ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS |31 DECEMBER 2022
ಸಾಗರ : ರಸ್ತೆ ಅಗಲೀಕರಣ ಕಾಮಗಾರಿಯ ಗುಂಡಿಗೆ (road work) ಬಿದ್ದು ಕಾರಿನಲ್ಲಿದ್ದ ನಾಲ್ವರಿಗೆ ಗಾಯವಾಗಿದೆ. ಕಾಮಗಾರಿ ಸ್ಥಳದಲ್ಲಿ ಸೂಚನಾ ಫಲಕಗಳಿಲ್ಲದಿರುವುದು ಘಟನೆ ಕಾರಣ ಎಂದು ಆರೋಪಿಸಲಾಗಿದೆ.
ಸಾಗರ ಪಟ್ಟಣದ ಶಿವಮೊಗ್ಗ ರಸ್ತೆಯಲ್ಲಿ ಘಟನೆ ಸಂಭವಿಸಿದೆ. ವೇಗವಾಗಿ ಬಂದ ಕಾರು ರಸ್ತೆ ಕಾಮಗಾರಿಗಾಗಿ ತೆಗೆಯಲಾಗಿದ್ದ ಗುಂಡಿಗೆ (road work) ಬಿದ್ದಿದೆ. ಕಾರಿನಲ್ಲಿದ್ದ ನಾಲ್ವರು ಗಾಯಗೊಂಡಿದ್ದಾರೆ. ಅವರಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಇದನ್ನೂ ಓದಿ – ರೈಲು ಪ್ರಯಾಣಿಕರಿಗೆ ಗುಡ್ ನ್ಯೂಸ್, ಮತ್ತೆ ಬರ್ತಿದೆ ವಿಸ್ಟಾಡೋಮ್, ವಿಶೇಷತೆಗಳೇನು?
ಕಾಮಗಾರಿ ಸ್ಥಳದಲ್ಲಿ ಸೂಚನಾ ಫಲಕಗಳಿಲ್ಲ. ಹಾಗಾಗಿ ವಾಹನ ಸವಾರರಿಗೆ ಗುಂಡಿಗಳಿರುವುದು ಗೊತ್ತಾಗುತ್ತಿಲ್ಲ. ಇದರಿಂದ ಅಪಘಾತ ಸಂಭವಿಸುತ್ತಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.
ಸೂಚನಾ ಫಲಕಗಳನ್ನು ಅಳವಡಿಸಿ
ಇನ್ನು, ನಗರಸಭೆಯ ಸಾಮಾನ್ಯ ಸಭೆಯಲ್ಲಿ ವಿಚಾರ ಪ್ರಸ್ತಾಪ ಮಾಡಿದ ಶಾಸಕ ಹರತಾಳು ಹಾಲಪ್ಪ ಅವರು, ನಗರಸಭೆ ವ್ಯಾಪ್ತಿಯಲ್ಲಿ ಕಾಮಗಾರಿಗಳು ನಡೆಯುತ್ತಿವೆ. ಸ್ಥಳದಲ್ಲಿ ಸರಿಯಾದ ಸೂಚನಾ ಫಲಕಗಳು ಇಲ್ಲದೆ ಅಪಘಾತಗಳು ಸಂಭವಿಸುತ್ತಿವೆ. ಇದಕ್ಕೆ ಅಧಿಕಾರಿಗಳೆ ನೇರ ಹೊಣೆ. ಈ ಕೂಡಲೆ ಕಾಮಗಾರಿ ಸ್ಥಳಗಳಲ್ಲಿ ಸೂಚನಾ ಫಲಕ ಅಳವಡಿಸಬೇಕು ಎಂದು ಸೂಚನೆ ನೀಡಿದರು.