ಶಿವಮೊಗ್ಗ ಗಾರ್ಡನ್ ಏರಿಯಾದಲ್ಲಿ ಪೊಲೀಸ್ ದಾಳಿ, ಇಬ್ಬರು ಅರೆಸ್ಟ್

SHIVAMOGGA LIVE NEWS | 26 DECEMBER 2022

ಶಿವಮೊಗ್ಗ : ಗಾಂಜಾ ಮಾರಾಟ ಮಾಡುತ್ತಿರುವ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ (cops raid) ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಇವರಿಂದ ಗಾಂಜಾ, ನಗದು ಮತ್ತು ಮೊಬೈಲ್ ಫೋನುಗಳನ್ನು ವಶಕ್ಕೆ ಪಡೆಯಲಾಗಿದೆ. (ಈ ಸುದ್ದಿಯನ್ನು ಇನ್ನು 53 ಸೆಕೆಂಡ್‌ಗಳಲ್ಲಿ ಓದಿ ಮುಗಿಸಬಹುದು)

Shimoga Nanjappa hospital

ಶಿವಮೊಗ್ಗದ ಗಾರ್ಡನ್ ಏರಿಯಾದಲ್ಲಿ ಗಾಂಜಾ ಮಾರಾಟ ಮಾಡುತ್ತಿರುವ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ (cops raid) ನಡೆಸಿದ್ದಾರೆ. ಈ ವೇಳೆ ನಿಖಿಲ್ ಮತ್ತು ಭರತ್ ಎಂಬುವವರನ್ನು ವಶಕ್ಕೆ ಪಡೆದು ಪರಿಶೀಲನೆ ನಡೆಸಲಾಯಿತು. ಅವರ ಬಳಿ ಇದ್ದ ಪ್ಲಾಸ್ಟಿಕ್ ಕವರ್ ನಲ್ಲಿ ಸುಮಾರು 450 ಗ್ರಾಂ ಗಾಂಜಾ ಪತ್ತೆಯಾಗಿದೆ.

ಇದನ್ನೂ ಓದಿ – ಶಿವಮೊಗ್ಗದ ಮಹಿಳೆಯರೆ ಎಚ್ಚರ, ಹೀಗೂ ಕಳ್ಳತನವಾಗಬಹುದು ಲಕ್ಷಾಂತರ ಮೌಲ್ಯದ ನಿಮ್ಮ ಚಿನ್ನಾಭರಣ

ಮಾರಾಟ ಮಾಡುವ ಉದ್ದೇಶದಿಂದಲೆ ಇವರು ಗಾಂಜಾ ಹೊಂದಿದ್ದರು ಎಂದು ಹೇಳಲಾಗುತ್ತಿದೆ. ಆರೋಪಿಗಳನ್ನು ಬಂಧಿಸಲಾಗಿದ್ದು, ಸುಮಾರು 30 ಸಾವಿರ ರೂ. ಮೌಲ್ಯದ ಗಾಂಜಾ ವಶಕ್ಕೆ ಪಡೆಯಲಾಗಿದೆ. ಒಂದು ಮೊಬೈಲ್ ಫೋನ್ ಕೂಡ ವಶಪಡಿಸಿಕೊಳ್ಳಲಾಗಿದೆ.

ನೀವು ಲೇಖನದ ಮಧ್ಯಭಾಗದಲ್ಲಿದ್ದೀರಿ. ಈ ಸುದ್ದಿಯ ಮುಂದಿನ 2 ಪ್ಯಾರಾಗಳು ಕೆಳಗಿವೆ

ದೊಡ್ಡಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.

Shimoga nanjappa hospital

ಗೂಗಲ್‌ನಲ್ಲಿ ಶಿವಮೊಗ್ಗ ಲೈವ್ ಸುದ್ದಿಗಳು ನಿಮಗೆ ಮೊದಲು ಸಿಗಬೇಕೆ? ಕೆಳಗಿನ ಬಟನ್ ಒತ್ತಿ:

Police-General-Image

Leave a Comment