ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 22 DECEMBER 2022
ಶಿವಮೊಗ್ಗ : ಚಾಲಕನ ನಿಯಂತ್ರಣ ತಪ್ಪಿ ಟ್ಯಾಂಕರ್ ಲಾರಿ (tanker lorry) ಪಲ್ಟಿಯಾಗಿದೆ. ಅದೃಷ್ಟವಶಾತ್ ಯಾವುದೆ ಪ್ರಾಣ ಹಾನಿ ಸಂಭವಿಸಿಲ್ಲ. ಇಂದು ಬೆಳಗ್ಗೆ ಘಟನೆ ಸಂಭವಿಸಿದೆ.
ಆಯನೂರು – ರಿಪ್ಪನ್ ಪೇಟೆ ಮಾರ್ಗ ಮಧ್ಯೆ 9ನೇ ಮೈಲಿಕಲ್ಲು ಬಳಿ ಘಟನೆ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಟ್ಯಾಂಕರ್ (tanker lorry) ರಸ್ತೆಯ ಬಲ ಭಾಗಕ್ಕೆ ಬಂದು ಪಲ್ಟಿಯಾಗಿದೆ. ಲಾರಿ ಶಿವಮೊಗ್ಗದ ಕಡೆಗೆ ಬರುತ್ತಿತ್ತು ಎಂದು ತಿಳಿದು ಬಂದಿದೆ.
ಇದನ್ನೂ ಓದಿ – ಶಿವಮೊಗ್ಗ ರಿಂಗ್ ರೋಡ್, ಜಿಲ್ಲೆಯ ಹಲವು ಹೆದ್ದಾರಿ ಅಭಿವೃದ್ಧಿಗೆ ಒಪ್ಪಿಗೆ, ಯಾವೆಲ್ಲ ರಸ್ತೆ ಅಭಿವೃದ್ಧಿಯಾಗುತ್ತೆ?
ವಿಚಾರ ತಿಳಿಯುತ್ತಿದ್ದಂತೆ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿದ್ದಾರೆ. ಲಾರಿಯಲ್ಲಿದ್ದ ತೈಲೋತ್ಪನ್ನ ಸೋರಿಕೆಯಾಗಿ ಯಾವುದೆ ಅಪಾಯವಾಗದಂತೆ ತಡೆಯಲು ಕ್ರಮ ಕೈಗೊಂಡಿದ್ದಾರೆ.
ಸುದ್ದಿ : ಶಶಿಕುಮಾರ್
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422