ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 3 JANUARY 2023
SHIMOGA : ಎರಡು ಪ್ರತ್ಯೇಕ ಪ್ರಕರಣದಲ್ಲಿ ಚಿಕಿತ್ಸೆಗೆಂದು ಶಿವಮೊಗ್ಗದ ಎರಡು ಆಸ್ಪತ್ರೆಗೆ ಬಂದಿದ್ದ ಇಬ್ಬರು ರೋಗಿಗಳು ನಾಪತ್ತೆಯಾಗಿದ್ದಾರೆ (missing). ಈ ಸಂಬಂಧ ಎರಡು ದೂರು ದಾಖಲಾಗಿದೆ.
ಪ್ರಕರಣ 1 – ಮಾನಸಿಕ ಅಸ್ವಸ್ಥೆ ನಾಪತ್ತೆ
ಶಿವಮೊಗ್ಗ ಮಾನಸ ನರ್ಸಿಂಗ್ ಹೋಂನಲ್ಲಿ ಚಿಕಿತ್ಸೆಗೆಂದು ಬಂದಿದ್ದ ಮಾನಸಿಕ ಅಸ್ವಸ್ಥ ಮಹಿಳೆಯೊಬ್ಬರು ನಾಪತ್ತೆಯಾಗಿದ್ದಾರೆ. ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕು ಚಿಗಳಿಕಟ್ಟೆ ಗ್ರಾಮದ ದುರ್ಗಮ್ಮ (50) ನಾಪತ್ತೆಯಾಗಿರುವ ಮಹಿಳೆ. ಚಿಕಿತ್ಸೆಗೆಂದು ಮಾನಸ ನರ್ಸಿಂಗ್ ಹೋಂನಲ್ಲಿ ದಾಖಲಾಗಿದ್ದರು.
ಡಿ.25ರಂದು ಆಸ್ಪತ್ರೆಯಿಂದ ದುರ್ಗಮ್ಮ ತಪ್ಪಿಸಿಕೊಂಡಿದ್ದಾರೆ (missing). ಇವರ ಸುಳಿವು ಸಿಕ್ಕಲ್ಲಿ ದೊಡ್ಡಪೇಟೆ ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಪ್ರಕರಣ 2 – ಚಿಕಿತ್ಸೆಗೆ ಬಂದವರು ಕಾಣೆ
ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಬಂದಿದ್ದ ವ್ಯಕ್ತಿಯೊಬ್ಬರು ಕಾಣೆಯಾಗಿದ್ದಾರೆ. ಸೊರಬ ತಾಲೂಕಿನ ರಮೇಶ್ (35) ನಾಪತ್ತೆಯಾಗಿದ್ದಾರೆ. ನ.19ರಂದು ರಮೇಶ್ ಅವರು ಮೆಗ್ಗಾನ್ ಆಸ್ಪತ್ರೆಗೆ ಬಂದಿದ್ದರು. ಆ ಬಳಿಕ ಅವರು ನಾಪತ್ತೆಯಾಗಿದ್ದಾರೆ. ಇವರ ಕುರಿತು ಸುಳಿವು ಸಿಕ್ಕಲ್ಲಿ ದೊಡ್ಡಪೇಟೆ ಠಾಣೆಗೆ ಮಾಹಿತಿ ನೀಡುವಂತೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಇದನ್ನೂ ಓದಿ – ಮನೆಯ ಶೌಚಾಲಯದಲ್ಲಿ ನೇಣು ಬಿಗಿದು ವ್ಯಕ್ತಿ ಸಾವು
LATEST NEWS
- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

- ಬೆಟ್ಟೆ, ರಾಶಿ ರೇಟ್ ಇವತ್ತು ಎಷ್ಟಿದೆ? ಸರಕು ದರ ಮತ್ತೆ ಹೆಚ್ಚಾಯ್ತಾ? – 3 ಮಾರ್ಚ್ 2026

- ಶಿವಮೊಗ್ಗದಲ್ಲಿ ರಂಗ ಹಬ್ಬ, ನಾಲ್ಕು ದಿನ ನಾಟಕೋತ್ಸವ, ಯಾವ್ಯಾವ ದಿನ ಯಾವ ನಾಟಕವಿದೆ?

- ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ವ್ಯಕ್ತಿಗೆ ಬಿಸಿ ಮುಟ್ಟಿಸಿದ ಅಕ್ಕ ಪಡೆ, ಆಗಿದ್ದೇನು?

- ದುರ್ಗಿಗುಡಿಯಲ್ಲಿ ವೈಭವದ ರಥೋತ್ಸವ, ಈ ಬಾರಿ ಉತ್ಸವ ಬೆಳಗ್ಗೆ ನಡೆದಿದ್ದೇಕೆ?

About The Editor
ನಿತಿನ್ ಆರ್.ಕೈದೊಟ್ಲು


CLICK & JOIN – OUR WHATSAPP GROUP



