ಸವಳಂಗ ರಸ್ತೆಯಲ್ಲಿ ಭೀಕರ ಅಪಘಾತ, ಮೃತರ ಗುರುತು ಪತ್ತೆ, ಎಲ್ಲರು ದಾವಣಗೆರೆಯವರು

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 11 DECEMBER 2022

ಶಿವಮೊಗ್ಗ : ಕಲ್ಲಾಪುರ ಬಳಿ ಇಂದು ಬೆಳಗಿನ ಜಾವ ಭೀಕರ ಅಪಘಾತ ಸಂಭವಿಸಿ ಮೂವರು ಮೃತಪಟ್ಟಿದ್ದಾರೆ. ಮೃತರ ಗುರುತು (identity) ಪತ್ತೆಯಾಗಿದ್ದು, ಎಲ್ಲರು ದಾವಣಗೆರೆ ಮೂಲದವರು ಎಂದು ತಿಳಿದು ಬಂದಿದೆ.

Shimoga Nanjappa Hospital

ಶಿವಮೊಗ್ಗದ ಸವಳಂಗ ರಸ್ತೆಯ ಕಲ್ಲಾಪುರ ಗ್ರಾಮದ ಬಳಿ ಭೀಕರ ಅಪಘಾತ ಸಂಭವಿಸಿದೆ. ಶಿವಮೊಗ್ಗದಿಂದ ದಾವಣಗೆರೆ ಕಡೆಗೆ ತೆರಳುತ್ತಿದ್ದ ಕಾರು ಮತ್ತು ಶಿವಮೊಗ್ಗ ಕಡೆಗೆ ಬರುತ್ತಿದ್ದ ಲಾರಿ ಮುಖಾಮುಖಿ ಡಿಕ್ಕಿಯಾಗಿದೆ.

(identity)

ಮೃತರ ಗುರುತು ಪತ್ತೆ

ಮೃತರನ್ನು ದಾವಣಗೆರೆ ಅವರಗೆರೆಯ ವಿವೇಕ, ಇಂಜಿನಿಯರಿಂಗ್ ಕಾಲೇಜು ವಿದ್ಯಾರ್ಥಿಗಳಾದ ಕಾರ್ತಿಕ್, ಮೋಹನ್ ಎಂದು ಗುರುತಿಸಲಾಗಿದೆ. ದಾವಣಗೆರೆ ಜಯನಗರದ ನಿವಾಸಿ ಸಿವಿಲ್ ಇಂಜಿನಿಯರಿಂಗ್ ವಿದ್ಯಾರ್ಥಿ ರುದ್ರೇಶ್ ಪಾಟೀಲ್ ಗಂಭೀರವಾಗಿ ಗಾಯಗೊಂಡಿದ್ದಾನೆ.

(identity)

ಡಿಕ್ಕಿಯಾಗಿ ರಸ್ತೆ ಬದಿಗೆ ಹೋದ ಕಾರು

ವಿದ್ಯಾರ್ಥಿಗಳು ಶಿವಮೊಗ್ಗದಿಂದ ದಾವಣಗೆರೆಗೆ ತೆರಳುತ್ತಿದ್ದರು. ಎದುರಿನಿಂದ ಬರುತ್ತಿದ್ದ ಲಾರಿ ಮತ್ತು ಕಾರಿನ ನಡುವೆ ಡಿಕ್ಕಿಯಾಗಿದೆ. ಲಾರಿಗೆ ಡಿಕ್ಕಿಯಾದ ಬಳಿಕ ಕಾರು ರಸ್ತೆ ಬದಿಗೆ ಹೋಗಿ ತಗ್ಗಿನಲ್ಲಿ ನಿಂತಿದೆ. ಗಾಯಗೊಂಡಿದ್ದ ವಿವೇಕ, ಕಾರ್ತಿಕ್ ಮತ್ತು ಮೋಹನ್ ತೀವ್ರ ರಕ್ತಸ್ರಾವ ಉಂಟಾಗಿ ಸ್ಥಳದಲ್ಲೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿ – ಜಂಗ್ಲಿ ಮಂಜುನಾಥ್ ಗ್ಯಾಂಗ್ ಅರೆಸ್ಟ್, ಕಂತೆ ಕಂತೆ ಹಣ ವಶಕ್ಕೆ

ಕಾರಿನ ಹಿಂಬದಿ ಸೀಟಿನಲ್ಲಿ ಕುಳಿತಿದ್ದ ರುದ್ರೇಶ್ ಗಂಭೀರವಾಗಿ ಗಾಯಗೊಂಡಿದ್ದಾನೆ. ಕೂಡಲೆ ಆತನನ್ನು ಶಿವಮೊಗ್ಗದ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಆತನಿಗೆ ಚಿಕಿತ್ಸೆ ಮುಂದುವರೆದಿದೆ.

ಇದನ್ನೂ ಓದಿ – BREAKING NEWS – ಶಿವಮೊಗ್ಗದಲ್ಲಿ ಭೀಕರ ಅಪಘಾತ, ಮೂವರು ಸ್ಥಳದಲ್ಲೇ ಸಾವು

ಘಟನೆಯಲ್ಲಿ ಕಾರಿನ ಮುಂಭಾಗ ನುಜ್ಜುಗುಜ್ಜಾಗಿದೆ. ಲಾರಿ ಬಲ ಬದಿಗೆ ಹಾನಿಯಾಗಿದೆ. ಶಿವಮೊಗ್ಗ ಗ್ರಾಮಾಂತರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

Shimoga Nanjappa HOspital

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : December 11, 2022

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

Leave a Comment