SHIVAMOGGA LIVE NEWS | 3 DECEMBER 2022
NEWS 1 – ಮದುವೆಗೆ ತೆರಳುತ್ತಿದ್ದವರಿಗೆ ಯಮನಂತೆ ಎದುರಾದ ಲಾರಿ
ಸೊರಬ : ಸಹೋದರಿಯ ಮಗಳ ಮದುವೆಗೆ ಬೈಕಿನಲ್ಲಿ ತೆರಳುತ್ತಿದ್ದ ವೇಳೆ ಲಾರಿ ಡಿಕ್ಕಿ (truck accident) ಹೊಡೆದು ವ್ಯಕ್ತಿ ಮೃತಪಟ್ಟಿದ್ದಾರೆ. ಮತ್ತೊಬ್ಬ ಸವಾರ ಗಾಯಗೊಂಡಿದ್ದಾರೆ. ಸೊರಬ ತಾಲೂಕು ಆನವಟ್ಟಿ ಸಮೀಪದ ಹುರಳಿಕೊಪ್ಪದಲ್ಲಿ ಘಟನೆ ಸಂಭವಿಸಿದೆ. ಬೈಕ್ ಚಲಾಯಿಸುತ್ತಿದ್ದ ಮುತ್ತಪ್ಪ ಮೃತಪಟ್ಟಿದ್ದಾರೆ. ಸಂಬಂಧಿ ರವಿ ಎಂಬುವವರು ಗಾಯಗೊಂಡಿದ್ದಾರೆ. ಬ್ಯಾಗವಾದಿ ಗ್ರಾಮದಿಂದ ಆನವಟ್ಟಿಯಲ್ಲಿ ನಡೆಯುತ್ತಿದ್ದ ಮದುವೆ ಸಮಾರಂಭಕ್ಕೆ ಇಬ್ಬರು ಬೈಕಿನಲ್ಲಿ ತೆರಳುತ್ತಿದ್ದರು.
ಹುರಳಿಕೊಪ್ಪ ಬಳಿ ಎದುರಿನಿಂದ ಬಂದ ಲಾರಿ ಬೈಕಿಗೆ ಡಿಕ್ಕಿ ಹೊಡೆದಿದೆ. ತಲೆ ಭಾಗಕ್ಕೆ ತೀವ್ರ ಪೆಟ್ಟಾಗಿ ಮುತ್ತಪ್ಪ ಅವರಿಗೆ ರಕ್ತಸ್ರಾವ ಉಂಟಾಗಿತ್ತು. ರವಿ ಅವರಿಗು ಗಾಯವಾಗಿದೆ. ಸ್ಥಳೀಯರು ಅವರನ್ನು ಆನವಟ್ಟಿ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಿದ್ದರು. ಹೆಚ್ಚಿನ ಚಿಕಿತ್ಸಗೆ ಮುತ್ತಪ್ಪ ಅವರನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಮೆಗ್ಗಾನ್ ಆಸ್ಪತ್ರೆಯಲ್ಲಿ ಮತ್ತಪ್ಪ ಮೃತಪಟ್ಟಿದ್ದಾರೆ. ಅಪಘಾತದ ಬಳಿಕ ಲಾರಿ ಚಾಲಕ ಲಾರಿಯನ್ನು ಬಿಟ್ಟು ಪರಾರಿಯಾಗಿದ್ದಾನೆ. ಘಟನೆ ಸಂಬಂಧ ಆನವಟ್ಟಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
![]() |
(truck accident)
NEWS 2 – ಕಾರು, ಬಸ್ ಮುಖಾಮುಖಿ ಡಿಕ್ಕಿ
ಆನಂದಪುರ : ಕಾರು ಮತ್ತು ಖಾಸಗಿ ಬಸ್ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಕಾರಿನಲ್ಲಿದ್ದವರಿಗೆ ಸಣ್ಣಪುಟ್ಟ ಗಾಯವಾಗಿದೆ. ತುಪ್ಪೂರಿನಲ್ಲಿ ಶುಕ್ರವಾರ ಘಟನೆ ಸಂಭವಿಸಿದೆ. ಕಾರು ಶಿವಮೊಗ್ಗದ ಸಾಗರ ಕಡೆಗೆ ತೆರಳುತ್ತಿತ್ತು. ಖಾಸಗಿ ಬಸ್ ಸಾಗರದಿಂದ ಶಿವಮೊಗ್ಗದ ಕಡೆಗೆ ಹೋಗುತ್ತಿತ್ತು. ತುಪ್ಪೂರಿನಲ್ಲಿ ಮುಖಾಮುಖಿ ಡಿಕ್ಕಿಯಾಗಿದ್ದು, ಕಾರಿನಲ್ಲಿ ಏರ್ ಬ್ಯಾಗ್ ತೆರೆದುಕೊಂಡಿದ್ದರಿಂದ ಚಾಲಕ ಪ್ರಾಣಪಾಯದಿಂದ ಪಾರಾಗಿದ್ದಾನೆ. ಘಟನೆಯಲ್ಲಿ ಕಾರು ಮತ್ತು ಬಸ್ಸಿನ ಮುಂಭಾಗ ನುಜ್ಜುಗುಜ್ಜಾಗಿದೆ. ಕುಂಸಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.
NEWS 3 – ಬೆಂಕಿ, ಮನೆ ಸಂಪೂರ್ಣ ಭಸ್ಮ
ಹೊಸನಗರ : ಶಾರ್ಟ್ ಸರ್ಕಿಟ್ ನಿಂದಾಗಿ ಮನೆಯೊಂದಕ್ಕೆ ಬೆಂಕಿ ಬಿದ್ದಿದ್ದು, ವಸ್ತುಗಳೆಲ್ಲ ಸುಟ್ಟು ಭಸ್ಮವಾಗಿದೆ. ಹೊಸನಗರ ತಾಲೂಕು ಮಾರುತಿಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗುಬ್ಬಿಗ ಗ್ರಾಮದ ರೈತ ಕೊಡ್ಲುಕೊಪ್ಪ ಗಣಪತಿ ಎಂಬುವವರ ಮನೆ ಬೆಂಕಿಗೆ ಆಹುತಿಯಾಗಿದೆ. ಮನೆಯಲ್ಲಿ ಗಣಪತಿ, ಪತ್ನಿ, ಮಕ್ಕಳು ಎಲ್ಲರು ಇದ್ದರು. ರಾತ್ರಿ 9.30ರ ಹೊತ್ತಿಗೆ ಶಾರ್ಟ್ ಸರ್ಕಿಟ್ ಸಂಭವಿಸಿ ಹೊತ್ತುಕೊಂಡಿದೆ.
ALSO READ – ರಾತ್ರಿ ಸಾರ್ವಜನಿಕರನ್ನು ಅಡ್ಡಗಟ್ಟಿ ದರೋಡೆಗೆ ಪ್ಲಾನ್, ಶಿವಮೊಗ್ಗ ಪೊಲೀಸರ ಬಲೆಗೆ ಬಿತ್ತು ತೊಟ್ಟಿ ಸೀನನ ಗ್ಯಾಂಗ್
ಬೆಂಕಿಯ ಕೆನ್ನಾಲಿಗೆಗೆ ಮನೆಯಲ್ಲಿದ್ದ ಚಿನ್ನಾಭರಣ, ನಗದು, ಕೆಂಪಡಿಕೆ, ಭತ್ತ, ದಿನ ಬಳಕೆ ವಸ್ತುಗಳು ಸಂಪೂರ್ಣ ಸುಟ್ಟು ಹೋಗಿವೆ. ಬೆಂಕಿ ವೇಗವಾಗಿ ಹೊತ್ತುಕೊಂಡಿದ್ದರಿಂದ ಯಾವುದೆ ವಸ್ತುಗಳನ್ನು ರಕ್ಷಣೆ ಮಾಡಿಕೊಳ್ಳಲು ಆಗಿಲ್ಲ. ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಿದರು. ಆದರೆ ಆ ಹೊತ್ತಿಗಾಗಲೆ ಎಲ್ಲವು ಸುಟ್ಟು ಕರಕಲಾಗಿತ್ತು.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200