ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 1 DECEMBER 2022
ಭದ್ರಾವತಿ : ಬೀದಿ ನಾಯಿಗಳ ದಾಳಿಗೆ (stray dogs attack) ನಾಲ್ಕು ವರ್ಷದ ಬಾಲಕ ಸಾವನ್ನಪ್ಪಿದ್ದಾನೆ. ತೀವ್ರ ಗಾಯಗೊಂಡಿದ್ದ ಬಾಲಕನನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲು ಕರೆ ತರುವಾಗ ಮಾರ್ಗ ಮಧ್ಯೆ ಕೊನೆಯುಸಿರೆಳೆದಿದ್ದಾನೆ.

ಭದ್ರಾವತಿ ತಾಲೂಕು ದೊಣಬಘಟ್ಟ ಗ್ರಾಮದಲ್ಲಿ ಘಟನೆ ಸಂಭವಿಸಿದೆ. ಇಲ್ಲಿನ ಸೈಯದ್ ನಸ್ರುಲ್ಲಾ ಮತ್ತು ಶೇರ್ ಬಾನು ದಂಪತಿ ಪುತ್ರ ಸೈಯದ್ ಅರ್ಷದ್ ಮದನಿ (4) ಸಾವನ್ನಪ್ಪಿದ್ದಾನೆ.
(stray dogs attack)
ಜಮೀನಿಗೆ ಹೋಗುವಾಗ ದಾಳಿ
ಸೈಯದ್ ಅರ್ಷದ್ ಮದನಿ ತನ್ನ ತಂದೆಯೊಂದಿಗೆ ಜಮೀನಿಗೆ ತೆರಳುತ್ತಿದ್ದ. ಈ ವೇಳೆ ನಾಯಿಗಳು ದಾಳಿ
ನಡೆಸಿವೆ. ಸುಮಾರು 10 ನಾಯಿಗಳು ಒಟ್ಟಿಗೆ ದಾಳಿ ಮಾಡಿದ್ದು, ಬಾಲಕ ಗಂಭೀರವಾಗಿ ಗಾಯಗೊಂಡಿದ್ದಾನೆ. ಕೂಡಲೆ ಆತನನ್ನು ಭದ್ರಾವತಿ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಹೆಚ್ಚಿನ ಚಿಕಿತ್ಸೆಗೆ ಆಂಬುಲೆನ್ಸ್ ಮೂಲಕ ಮೆಗ್ಗಾನ್ ಆಸ್ಪತ್ರೆಗೆ ಕರೆದೊಯ್ಯುವಾಗ ಮಾರ್ಗ ಮಧ್ಯೆ ಮೃತಪಟ್ಟಿದ್ದಾನೆ.
ALSO READ – ಅಡಕೆ ಸಾಗಣೆಗೆ 6 ಗೈಡ್ ಲೈನ್ ಪ್ರಕಟಿಸಿದ ಶಿವಮೊಗ್ಗ ಪೊಲೀಸ್, ಏನದು? ಕಾರಣವೇನು?
ಘಟನೆ ಸಂಬಂಧ ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

LATEST NEWS
- ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

- ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

- ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

- ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್, ಯಾಕೆ?

- ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

About The Editor
ನಿತಿನ್ ಆರ್.ಕೈದೊಟ್ಲು
















