ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS |2 JANUARY 2023
ಶಿವಮೊಗ್ಗ : ರಸ್ತೆ ಪಕ್ಕದಲ್ಲಿ ನಿಲ್ಲಿಸಿದ್ದ ಕಾರಿನಲ್ಲಿ ಮೊಬೈಲ್ ಸ್ಫೋಟಗೊಂಡಿದೆ (mobile blast). ಕಾರಿನ ಸೀಟ್ ಸುಟ್ಟು ಹೋಗಿದೆ. ಅದೃಷ್ಟವಶಾತ್ ಯಾರಿಗೂ ತೊಂದರೆಯಾಗಿಲ್ಲ.
ನಗರದ ದುರ್ಗಿಗುಡಿ ಸರ್ಕಾರಿ ಶಾಲೆ ಬಳಿ ಮಧ್ಯಾಹ್ನ ಘಟನೆ ಸಂಭವಿಸಿದೆ. ರಿಪ್ಪನ್ ಪೇಟೆಯ ಕೃಷ್ಣ ಎಂಬುವವರಿಗೆ ಸೇರಿದ ಕಾರಿನಲ್ಲಿ ಮೊಬೈಲ್ ಸ್ಪೋಟಗೊಂಡಿದೆ (mobile blast).
ಹೇಗಾಯ್ತು ಘಟನೆ?
ನಗರದ ಸರ್ಜಿ ಆಸ್ಪತ್ರೆಯಲ್ಲಿ ರೋಗಿಯೊಬ್ಬರನ್ನು ನೋಡಲು ಕೃಷ್ಣ ಎಂಬುವವರು ಆಗಮಿಸಿದ್ದರು. ಕಾರಿನಲ್ಲಿ ಚಾಲಕನ ಸೀಟಿನ ಹಿಂಬದಿಯಲ್ಲಿರುವ ಪೌಚ್ ನಲ್ಲಿ ಮೊಬೈಲ್ ಇಟ್ಟಿದ್ದರು. ಕಾರನ್ನು ದುರ್ಗಿಗುಡಿ ಸರ್ಕಾರಿ ಶಾಲೆ ಪಕ್ಕದಲ್ಲಿ ಪಾರ್ಕಿಂಗ್ ಮಾಡಿದ್ದರು.
ಇದನ್ನೂ ಓದಿ – ಸಂಭ್ರಮವಿದ್ದ ಮನೆಯಲ್ಲಿ ಸಂಭವಿಸಿತು ದುರ್ಘಟನೆ, ಆಗಿದ್ದೇನು? ಇಬ್ಬರ ಸಾವಿಗೆ ಕಾರಣವೇನು?
ಮಧ್ಯಾಹ್ನ ಮೊಬೈಲ್ ಸ್ಪೋಟಗೊಂಡು, ಬೆಂಕಿ ಹೊತ್ತುಕೊಂಡಿದೆ. ಸೀಟಿನ ಹಿಂಬದಿ ಸುಟ್ಟು ಹೋಗಿದೆ. ಕಾರಿನ ರೂಫ್ ಗು ಹಾನಿಯಾಗಿದೆ. ಘಟನೆ ವೇಳೆ ಕಾರಿನಲ್ಲಿ ಆಗ ಯಾರೂ ಇರಲಿಲ್ಲ.
LATEST NEWS
- ಬೆಟ್ಟೆ, ರಾಶಿ ರೇಟ್ ಇವತ್ತು ಎಷ್ಟಿದೆ? ಸರಕು ದರ ಮತ್ತೆ ಹೆಚ್ಚಾಯ್ತಾ? – 3 ಮಾರ್ಚ್ 2026

- ಶಿವಮೊಗ್ಗದಲ್ಲಿ ರಂಗ ಹಬ್ಬ, ನಾಲ್ಕು ದಿನ ನಾಟಕೋತ್ಸವ, ಯಾವ್ಯಾವ ದಿನ ಯಾವ ನಾಟಕವಿದೆ?

- ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ವ್ಯಕ್ತಿಗೆ ಬಿಸಿ ಮುಟ್ಟಿಸಿದ ಅಕ್ಕ ಪಡೆ, ಆಗಿದ್ದೇನು?

- ದುರ್ಗಿಗುಡಿಯಲ್ಲಿ ವೈಭವದ ರಥೋತ್ಸವ, ಈ ಬಾರಿ ಉತ್ಸವ ಬೆಳಗ್ಗೆ ನಡೆದಿದ್ದೇಕೆ?

- ₹1,00,000 ಲಂಚದ ಹಣದೊಂದಿಗೆ ಲೋಕಾಯುಕ್ತರಿಗೆ ಸಿಕ್ಕಿಬಿದ್ದ ಅಧಿಕಾರಿ, ಮಧ್ಯವರ್ತಿ

About The Editor
ನಿತಿನ್ ಆರ್.ಕೈದೊಟ್ಲು


CLICK & JOIN – OUR WHATSAPP GROUP



