಕದ್ದೊಯ್ದ ಕಳ್ಳರು | 3 CRIME NEWS

SHIVAMOGGA LIVE NEWS | 26 NOVEMBER 2022

ಮನೆ ಆವರಣದಲ್ಲಿ ನಿಲ್ಲಿಸಿದ್ದ ಬೈಕ್ ನಾಪತ್ತೆ, ಕೇಸ್ ದಾಖಲು

ಶಿವಮೊಗ್ಗ : ಕೆಲಸ ಮುಗಿಸಿ ತಂದು ಮನೆಯ ಆವರಣದಲ್ಲಿ ನಿಲ್ಲಿಸಿದ್ದ ಬೈಕ್ ಬೆಳಗಾಗುವುದರಲ್ಲಿ https://chat.whatsapp.com/KChu2C1bGTM2v9HmZlfIkSನಾಪತ್ತೆಯಾಗಿದೆ. ಈ ಸಂಬಂಧ ಶಿವಮೊಗ್ಗ ತಾಲೂಕು ತುಪ್ಪೂರು ಗ್ರಾಮದ ರಾಮಚಂದ್ರಪ್ಪ ಎಂಬುವವರು ದೂರು ದಾಖಲಿಸಿದ್ದಾರೆ. ರಾತ್ರಿ ಊಟ ಮಾಡಿ ಮಲಗುವಾಗ ಮನೆಯ ಗೇಟ್ ಹಾಕಿತ್ತು. ಮನೆ ಆವರಣದೊಳಗೆ ಬೈಕ್ ಇತ್ತು. ಬೆಳಗ್ಗೆ ಎದ್ದು ನೋಡಿದಾಗ ಹೀರೋ ಹೋಂಡ ಸ್ಪ್ಲೆಂಡರ್ ಬೈಕ್ ಇರಲಿಲ್ಲ ಎಂದು ದೂರಿನಲ್ಲಿ ತಿಳಿಸಿದ್ದಾರೆ. ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. (crime update)

Shimoga Nanjappa Hospital

(crime update)

ದೇವಸ್ಥಾನದ ಬಾಗಿಲು ಮುರಿದು ಹುಂಡಿಯನ್ನೆ ಕದ್ದೊಯ್ದರು

ತೀರ್ಥಹಳ್ಳಿ : ತಾಲೂಕಿನ ಹುಂಚದಟ್ಟೆ ಗ್ರಾಮದ ಮಾರಿಕಾಂಬ ದೇವಿ ದೇವಸ್ಥಾನದಲ್ಲಿ ಕಳೆದ ರಾತ್ರಿ LIC-HOME-NEW-ADVTಕಳ್ಳತನವಾಗಿದೆ. ದೇವಸ್ಥಾನದ ಬಾಗಿಲು ಮುರಿದು ಹುಂಡಿಯನ್ನೇ ಕಳ್ಳರು ಕದ್ದೊಯ್ದಿದ್ದಾರೆ ಎಂದು ತಿಳಿದು ಬಂದೆ. ಇವತ್ತು ಬೆಳಗ್ಗೆ ದೇವಸ್ಥಾನದಲ್ಲಿ ಕಳ್ಳತನವಾಗಿರುವ ವಿಚಾರ ಗ್ರಾಮಸ್ಥರಿಗೆ ಗೊತ್ತಾಗಿದೆ. ಕೂಡಲೆ ಪೊಲೀಸರಿಗೆ ಮಾಹಿತಿ ನೀಡಲಾಯಿತು. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಕ್ಲಿಕ್ ಮಾಡಿ ಇದನ್ನೂ ಓದಿ ಸವಳಂಗ ರಸ್ತೆಯಲ್ಲಿ ರೈಲಿಗೆ ಸಿಲುಕಿ ಯುವಕನ ಕಾಲು ಕಟ್

(crime update)

ಬೈಕನ್ನು ಓವರ್ ಟೇಕ್ ಮಾಡಿ ಡಿಕ್ಕಿ ಹೊಡೆಸಿದ ಗೂಡ್ಸ್ ಗಾಡಿ

ಭದ್ರಾವತಿ : ಬೈಕನ್ನು ಓವರ್ ಟೇಕ್ ಮಾಡುವ ರಭಸದಲ್ಲಿ ಗೂಡ್ಸ್ ಗಾಡಿಯೊಂದು ಡಿಕ್ಕಿ ಹೊಡೆದಿದೆ. NANJAPPA HOSPITAL 100 X 100 jpgಇಬ್ಬರು ಬೈಕ್ ಸವಾರರ ಕಾಲಿಗೆ ಗಾಯವಾಗಿದೆ. ಹೊನ್ನಾಳಿ ತಾಲೂಕು ಹನಗವಾಡಿ ಗ್ರಾಮದ ಯಾಸೀನ್, ರೆಹಮತ್ ಗಾಯಗೊಂಡವರು. ಹನಗವಾಡಿಯಿಂದ ಭದ್ರಾವತಿಗೆ ಬರುವಾಗ ಬಾಬಳ್ಳಿ ಗ್ರಾಮದ ಬಳಿ ಘಟನೆ ಸಂಭವಿಸಿದೆ. ಅಕ್ರಂ ಎಂಬಾತ ಗೂಡ್ಸ್ ಗಾಡಿಯನ್ನು ವೇಗವಾಗಿ ಚಲಾಯಿಸಿಕೊಂಡು ಬಂದು ಬೈಕನ್ನು ಓವರ್ ಟೇಕ್ ಮಾಡಿದ್ದಾನೆ. ಈ ವೇಳೆ ದಿಢೀರ್ ಬ್ರೇಕ್ ಹಾಕಿದ್ದರಿಂದ ಅಪಘಾತವಾಗಿದೆ. ಗಾಯಗೊಂಡಿರುವ ಬೈಕ್ ಸವಾರರನ್ನು ಭದ್ರಾವತಿಯ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಯಿತು.

Shimoga Nanjappa Hospital

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿತಿನ್ ಆರ್‌.ಕೈದೊಟ್ಲು
ನಿತಿನ್ ಆರ್‌.ಕೈದೊಟ್ಲು

Published : November 26, 2022 at 3:21 PM IST

JNN College of Engineering Admissions started

© ಶಿವಮೊಗ್ಗ ಲೈವ್‌ : ನವೆಂಬರ್ 26, 2022

Leave a Comment