SHIVAMOGGA LIVE NEWS | 18 DECEMBER 2022
ಶಿವಮೊಗ್ಗ : ಕಾಂಗ್ರೆಸ್ ಪಕ್ಷದ ನಾಯಕಿ ಸೋನಿಯಾ ಗಾಂಧಿ ಅವರ ಹುಟ್ಟುಹಬ್ಬದ (sonia gandhi birthday) ಅಂಗವಾಗಿ ಪಕ್ಷದ ಜಿಲ್ಲಾ ಘಟಕದ ವತಿಯಿಂದ ಉಚಿತ ಆರೋಗ್ಯ ತಪಾಸಣೆ ಶಿಬಿರ ಆಯೋಜಿಸಲಾಗಿತ್ತು. ಜಿಲ್ಲಾಧ್ಯಕ್ಷ ಹೆಚ್.ಎಸ್.ಸುಂದರೇಶ್ ಅವರ ನೇತೃತ್ವದಲ್ಲಿ ಕಾರ್ಯಕ್ರಮ ನಡೆಸಲಾಯಿತು.
ಸೈನ್ಸ್ ಮೈದಾನದ ಸರ್ಕಾರಿ ಕಾಲೇಜಿನಲ್ಲಿ ವಿವಿಧ ಆಸ್ಪತ್ರೆಯ ವೈದ್ಯರು ಆರೋಗ್ಯ ತಪಾಸಣೆ ನಡೆಸಿದರು. ನಗರದ ವಿವಿಧೆಡೆಯಿಂದ ಆಗಮಿಸಿದ್ದ ಸಾರ್ವಜನಿಕರು ಆರೋಗ್ಯ ತಪಾಸಣೆ ಮಾಡಿಸಿಕೊಂಡರು. ಹೃದಯ, ಕಣ್ಣು, ಹಲ್ಲು ಸೇರಿದಂತೆ ವಿವಿಧ ಆರೋಗ್ಯ ತಪಾಸಣೆ ಮಾಡಲಾಯಿತು.
ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅವರು ಭೇಟಿ ನೀಡಿ, ಆರೋಗ್ಯ ತಪಾಸಣೆ ಕಾರ್ಯಕ್ರಮವನ್ನು ವೀಕ್ಷಿಸಿದರು. ಔಷಧ ವಿತರಣೆ ಮಾಡಿದರು.
ಇದೆ ವೇಳೆ ಮಾತನಾಡಿದ ಜಿಲ್ಲಾಧ್ಯಕ್ಷ ಹೆಚ್.ಎಸ್.ಸುಂದರೇಶ್ ಅವರು, ‘ಸೋನಿಯಾ ಗಾಂಧಿ (sonia gandhi birthday) ಅವರ ಆದರ್ಶವನ್ನು ಪಾಲಿಸುತ್ತಿದ್ದೇವೆ. ಅವರ ಹುಟ್ಟುಹಬ್ಬದ ಅಂಗವಾಗಿ ನಾಲ್ಕು ವರ್ಷದಿಂದ ನಿರಂತರವಾಗಿ ಆರೋಗ್ಯ ತಪಾಸಣೆ ಶಿಬಿರ ಆಯೋಜಿಸುತ್ತಿದ್ದೇವೆ. ಜನರಿಂದ ಉತ್ತಮ ಸ್ಪಂದನೆ ಸಿಕ್ಕಿದೆ’ ಎಂದು ತಿಳಿಸಿದರು.
ಇದನ್ನೂ ಓದಿ – ಶಿವಮೊಗ್ಗದಲ್ಲಿ ಬೀದಿಗಿಳಿದ ವಿದ್ಯಾರ್ಥಿಗಳು, ಸೈನ್ಸ್ ಮೈದಾನದಿಂದ ಮೆರವಣಿಗೆ, ಮಹಾವೀರ ವೃತ್ತದಲ್ಲಿ ಮಾನವ ಸರಪಳಿ
ವಿಧಾನ ಪರಿಷತ್ ಮಾಜಿ ಸದಸ್ಯ ಆರ್.ಪ್ರಸನ್ನಕುಮಾರ್, ಪಾಲಿಕೆ ಸದಸ್ಯ ಹೆಚ್.ಸಿ.ಯೋಗೇಶ್, ಕಲಗೋಡು ರತ್ನಾಕರ್, ಡಾ. ಪ್ರದೀಪ್ ಡಿಮೆಲ್ಲೋ, ಇಸ್ಮಾಯಿಲ್ ಖಾನ್, ಸಾಮಾಜಿಕ ಜಾಲತಾಣದ ಪ್ರವೀಣ್, ಸೌಗಂಧಿಕ ಸೇರಿದಂತೆ ಹಲವರು ಭಾಗವಹಿಸಿದ್ದರು.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200