ಸಾಗರದಲ್ಲಿ ಮನೆಗೆ ಬೆಂಕಿ, ಧಗಧಗ ಹೊತ್ತಿ ಉರಿದ ವಸ್ತುಗಳು, ಅಗ್ನಿಶಾಮಕ ಸಿಬ್ಬಂದಿ, ಯುವಕರ ಹರಸಾಹಸ

SHIVAMOGGA LIVE NEWS |2 JANUARY 2023

ಸಾಗರ : ಮನೆಯೊಂದರಲ್ಲಿ ಅಗ್ನಿ (fire at house) ಅವಘಡ ಸಂಭವಿಸಿದೆ. ಬೆಂಕಿ ನಂದಿಸಲು ಸ್ಥಳೀಯರು ಮತ್ತು ಆಗ್ನಿಶಾಮಕ ಸಿಬ್ಬಂದಿ ಹರಸಾಹಸ ಪಡಬೇಕಾಯಿತು. ಘಟನೆಯಿಂದಾಗಿ ಸಾಗರ – ಸಿಗಂದೂರು ರಸ್ತೆಯಲ್ಲಿ ಕೆಲ ಹೊತ್ತು ವಾಹನ ಸಂಚಾರಕ್ಕೆ ಅಡಚಣೆ ಉಂಟಾಯಿತು.

ಸುದ್ದಿಯ ಮುಂದಿನ ಭಾಗ ಕೆಳಗಿದೆ

ಸಾಗರದ ಮಾರ್ಕೆಟ್ ರಸ್ತೆಯ ಶಿವಪ್ಪ ನಾಯಕ ಸರ್ಕಲ್ ಬಳಿ ಗಣೇಶ್ ಎಂಬುವವರ ಮನೆಯಲ್ಲಿ ಬೆಂಕಿ (fire at house) ಹೊತ್ತುಕೊಂಡಿದೆ. ಸುತ್ತಮುತ್ತಲು ದಟ್ಟ ಹೊಗೆ ಆವರಿಸಿಕೊಂಡಿತ್ತು. ವಿಚಾರ ತಿಳಿಯುತ್ತಿದ್ದಂತೆ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಲು ಯತ್ನಿಸಿದರು.

ಬೆಂಕಿ ನಂದಿಸುವ ಕಾರ್ಯದಲ್ಲಿ ಸ್ಥಳೀಯ ಯುವಕರು ಅಗ್ನಿಶಾಮಕ ಸಿಬ್ಬಂದಿಗೆ ನೆರವಾದರು. ಬಹು ಹೊತ್ತಿನ ಬಳಿಕ ಬೆಂಕಿ ತಹಬಂದಿಗೆ ಬಂದಿದೆ. ಈ ನಡುವೆ ಜೀವದ ಹಂಗು ತೊರೆದು ಯುವಕರು ಮನೆಯಲ್ಲಿದ್ದ ಸಿಲಿಂಡರ್ ಹೊರಗೆ ತಂದಿದ್ದಾರೆ.

Nanjappa Hospital Advertisement

ಇದನ್ನೂ ಓದಿ – ದುರ್ಗಿಗುಡಿಯಲ್ಲಿ ಕಾರಿನಲ್ಲಿದ್ದ ಮೊಬೈಲ್ ಸ್ಪೋಟ, ಚಾಲಕನ ಸೀಟಿಗೆ ಬೆಂಕಿ

ಇನ್ನು, ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ಅವರು ಸ್ಥಳಕ್ಕೆ ಭೇಟಿ ನೀಡಿದರು. ಗಣೇಶ್ ಅವರ ಕುಟುಂಬಕ್ಕೆ ಧೈರ್ಯ ಹೇಳಿದರು. ಬೆಂಕಿ ನಂದಿಸಿದ ಅಗ್ನಿಶಾಮಕ ಸಿಬ್ಬಂದಿ, ಅವರಿಗೆ ನೆರವಾದ ಯುವಕರಿಗೆ ಅಭಿನಂದನೆ ತಿಳಿಸಿದರು.

ಅಗ್ನಿ ಅವಘಡದಿಂದ ಸಾಗರ ಸಿಗಂದರೂ ರಸ್ತೆಯಲ್ಲಿ ಕೆಲಕಾಲ ವಾಹನ ಸಂಚಾರಕ್ಕೆ ಅಡಚಣೆ ಉಂಟಾಗಿತ್ತು.

📍 ನಿಮ್ಮೂರ ಸುದ್ದಿ
ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್‌ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ.
Shivamogga Live Promotion

Leave a Comment