ಗ್ರಾಮ ಪಂಚಾಯಿತಿ ಅಧ್ಯಕ್ಷೆ, ಉಪಾಧ್ಯಕ್ಷೆ, ಸದಸ್ಯರು, ಗ್ರಾಮಸ್ಥರಿಂದ ಇಡೀ ರಾತ್ರಿ ಧರಣಿ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 21 DECEMBER 2022
 ಸುದ್ದಿಯ ಹಿನ್ನೆಲೆ 
ಚೋರಡಿ ಗ್ರಾಮದಲ್ಲಿ ಒತ್ತುವರಿ ತೆರವು ಕಾರ್ಯಾಚರಣೆ ನಡೆಸಲಾಗುತ್ತಿತ್ತು. ಒತ್ತುವರಿ ಮಾಡಿಕೊಂಡವರು ಕಾರ್ಯಾಚರಣೆಗೆ ವಿರೋಧ ವ್ಯಕ್ತಪಡಿಸುತ್ತಿದ್ದರು. ಈ ವೇಳೆ ಮಹಿಳೆಯೊಬ್ಬರು ವಿಷ ಸೇವಿಸಿದ್ದಾರೆ. ವಿಷಯ ತಿಳಿದು ಜಿಲ್ಲಾ ಪಂಚಾಯಿತಿ ಸಿಇಒ ಅವರು ಗ್ರಾಮ ಪಂಚಾಯಿತಿ ಪಿಡಿಒ ಅವರನ್ನು ಅಮಾನತು ಮಾಡಿದ್ದರು.

ಶಿವಮೊಗ್ಗ : ಗ್ರಾಪಂ ಪಿಡಿಒ ಅವರನ್ನು ಕಾರಣವೇ ಇಲ್ಲದೇ ಜಿಪಂ ಸಿಇಒ ಅಮಾನತು ಮಾಡಿದ್ದಾರೆ. ಜಿಲ್ಲಾ ಪಂಚಾಯಿತಿ ಸಿಇಒ ಸ್ಥಳಕ್ಕೆ ಆಗಮಿಸಿ ಅಮಾನತು ಹಿಂದಕ್ಕೆ ಪಡೆಯುವವರೆಗೆ ಗ್ರಾಪಂ ಕಚೇರಿ ಬೀಗ ತೆರೆಯಲೂ ಬಿಡುವುದಿಲ್ಲ ಎಂದು ಗ್ರಾಪಂ ಸದಸ್ಯರು ಮತ್ತು ಸಾರ್ವಜನಿಕರು ಅಹೋರಾತ್ರಿ ಧರಣಿ ನಡೆಸಿದರು.
ತಾಲೂಕಿನ ಚೋರಡಿ ಗ್ರಾಪಂ ಆವರಣದಲ್ಲಿ ಸದಸ್ಯರು ಅರ್ನಿದಿಷ್ಟಾವಧಿ ಧರಣಿ (over night protest) ನಡೆಸಿದ್ದಾರೆ.

Shimoga Nanjappa Hospital

ಗ್ರಾಮದಲ್ಲಿ ಪಶು ಆಸ್ಪತ್ರೆ ನಿರ್ಮಾಣ ಸಂಬಂಧ ಹಿಂದೆಯೇ ಜಾಗ ಗುರುತಿಸಲಾಗಿದೆ. ಆ ಜಾಗವನ್ನು ಸ್ವಚ್ಛ ಮಾಡಲು ಎಲ್ಲಾ ಗ್ರಾಪಂ ಸದಸ್ಯರು ಪಿಡಿಒ ಜೊತೆಗೆ ಸೋಮವಾರ ತೆರಳಿದ್ದೆವು. ಅಲ್ಲಿ ಕೆಲವರು ಒತ್ತುವರಿ ಕೂಡ ಮಾಡಿದ್ದಾರೆ. ಆದರೆ ಒತ್ತುವರಿ ಜಾಗದ ವಿಚಾರಕ್ಕೆ ಹೋಗದೇ ಖಾಲಿ ಇರುವ ಜಾಗವನ್ನು ಮಾತ್ರ ಸ್ವಚ್ಛ ಮಾಡಲಾಗಿದೆ ಎಂದು ತಿಳಿಸಿದರು.

ಈ ವೇಳೆ ಒತ್ತುವರಿ ಮಾಡಿಕೊಂಡಿರುವ ಚಂದ್ರಕಲಾ ಎಂಬ ಮಹಿಳೆ ವಿಷ ಕುಡಿದಂತೆ ಮಾಡಿದ್ದಾರೆ. ಅವರನ್ನು ಮೆಗ್ಗಾನ್ ಆಸ್ಪತ್ರೆಗೆ ಸೇರಿಸಲಾಗಿದೆ. ಅದೇ ವೇಳೆ ದಲಿತ ಸಂಘರ್ಷ ಸಮಿತಿಯವರು ಜಿಪಂ ಕಚೇರಿ ಎದುರು ಪ್ರತಿಭಟನೆ ನಡೆಸಿದ್ದಾರೆ. ಅಷ್ಟಕ್ಕೇ ಜಿಪಂ ಸಿಇಒ, ಗ್ರಾಪಂ ಪಿಡಿಒ ಅವರನ್ನು ಅಮಾನತು ಮಾಡಿದ್ದಾರೆ ಎಂದು ಆಕ್ರೋಶ (over night protest) ವ್ಯಕ್ತಪಡಿಸಿದರು.

ಒಂದೇ ವಾರದಲ್ಲಿ ಎರಡು ಬಾರಿ ಪಿಡಿಒ ಅವರನ್ನು ಅಮಾನತು ಮಾಡಲಾಗಿದೆ. ಪಿಡಿಒ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದರೂ ಅಮಾನತು ಮಾಡಿರುವುದು ಸರಿಯಲ್ಲ. ಕೂಡಲೇ ಜಿಪಂ ಸಿಇಒ ಗ್ರಾಮಕ್ಕೆ ಆಗಮಿಸಿ ಸ್ಥಳ ಪರಿಶೀಲನೆ ನಡೆಸಬೇಕು. ಅಲ್ಲಿಯವರೆಗೂ ಧರಣಿ ಹಿಂಪಡೆಯುವುದಿಲ್ಲ. ಗ್ರಾಪಂ ಕಚೇರಿ ಬಾಗಿಲನ್ನೂ ತೆರೆಯಲು ಬಿಡುವುದಿಲ್ಲ ಎಂದು ಪಟ್ಟು ಹಿಡಿದಿದ್ದಾರೆ.

ಇದನ್ನೂ ಓದಿ – ಸಿಬಿಐ ದಾಳಿಗೆ ಖಂಡನೆ, ಶಿವಮೊಗ್ಗದಲ್ಲಿ ಮೆರವಣಿಗೆ, ಕೇಂದ್ರದ ವಿರುದ್ಧ ಪ್ರತಿಭಟನೆ

ಗ್ರಾಪಂ ಅಧ್ಯಕ್ಷೆ ಸುಧಾ ಆಂಜನೇಯ, ಉಪಾಧ್ಯಕ್ಷೆ ಶಾರದಮ್ಮ ಹೂವಪ್ಪ, ಸದಸ್ಯರಾದ ನಿರಂಜನ ಗೌಡ, ರಾಜೇಶ್, ಅಶೋಕ, ಶಿವಕುಮಾರ್ ಸೇರಿದಂತೆ ಎಲ್ಲಾ ಸದಸ್ಯರು, ಗ್ರಾಮಸ್ಥರು ಧರಣಿಯಲ್ಲಿ ಪಾಲ್ಗೊಂಡಿದ್ದಾರೆ.

Shimoga Nanjappa Hospital

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : December 21, 2022

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

ವಿದ್ಯಾರ್ಥಿನಿಯರಿಗೆ ಉಪನ್ಯಾಸಕನಿಂದ ಮೆಸೇಜ್‌ ಆರೋಪ, ಕಾಲೇಜು ಮುಂದೆ ಆಕ್ರೋಶ

ವಿದ್ಯಾರ್ಥಿನಿಯರಿಗೆ ಉಪನ್ಯಾಸಕನಿಂದ ಮೆಸೇಜ್‌ ಆರೋಪ, ಕಾಲೇಜು ಮುಂದೆ ಆಕ್ರೋಶ

ಭದ್ರಾವತಿಯಲ್ಲಿ 20 ವರ್ಷದ ಯುವಕ ಅರೆಸ್ಟ್‌, ಈತನ ಮೇಲಿವೆ 11 ಕೇಸ್‌, ಏನೇನು?

ಭದ್ರಾವತಿಯಲ್ಲಿ 20 ವರ್ಷದ ಯುವಕ ಅರೆಸ್ಟ್‌, ಈತನ ಮೇಲಿವೆ 11 ಕೇಸ್‌, ಏನೇನು?

ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತೂ ಮಳೆಯಾಗುತ್ತಾ? ಇಲ್ಲಿದೆ ಇಂದಿನ ಹವಾಮಾನ ವರದಿ

ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತೂ ಮಳೆಯಾಗುತ್ತಾ? ಇಲ್ಲಿದೆ ಇಂದಿನ ಹವಾಮಾನ ವರದಿ

ಇಂದಿನ ಪಂಚಾಂಗ – ಇವತ್ತು ಷಷ್ಠಿ, ರೋಹಿಣಿ ನಕ್ಷತ್ರದ ದಿನ, ಯಾವ್ಯಾವ ಸಮಯ ಯಾವಾಗಿದೆ?

ಇಂದಿನ ಪಂಚಾಂಗ – ಇವತ್ತು ಷಷ್ಠಿ, ರೋಹಿಣಿ ನಕ್ಷತ್ರದ ದಿನ, ಯಾವ್ಯಾವ ಸಮಯ ಯಾವಾಗಿದೆ?

Leave a Comment