ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS |31 DECEMBER 2022
ತೀರ್ಥಹಳ್ಳಿ : ಪಟ್ಟಣದ ಬಳಿ ಕಾಡಾನೆ (elephant in city) ಕಾಣಿಸಿಕೊಂಡಿದ್ದು ಆತಂಕ ಮೂಡಿಸಿದೆ. ಹೆದ್ದಾರಿಯಲ್ಲಿ ಸಂಚರಿಸಿರುವ ಆನೆ ಕೊನೆಗೆ ತುಂಗಾ ನದಿಗೆ ಇಳಿದಿದೆ. ಆನೆಗಾಗಿ ಅರಣ್ಯ ಇಲಾಖೆ ಅಧಿಕಾರಿಗಳು ಶೋಧ ಕಾರ್ಯ ನಡೆಸುತ್ತಿದ್ದಾರೆ.

ತೀರ್ಥಹಳ್ಳಿ ಪಟ್ಟಣದ (elephant in city) ಕುರುವಳ್ಳಿ ಸಮೀಪ ಕಾಡಾನೆ ಪ್ರತ್ಯಕ್ಷವಾಗಿದೆ. ವಿವಿಧೆಡೆ ಸಂಚರಿಸಿರುವ ಆನೆ ಎನ್.ಆರ್.ಪುರ ಕಡೆಯಿಂದ ಬಂದಿರಬಹುದು ಎಂದು ಶಂಕಿಸಲಾಗಿದೆ.
ಬೋರ್ಡ್, ಕಾಂಪೌಂಡ್ ಹಾನಿ
ಕಳೆದ ರಾತ್ರಿ ಮೇಳಿಗೆ ಗ್ರಾಮದ ಕೆಳಕೆರೆಯಲ್ಲಿ ಕಾಡಾನೆ ಕಾಣಿಸಿಕೊಂಡಿದೆ ಎಂದು ತಿಳಿದು ಬಂದಿದೆ. ಬೆಳಗಿನ ಜಾವ ಕುರುವಳ್ಳಿ ಬಳಿ ಪ್ರತ್ಯಕ್ಷವಾಗಿದೆ. ಕುರುವಳ್ಳಿ ಬಳಿ ಮುಖ್ಯ ರಸ್ತೆಯಲ್ಲಿ ಸಂಚರಿಸಿದೆ. ರಸ್ತೆ ಬದಿಯಲ್ಲಿ ಹಾಕಿದ್ದ ಅಂಗಡಿಯೊಂದರ ಬೋರ್ಡ್, ಕುರುವಳ್ಳಿಯಲ್ಲಿ ಕೌಂಪೌಂಡ್ ಹಾನಿಗೊಳಿಸಿದೆ ಎಂದು ಹೇಳಲಾಗುತ್ತಿದೆ. ಬಳಿಕ ತುಂಗಾ ನದಿಗೆ ಇಳಿದು ಹೋಗಿರುವ ಸಾದ್ಯತೆ ಇದೆ.
ಕುರುವಳ್ಳಿಯಲ್ಲಿ ಆನೆಯ ಹೆಜ್ಜೆ ಗುರುತು ಪತ್ತೆಯಾಗಿದೆ. ಎನ್.ಆರ್.ಪುರ ಭಾಗದಲ್ಲಿ ಕಳೆದ ಕೆಲವು ದಿನದಿಂದ ಆನೆ ಕಾಣಿಸಿಕೊಂಡಿತ್ತು. ಇದೆ ಆನೆ ತೀರ್ಥಹಳ್ಳಿ ಪಟ್ಟಣದ ಕಡೆಗೆ ಬಂದಿರಬೇಕು ಎಂದು ಅರಣ್ಯ ಇಲಾಖೆ ಅಧಿಕಾರಿಗಳು ಅನುಮಾನ ವ್ಯಕ್ತಪಡಿಸುತ್ತಿದ್ದಾರೆ.
ಇದನ್ನೂ ಓದಿ – ಚಿರತೆ ಭೀತಿ, ಕೆಪಿಸಿ ಕಾಲೋನಿಯಲ್ಲಿ ದನದ ಮೇಲೆ ದಾಳಿ
ತೀರ್ಥಹಳ್ಳಿ ಪಟ್ಟಣದ ಬಳಿ ಆನೆ ಕಾಣಿಸಿಕೊಂಡಿರುವ ವಿಚಾರ ತಿಳಿದು ಸ್ಥಳೀಯರು ಆತಂಕಕ್ಕೀಡಾಗಿದ್ದಾರೆ. ವಿಚಾರ ತಿಳಿಯುತ್ತಿದ್ದಂತೆ ಅರಣ್ಯ ಇಲಾಖೆ ಅಧಿಕಾರಿಗಳು ಆನೆಗಾಗಿ ಶೋಧ ಕಾರ್ಯ ನಡೆಸುತ್ತಿದ್ದಾರೆ.

LATEST NEWS
- ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಎಲ್ಲೆಲ್ಲಿ ಏನೇನು ಹಾನಿಯಾಗಿದೆ? ಇಲ್ಲಿದೆ ಡಿಟೇಲ್ಸ್

- ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 18 ಮಾರ್ಚ್ 2026 – ಅಡಿಕೆ ಧಾರಣೆ

- ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

- ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

- ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

About The Editor
ನಿತಿನ್ ಆರ್.ಕೈದೊಟ್ಲು

CLICK & JOIN – OUR WHATSAPP GROUP














