ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS |29 DECEMBER 2022
ಭದ್ರಾವತಿ : ವಿಧಾನಸಭೆ ಚುನಾವಣೆಗೆ ಜೆಡಿಎಸ್ ಸಿದ್ಧತೆ ಆರಂಭಿಸಿದೆ. ಪಕ್ಷದ ಹೈಕಮಾಂಡ್ (high command) ನಾಯಕರನ್ನು ಭೇಟಿಯಾಗಿ ಮಹತ್ವದ ಚರ್ಚೆ ನಡೆಸಿದ್ದಾರೆ.

ಭದ್ರಾವತಿ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಶಾರದಾ ಅಪ್ಪಾಜಿಗೌಡ ಅವರ ನೇತೃತ್ವದ ನಿಯೋಗ ಬೆಂಗಳೂರಿನಲ್ಲಿ ಜೆಡಿಎಸ್ ವರಿಷ್ಠರನ್ನು (high command) ಭೇಟಿಯಾಗಿದ್ದಾರೆ. ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ, ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದರು. ಚುನಾವಣಾ ರಣತಂತ್ರದ ಕುರಿತು ಚರ್ಚೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.
ಇದನ್ನೂ ಓದಿ – ಮಾಜಿ ಶಾಸಕ ಅಪ್ಪಾಜಿ ಗೌಡ ನಿಕಟವರ್ತಿಗೆ ಜೆಡಿಎಸ್ ಪಕ್ಷದಲ್ಲಿ ಮಹತ್ವದ ಹುದ್ದೆ
ಇದೆ ವೇಳೆ ಜೆಡಿಎಸ್ ಅಭ್ಯರ್ಥಿಯಾಗಿ ತಮ್ಮನ್ನು ಘೋಷಿಸಿದ್ದಕ್ಕೆ ಶಾರದಾ ಅಪ್ಪಾಜಿಗೌಡ ಮತ್ತು ಜೆಡಿಎಸ್ ರಾಜ್ಯ ಕಾರ್ಯದರ್ಶಿಯಾಗಿ ಜೆ.ಪಿ.ಯೋಗೇಶ್ ಅವನ್ನು ನೇಮಿಸಿದ್ದಕ್ಕೆ ಹೆಚ್.ಡಿ.ಕುಮಾರಸ್ವಾಮಿ ಮತ್ತು ಸಿ.ಎಂ.ಇಬ್ರಾಹಿಂ ಅವರಿಗೆ ಅಭಿನಂದನೆ ಸಲ್ಲಿಸಲಾಯಿತು.
ಇದನ್ನೂ ಓದಿ – ಮೈಸೂರು -ತಾಳಗುಪ್ಪ ಎಕ್ಸ್ ಪ್ರೆಸ್ ಸೇರಿ ಶಿವಮೊಗ್ಗದ 6 ರೈಲುಗಳ ಸಮಯದಲ್ಲಿ ಬದಲಾವಣೆ, ಯಾವೆಲ್ಲ ರೈಲುಗಳು?
ವಿಧಾನ ಪರಿಷತ ಸದಸ್ಯ ಭೋಜೇಗೌಡ, ಯುವ ಘಟಕದ ಜಿಲ್ಲಾಧ್ಯಕ್ಷ ಮಧುಕುಮಾರ್, ತಾಲೂಕು ಅಧ್ಯಕ್ಷ ಆರ್.ಕರುಣಾಮೂರ್ತಿ, ಭಾಗ್ಯಮ್ಮ, ಸಯ್ಯದ್ ಸಜ್ಮಲ್ ಸೇರಿದಂತೆ ಹಲವರು ಇದ್ದರು.

LATEST NEWS
- ಸರ್ವೆಗೆ ಹೋದಾಗ ಇಂಜಿನಿಯರ್, ಸರ್ವೇಯರ್ ಮೇಲೆ ಕೋಲು, ಕಲ್ಲುಗಳಿಂದ ದಾಳಿ

- ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

- ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

- ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್ ವಿಚಾರ

- ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್ ಅಪ್‌ಡೇಟ್

About The Editor
ನಿತಿನ್ ಆರ್.ಕೈದೊಟ್ಲು

CLICK & JOIN – OUR WHATSAPP GROUP














