ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 28 NOVEMBER 2022
ಶಿವಮೊಗ್ಗ : ತಾಂತ್ರಿಕವಾಗಿ ಕೇಂದ್ರ ಸರ್ಕಾರಕ್ಕೆ ತಿಳಿಸದೆಯೆ ಈ ಹಿಂದೆ ಶರಾವತಿ ಸಂತ್ರಸ್ಥರ ಜಮೀನನ್ನು ಡಿನೋಟಿಫಿಕೇಷನ್ ಮಾಡಲಾಗಿತ್ತು. ಆಗ ಕಾಂಗ್ರೆಸ್ ಪಕ್ಷದ ಚುನಾವಣೆ ಗಿಮಿಕ್ (election gimmick) ನಿಂದಾಗಿಯೇ ಹೈಕೋರ್ಟ್ ಡಿನೋಟಿಫಿಕೇಷನ್ ರದ್ದುಗೊಳಿಸಿದೆ. ಈಗ ಮತ್ತೆ ಮತ ಬೇಟೆಗಾಗಿ ಕಾಲ್ನಡಿಗೆ ಮಾಡುತ್ತಿದ್ದಾರೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು.
ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು, 2016 – 17ರಲ್ಲಿ ಚುನಾವಣೆ ಗಿಮಿಕ್ (election gimmick) ಮಾಡಲು, ತಾಂತ್ರಿಕವಾಗಿ ಕೇಂದ್ರ ಸರ್ಕಾರಕ್ಕೆ ತಿಳಿಸದೆ ಡಿನೋಟಿಫಿಕೇಷನ್ ಮಾಡಿದ್ದರು. ಇದೆ ಆಧಾರದ ಮೇಲೆ ಹೈಕೋರ್ಟ್ ಡಿನೋಟಿಫಿಕೇಷನ್ ರದ್ದುಗೊಳಿಸಿದೆ. ಈಗ ನಾವು ಸರ್ವೆ ಕಾರ್ಯ ನಡೆಸುತ್ತಿದ್ದೇವೆ ಎಂದರು.
ALSO READ – ಶರಾವತಿ ಸಂತ್ರಸ್ಥರ ಸಮಸ್ಯೆ ಪರಿಹಾರಕ್ಕೆ 3 ಅವಕಾಶವಿತ್ತು, ತೀರ್ಥಹಳ್ಳಿಯಲ್ಲಿ ಸಿಎಂ
ಕೋರ್ಟ್ ತೀರ್ಪಿನ ವಿರುದ್ಧ ಮೇಲ್ಮನವಿ ಸಲ್ಲಿಸುವ ಪ್ರಶ್ನೆಯೆ ಉದ್ಭವವಾಗುವುದಿಲ್ಲ. ಆಗ ಸರ್ಕಾರ ಮಾಡಿದ್ದು ತಪ್ಪು ಎಂಬ ಕಾರಣಕ್ಕೆ ಹೈಕೋರ್ಟ್ ಡಿನೋಟಿಫಿಕೇಷನ್ ರದ್ದುಗೊಳಿಸಿದೆ. ಇದೆ ಕಾರಣಕ್ಕೆ ಸರ್ವೆ ಮಾಡಿಸಲಾಗುತ್ತಿದೆ. ಜಿಲ್ಲಾಧಿಕಾರಿ, ಅರಣ್ಯ ಇಲಾಖೆ ಅಧಿಕಾರಿಗಳು ಜಂಟಿ ಸರ್ವೆ ಮಾಡುತ್ತಿದ್ದಾರೆ. ಆ ವರದಿಯನ್ನು ಕೇಂದ್ರ ಸರ್ಕಾರಕ್ಕೆ ಸಲ್ಲಿಸಲಿದ್ದೇವೆ. ತಾಂತ್ರಿಕವಾಗಿ ಎಲ್ಲವನ್ನು ಸರಿಪಡಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಆರಗ ಜ್ಞಾನೇಂದ್ರ ತಿಳಿಸಿದರು.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422