ಜಂಗ್ಲಿ ಮಂಜುನಾಥ್ ಗ್ಯಾಂಗ್ ಅರೆಸ್ಟ್, ಕಂತೆ ಕಂತೆ ಹಣ ವಶಕ್ಕೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 10 DECEMBER 2022

ಶಿವಮೊಗ್ಗ : ಮನೆ ಕಳ್ಳತನ (House Theft Arrest) ಮಾಡಿದ್ದ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಇವರಿಂದ ಲಕ್ಷಾಂತರ ರುಪಾಯಿ ನಗದು, ಚಿನ್ನಾಭರಣ, ಬೈಕ್ ವಶಕ್ಕೆ ಪಡೆಯಲಾಗಿದೆ.

Shimoga Nanjappa Hospital

ಶಿವಮೊಗ್ಗ ತಾಲೂಕು ಪಿಳ್ಳಂಗೆರೆ ಗ್ರಾಮದ ಮಂಜುನಾಥ್ ಅಲಿಯಾಸ್ ಜಂಗ್ಲಿ, ಅಶೋಕ್, ಮೊಹಮ್ಮದ್ ಸುಹೇಲ್ ಅಲಿಯಾಸ್ ಟುಯ್ಯಿ ಸೇರಿದಂತೆ ನಾಲ್ವರನ್ನು ಬಂಧಿಸಲಾಗಿದೆ.

(House Theft Arrest)

ಕಂತೆ ಕಂತೆ ಹಣ ವಶಕ್ಕೆ

ನಾಲ್ವರು ಆರೋಪಿಗಳನ್ನು ಬಂಧಿಸಿರುವ ಪೊಲೀಸರು ಕಂತೆ ಕಂತೆ ಹಣ ವಶಕ್ಕೆ ಪಡೆದಿದ್ದಾರೆ. 11.52 ಲಕ್ಷ ರೂ.ನಗದು ವಶಕ್ಕೆ ಪಡೆಯಲಾಗಿದೆ. 1.50 ಲಕ್ಷ ರೂ. ಮೌಲ್ಯದ ಚಿನ್ನಾಭರಣ, ಕೃತ್ಯಕ್ಕೆ ಬಳಸಿದ ಬೈಕ್ ಒಂದನ್ನು ವಶಕ್ಕೆ ಪಡೆಯಲಾಗಿದೆ.

ತುಂಗಾ ನಗರ ಠಾಣೆ ಇನ್ಸ್ ಪೆಕ್ಟರ್ ಮಂಜುನಾಥ್, ಪಿಎಸ್ಐಗಳಾದ ಶಿವಪ್ರಸಾದ್, ದೂದ್ಯನಾಯ್ಕ, ಸುನಿಲ್ ಬಿ.ಚಂದ್ರಪ್ಪ, ಎಎಸ್ಐ ಮನೋಹರ್, ಸಿಬ್ಬಂದಿ ಕಿರಣ್ ಮೋರೆ, ಅರುಣ್ ಕುಮಾರ್, ಮೋಹನ್ ಕುಮಾರ್, ನಾಗಪ್ಪ ಅಡಿವೆಪ್ಪನವರ್, ಲಂಕೇಶ್ ಕುಮಾರ್, ಕಾಂತರಾಜ್, ಹರೀಶ್, ಅರಿಹಂತ ಶಿರಹಟ್ಟಿ, ಪುನಿತ್ ಕುಮಾರ್ ಅವರು ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ.

ಇದನ್ನೂ ಓದಿ – ಶಿವಮೊಗ್ಗ ರೈಲ್ವೆ ನಿಲ್ದಾಣ ಬಳಿ ದರೋಡೆಗೆ ಪ್ಲಾನ್, ತಲ್ವಾರ್, ರಾಡ್, ಖಾರದ ಪುಡಿ ಸಹಿತ ಸಿಕ್ಕಿಬಿದ್ದ ಟೀಮ್

Shimoga Nanjappa Hospital

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment