SHIVAMOGGA LIVE NEWS | 21 DECEMBER 2022
ಸುದ್ದಿಯ ಹಿನ್ನೆಲೆಶಿವಮೊಗ್ಗ : ಶರಾವತಿ ಮುಳುಗಡೆ ಸಂತ್ರಸ್ಥರ (sharavathi issue) ಜಮೀನಿಗೆ ಹಕ್ಕುಪತ್ರ ನೀಡಲು ಅರಣ್ಯ ಭೂಮಿಯನ್ನು ಡಿನೋಟಿಫೈ ಮಾಡುವಂತೆ ಸಂಸದ ಬಿ.ವೈ.ರಾಘವೇಂದ್ರ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:

ಲೋಕಸಭೆಯ ಶೂನ್ಯ ವೇಳೆಯಲ್ಲಿ ಸಂಸದ ಬಿ.ವೈ.ರಾಘವೇಂದ್ರ ಅವರು ಶರಾವತಿ ಸಂತ್ರಸ್ಥರ ಸಮಸ್ಯೆ ಕುರಿತು ಗಮನ ಸೆಳೆದರು.
ಸಂಸದ ರಾಘವೇಂದ್ರ ಹೇಳಿದ್ದೇನು?
ಮಲೆನಾಡು ಪ್ರದೇಶದ 31 ವಿವಿಧ ಅರಣ್ಯ ಪ್ರದೇಶಗಳಲ್ಲಿ ಅರಣ್ಯ ಭೂಮಿಯನ್ನು ಸಾಗುವಳಿ ಮಾಡಲು ಶರಾವತಿ ಜಲವಿದ್ಯುತ್ ಯೋಜನೆಯಿಂದಾಗಿ ಮುಳುಗಡೆಯಾದ ಪ್ರದೇಶದಿಂದ ಸ್ಥಳಾಂತರಗೊಂಡ ಕುಟುಂಬಗಳಿಗೆ ಅವಕಾಶ ನೀಡಲಾಗಿತ್ತು. ಆದರೆ 1959ರಿಂದ ಕಂದಾಯ ದಾಖಲೆಗಳಲ್ಲಿ ರೈತರ ಹೆಸರು ನಮೂದಾಗಿಲ್ಲ. ಮಲೆನಾಡು ಪ್ರಾಂತ್ಯವಾದ ಶಿವಮೊಗ್ಗ ಜಿಲ್ಲೆಯ ಈ ಭಾಗದ ಪ್ರಮುಖ ರೈತರು ಈಡಿಗ, ಇತರೆ ಹಿಂದುಳಿದ ವರ್ಗ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಗಳಿಗೆ ಸೇರಿದವರಾಗಿದ್ದು, ಈ ಸಮಸ್ಯೆಯಿಂದ ಬಳಲುತ್ತಿದ್ದಾರೆ ಎಂದರು.

ಇದನ್ನೂ ಓದಿ – ಶರಾವತಿ ಸಂತ್ರಸ್ಥರ ಜಮೀನು ಸರ್ವೆ, ಸಮೀಪಕ್ಕೆ ಬಂತು ಡೆಡ್ ಲೈನ್, ಡಿಸಿ ಹೇಳಿದ್ದೇನು?
ಸಾವಿರಾರು ರೈತರ ಜಮೀನಿಗೆ ಹಕ್ಕುಪತ್ರ ನೀಡಬೇಕೆಂಬ ಬಹುದಿನಗಳ ಬೇಡಿಕೆ ಇಂದಿಗೂ ಈಡೇರಿಲ್ಲ. ಅರಣ್ಯ ಸಂರಕ್ಷಣಾ ಕಾಯ್ದೆ-1980 ಜಾರಿಗೆ ಬಂದ ನಂತರ ಅರಣ್ಯ ಭೂಮಿಯ ಡಿ-ನೋಟಿಫಿಕೇಶನ್ ಅನ್ನು ಕೇಂದ್ರ ಸರ್ಕಾರ ಮಾತ್ರ ಮಾಡಬಹುದಾಗಿದೆ. ಆದ್ದರಿಂದ ಈಗ ಕೇಂದ್ರ ಸರ್ಕಾರವು ಕರ್ನಾಟಕ ಸರ್ಕಾರದಿಂದ ವಿವರವಾದ ಪ್ರಸ್ತಾವನೆಯನ್ನು ಪಡೆದು ಭೂಮಿಯ ಹಕ್ಕುಗಳನ್ನು ಖಚಿತಪಡಿಸಿಕೊಳ್ಳಲು ಮತ್ತು ಆ ರೈತರ ಜೀವನೋಪಾಯವನ್ನು ಉಳಿಸಲು ಸೂಕ್ತ ಕ್ರಮ ಕೈಗೊಳ್ಳಬಹುದಾಗಿದೆ ಎಂದು ಸದನಕ್ಕೆ ತಿಳಿಸಿದರು.
ಇದನ್ನೂ ಓದಿ – ಶರಾವತಿ ಸಂತ್ರಸ್ಥರ ವಿಚಾರ, ಕಾಂಗ್ರೆಸ್ಗೆ 3 ಪ್ರಶ್ನೆ ಕೇಳಿದ ಸಂಸದ ರಾಘವೇಂದ್ರ
ತಕ್ಷಣ ಡಿ-ನೋಟಿಫೈಗೆ ಕ್ರಮ ಕೈಗೊಳ್ಳಿ
LATEST NEWS
- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

- ಬಿಆರ್ಪಿ ಲೆಜೆಂಡ್ಸ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಸ್ನೇಹ ಸಮ್ಮಿಲನ

- ನೆಹರು ರಸ್ತೆಯ ಸಭಾಂಗಣದಲ್ಲಿ ಒಂದು ದಿನದ ಕಾರ್ಯಾಗಾರ, ಯಾರೆಲ್ಲ ಬರ್ತಾರೆ? ಏನೆಲ್ಲ ಚರ್ಚೆಯಾಗಲಿದೆ?

About The Editor
ನಿತಿನ್ ಆರ್.ಕೈದೊಟ್ಲು






