ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | 20 ಏಪ್ರಿಲ್ 2019
ಬಿಜೆಪಿ ಅಭ್ಯರ್ಥಿ ಪರವಾಗಿ ಭದ್ರಾವತಿಯಲ್ಲಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಭರ್ಜರಿ ರೋಡ್ ಶೋ ನಡೆಸಿದರು. ರಂಗಪ್ಪ ಸರ್ಕಲ್’ನಿಂದ ಆರಂಭವಾದ ಮೆರವಣಿಗೆ ಅಂಬೇಡ್ಕರ್ ವೃತ್ತದವರೆಗೂ ಸಾಗಿತು.
ರೋಡ್ ಶೋ ನಡೆದ ರಸ್ತೆಯುದ್ದಕ್ಕೂ ಬಿಜೆಪಿ ಕಾರ್ಯಕರ್ತರು ಘೋಷಣೆ ಕೂಗುತ್ತ, ಬಿ.ವೈ.ರಾಘವೇಂದ್ರ ಅವರಿಗೆ ಮತ ನೀಡುವಂತೆ ಮನವಿ ಮಾಡಿದರು. ಇನ್ನು, ರೋಡ್ ಶೋ ಉದ್ದಕ್ಕೂ ಅಮಿತ್ ಷಾ ಅವರಿಗೆ ಹೂವು ಹಾಕಿ ಸ್ವಾಗತಿಸಲಾಯಿತು.
ಸೆಕ್ಯೂರಿಟಿ ಫುಲ್ ಟೈಟ್
ಅಮಿತ್ ಷಾ ರೋಡ್ ಶೋ ಹಿನ್ನೆಲೆಯಲ್ಲಿ ಭದ್ರಾವತಿಯಲ್ಲಿ ಭಾರೀ ಭದ್ರತೆ ಕೈಗೊಳ್ಳಲಾಗಿತ್ತು. ಪೊಲೀಸ್ ಮತ್ತು ಸೇನೆಯನ್ನು ಭದ್ರತೆಗಾಗಿ ನಿಯೋಜಿಸಲಾಗಿತ್ತು.
ಶಿವಮೊಗ್ಗ ಶಾಸಕ ಕೆ.ಎಸ್.ಈಶ್ವರಪ್ಪ, ಬಿಜೆಪಿ ಜಿಲ್ಲಾಧ್ಯಕ್ಷ ರುದ್ರೇಗೌಡ ಸೇರಿದಂತೆ ಹಲವರು ರೋಡ್ ಶೋನದಲ್ಲಿ ಪಾಲ್ಗೊಂಡಿದ್ದರು.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ | 7411700200
ಸುದ್ದಿಗಾಗಿ ಮೊಬೈಲ್ ನಂಬರ್ | 9964634494ಈ ಮೇಲ್ | [email protected]
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422