ಪದ್ಮಶ್ರೀ ಪುರಸ್ಕೃತ ಶಿವಮೊಗ್ಗದ ಹೊಸಹಳ್ಳಿ ಕೇಶವಮೂರ್ತಿ ಇನ್ನಿಲ್ಲ, ಅವರ ಬಗ್ಗೆ ಗೊತ್ತಿರಬೇಕಾದ 4 ವಿಚಾರಗಳು ಇಲ್ಲಿವೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 21 DECEMBER 2022

ಶಿವಮೊಗ್ಗ : ಗಮಕ ಗಂಧರ್ವ (gamaka expert), ಪದ್ಮಶ್ರೀ ಪುರಸ್ಕೃತ ಹೊಸಹಳ್ಳಿ ಹೆಚ್.ಆರ್.ಕೇಶವಮೂರ್ತಿ (89) ಅವರು ನಿಧನರಾಗಿದ್ದಾರೆ.

Shimoga Nanjappa Hospital

2022ರಲ್ಲಿ ಕೇಂದ್ರ ಸರ್ಕಾರ ಹೆಚ್.ಆರ್.ಕೇಶವಮೂರ್ತಿ ಅವರಿಗೆ ಪದ್ಮಶ್ರೀ ಪ್ರಶಸ್ತಿ ನೀಡಿ ಗೌರವಿಸಿತ್ತು. ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಕೇಶವಮೂರ್ತಿ ಅವರಿಗೆ ಪದ್ಮಶ್ರೀ ಪಶ್ರಸ್ತಿ ನೀಡಿದ್ದರು. ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಗಣ್ಯರು ಇದಕ್ಕೆ ಸಾಕ್ಷಿಯಾಗಿದ್ದರು.

(gamaka expert)

ಗೊತ್ತಿರಲೇಬೇಕಾದ 4 ವಿಚಾರಗಳು

1 ಹೆಚ್‌.ಆರ್.ಕೇಶವಮೂರ್ತಿ ಅವರು ಶಿವಮೊಗ್ಗದ ಮತ್ತೂರು ಹೊಸಹಳ್ಳಿಯ ರಾಮಸ್ವಾಮಿ ಶಾಸ್ತ್ರಿ–ಲಕ್ಷ್ಮೀದೇವಮ್ಮ ದಂಪತಿ ಪುತ್ರ. 22 ಫೆಬ್ರವರಿ 1934ರಲ್ಲಿ ಜನಿಸಿದ್ದ ಅವರು ಬಾಲ್ಯದಿಂದಲೇ ಗಮಕ ಕಲೆ ಕರಗತ ಮಾಡಿಕೊಂಡಿದ್ದರು. 16ನೇ ವಯಸ್ಸಿನಲ್ಲೇ ಗ್ರಾಮದ ವೆಂಕಟೇಶಯ್ಯ ಅವರ ಬಳಿ ಗಮಕ ವಾಚನ ಅಧ್ಯಯನ ಆರಂಭಿಸಿದ್ದರು. ರಾಮಾಯಣ, ಮಹಾಭಾರತ, ಕನ್ನಡ ಹಾಗೂ ಸಂಸ್ಕೃತದ ಕಾವ್ಯಗಳನ್ನು ಹಲವು ರಾಗಗಳಲ್ಲಿ ವಾಚನ ಮಾಡುವುದನ್ನು ರೂಢಿಸಿಕೊಂಡರು.

2  ರಾಜ್ಯ, ದೇಶದ ಹಲವೆಡೆ ಕಾರ್ಯಕ್ರಮಗಳಲ್ಲಿ ಗಮಕ ವಾಚನ ಮಾಡಿದ್ದಾರೆ. 100ಕ್ಕೂ ಹೆಚ್ಚು ರಾಗಗಳಲ್ಲಿ ವಾಚನ ಮಾಡುವ ಮೂಲಕ ಶತರಾಗಿ ಎಂಬ ಬಿರುದಿಗೂ ಪಾತ್ರರಾಗಿದ್ದಾರೆ. ಹಲವು ಪ್ರಶಸ್ತಿಗಳು ಕೂಡ ಇವರನ್ನ ಅರಸಿ ಬಂದಿವೆ.

3  ಹೆಚ್.ಆರ್.ಕೇಶವಮೂರ್ತಿ ಮತ್ತು ಡಾ. ಮತ್ತೂರು ಕೃಷ್ಣಮೂರ್ತಿ ಅವರ ಜೋಡಿ ಪ್ರಖ್ಯಾತಿ ಪಡೆದಿತ್ತು. ಉದಯ ಟಿವಿಯಲ್ಲಿ ಇವರು ನಡೆಸುತ್ತಿದ್ದ ಕುಮಾರವ್ಯಾಸ ಭಾರತ ಕಾರ್ಯಕ್ರಮ ದೊಡ್ಡ ಸಂಖ್ಯೆ ಜನರನ್ನು ತಲುಪಿತ್ತು. ಡಾ.ಮತ್ತೂರು ಕೃಷ್ಣಮೂರ್ತಿ ಅವರು ಸಂಸ್ಕೃತ ಗ್ರಾಮ ಮತ್ತೂರಿನವರು. ಹೆಚ್.ಆರ್.ಕೇಶವಮೂರ್ತಿ ಅವರ ಗಮಕ ಗ್ರಾಮ ಹೊಸಹಳ್ಳಿಯವರು. ಇವೆರಡು ಅವಳಿ ಗ್ರಾಮಗಳಾಗಿವೆ.

Hosalli Keshavamurthy and HR Krishnamurthy

4  ಕುಮಾರವ್ಯಾಸ ಭಾರತ, ಜೈಮಿನಿ ಭಾರತ, ಪಂಪನ ಮಹಾ ಭಾರತ, ರನ್ನನ ಗಧಾಯುದ್ಧ, ರಘುವಂಶ, ಕುಮಾರಸಂಭವದ ಶ್ಲೋಕಗಳಿಗೆ ರಾಗ ಸಂಯೋಜನೆ ಮಾಡಿ ಆರು ದಶಕಗಳ ಕಾಲ ಗಮಕವನ್ನು ದೇಶದೆಲ್ಲೆಡೆ ಪಸರಿಸಿದ್ದಾರೆ. ಕುಮಾರವ್ಯಾಸ ಭಾರತದ 135 ಧ್ವನಿ ಸುರುಳಿಗಳು, ಮಾರ್ಕಂಡೇಯ ಅವಧಾನಿ ಅವರ ವ್ಯಾಖ್ಯಾನದೊಂದಿಗೆ 35 ಧ್ವನಿ ಸುರುಳಿಗಳಲ್ಲಿ ಜೈಮಿನಿ ಭಾರತ ಹೊರ ಬಂದಿದೆ. ಕುಮಾರವ್ಯಾಸ ಭಾರತದ 200 ಕ್ಯಾಸೆಟ್ಟುಗಳನ್ನು ಹೊರ ತಂದಿದ್ದಾರೆ.

nanjappa%202

ALSO READ – ಮೈಸೂರು, ಬೆಂಗಳೂರು, ಹುಬ್ಬಳ್ಳಿ ಮಾದರಿ ಶಿವಮೊಗ್ಗದಲ್ಲಿಯು ಕ್ಷೇಮ ಕೇಂದ್ರಕ್ಕೆ ಮನವಿ, ಏನಿದು ಕೇಂದ್ರ?

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : December 21, 2022

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

ವಿದ್ಯಾರ್ಥಿನಿಯರಿಗೆ ಉಪನ್ಯಾಸಕನಿಂದ ಮೆಸೇಜ್‌ ಆರೋಪ, ಕಾಲೇಜು ಮುಂದೆ ಆಕ್ರೋಶ

ವಿದ್ಯಾರ್ಥಿನಿಯರಿಗೆ ಉಪನ್ಯಾಸಕನಿಂದ ಮೆಸೇಜ್‌ ಆರೋಪ, ಕಾಲೇಜು ಮುಂದೆ ಆಕ್ರೋಶ

ಭದ್ರಾವತಿಯಲ್ಲಿ 20 ವರ್ಷದ ಯುವಕ ಅರೆಸ್ಟ್‌, ಈತನ ಮೇಲಿವೆ 11 ಕೇಸ್‌, ಏನೇನು?

ಭದ್ರಾವತಿಯಲ್ಲಿ 20 ವರ್ಷದ ಯುವಕ ಅರೆಸ್ಟ್‌, ಈತನ ಮೇಲಿವೆ 11 ಕೇಸ್‌, ಏನೇನು?

ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತೂ ಮಳೆಯಾಗುತ್ತಾ? ಇಲ್ಲಿದೆ ಇಂದಿನ ಹವಾಮಾನ ವರದಿ

ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತೂ ಮಳೆಯಾಗುತ್ತಾ? ಇಲ್ಲಿದೆ ಇಂದಿನ ಹವಾಮಾನ ವರದಿ

ಇಂದಿನ ಪಂಚಾಂಗ – ಇವತ್ತು ಷಷ್ಠಿ, ರೋಹಿಣಿ ನಕ್ಷತ್ರದ ದಿನ, ಯಾವ್ಯಾವ ಸಮಯ ಯಾವಾಗಿದೆ?

ಇಂದಿನ ಪಂಚಾಂಗ – ಇವತ್ತು ಷಷ್ಠಿ, ರೋಹಿಣಿ ನಕ್ಷತ್ರದ ದಿನ, ಯಾವ್ಯಾವ ಸಮಯ ಯಾವಾಗಿದೆ?

Leave a Comment